ಉತ್ತರ ಕನ್ನಡ| ರಿಶೆಲ್ ಕಿಸ್ತೋದ್ ಆತ್ಮಹತ್ಯೆ ಪ್ರಕರಣ: ಪ್ರಮುಖ ಆರೋಪಿ ಚಿರಾಗ್ ಚೆನ್ನೈನಲ್ಲಿ ಬಂಧನ

Date:

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದ್ದ ಕದ್ರಾದ ಯುವತಿ ರಿಶೆಲ್ ಕಿಸ್ತೋದ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಚಿರಾಗ್‌ನನ್ನು ಪೊಲೀಸರು ತಮಿಳುನಾಡಿನ ಚೆನ್ನೈನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಬಂಧಿತ ಆರೋಪಿಯನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ದೀಪನ್ ಎಂ.ಎನ್. ಅವರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಅವರು, ಆರೋಪಿಯ ಪತ್ತೆಗಾಗಿ ಪೊಲೀಸರು ಹಗಲಿರುಳು ಶ್ರಮಿಸಿದ್ದಾರೆ. ತನಿಖೆಗಾಗಿ ಮೂವರು ಇನ್ಸ್‌ಪೆಕ್ಟರ್‌ಗಳು ಹಾಗೂ ಆರು ಪಿ.ಎಸ್.ಐಗಳನ್ನೊಳಗೊಂಡ ವಿಶೇಷ ತಂಡಗಳನ್ನು ರಚಿಸಲಾಗಿತ್ತು.

ಈ ತಂಡಗಳು ಆರೋಪಿಯ ಜಾಡನ್ನು ಹಿಡಿದು ಕಾರ್ಯಾಚರಣೆ ನಡೆಸಿದ್ದವು ಎಂದು ತಿಳಿಸಿದರು. ಆರೋಪಿ ಚಿರಾಗ್ ಕಾನೂನಿನಿಂದ ತಪ್ಪಿಸಿಕೊಳ್ಳಲು ಬೆಂಗಳೂರು, ಪುಣೆ, ಮಹಾರಾಷ್ಟ್ರ ಹಾಗೂ ಹೈದರಾಬಾದ್‌ ಸೇರಿದಂತೆ ವಿವಿಧೆಡೆ ಸಂಚರಿಸಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಹೊನ್ನಾವರ | ಇಡಗುಂಜಿ ಮಹಾಗಣಪತಿ ಸನ್ನಿಧಿಯಲ್ಲಿ ಅರ್ಚಕರ ಕಾಳಗ: ದಕ್ಷಿಣೆ ಹಣಕ್ಕಾಗಿ ಭಕ್ತರ ಮುಂದೆಯೇ ತಳ್ಳಾಟ!

ಈ ಅವಧಿಯಲ್ಲಿ ಆತನಿಗೆ ಆಶ್ರಯ ನೀಡಿ, ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆತನ ಸಂಬಂಧಿ ಸುವರ್ಣ ಹಾಗೂ ನಿತಿನ್ ಗಾಂವ್ಕರ್ ಅವರ ಮೇಲೆಯೂ ಪ್ರಕರಣ ದಾಖಲಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಇದಲ್ಲದೆ, ಈ ಸೂಕ್ಷ್ಮ ಪ್ರಕರಣದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದವರ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್ಪಿಯವರು ಎಚ್ಚರಿಸಿದ್ದಾರೆ.

ಪ್ರಕರಣದ ಆರಂಭಿಕ ಹಂತದ ತನಿಖೆಯಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ, ಈಗಾಗಲೇ ಸಂಬಂಧಪಟ್ಟ ಪಿ.ಎಸ್.ಐ ಅವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆಯೂ ಆಂತರಿಕ ತನಿಖೆ ಮುಂದುವರಿದಿದೆ.

ಸದ್ಯಕ್ಕೆ ಮರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಆರೋಪಿ ಮತ್ತು ಮೃತ ಯುವತಿಯ ಮೊಬೈಲ್ ಫೋನ್‌ಗಳ ತಾಂತ್ರಿಕ ತನಿಖೆ ಪೂರ್ಣಗೊಂಡ ನಂತರ ಸಮಗ್ರ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ದೀಪನ್ ಎಂ.ಎನ್. ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...

ಕೋಲಾರ | ಬಿಸಿಯೂಟ ಮಾತೆಯರಿಗೆ ವೇತನ ವಿಲ್ಲದೆ ಪರದಾಟ ; ಅಧಿಕಾರಿಗಳ ವಿರುದ್ಧ ಕಲ್ವಮಂಜಲಿರಾಮುಶಿವಣ್ಣ ಆಕ್ರೋಶ

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಸಿಯೂಟ ಮಾತೆಯರಿಗೆ ಕಳೆದ...

ಬಾಗೇಪಲ್ಲಿ ಮದ್ಯದಂಗಡಿ ಕೊಲೆ ಪ್ರಕರಣದ ಆರೋಪಿ ಬಂಧನ

ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿಯ ಮದ್ಯ ಮಾರಾಟ ಮಳಿಗೆಯಲ್ಲಿ ಸೆ.5ರಂದು ನಡೆದ...

ಗ್ರೌಂಡ್ ರಿಪೋರ್ಟ್ | ಮೆರವಣಿಗೆಯ ದಾರಿಯಿಂದ ರಾಜಕೀಯದ ದಾರಿಗೆ: ಟಿ. ನರಸೀಪುರದಲ್ಲಿ ಸಹಬಾಳ್ವೆಯ ಪ್ರಶ್ನೆ

2023ರ ವೇಣುಗೋಪಾಲ ನಾಯಕ್ ಹತ್ಯೆಯಿಂದ 2026ರ ಗಣೇಶೋತ್ಸವ ವಿವಾದದವರೆಗೆ; ಪೊಲೀಸ್ ಎಚ್ಚರಿಕೆ,...