ರಾಯಚೂರು | ಅಕ್ರಮ ಆಗಿಲ್ಲ; ಬಿಇಒ ಸುಖದೇವ್ ಅಮಾನತು ದುರದೃಷ್ಟಕರ: ರೈತ ಸಿದ್ದಪ್ಪ

Date:

“ದೇವದುರ್ಗ ತಾಲ್ಲೂಕಿನ ಊಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೂಮಿ ಖರೀದಿಯ ವಿಷಯದಲ್ಲಿ ಹಣ ದುರುಪಯೋಗ ಭ್ರಷ್ಟಾಚಾರ ಆರೋಪದ ಮೇಲೆ ಬಿಇಒ ಸುಖದೇವ್ ಅಮಾನತು ಮಾಡಿರುವುದು ಸರಿಯಲ್ಲ” ಎಂದು ರೈತ ಸಿದ್ದಪ್ಪ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಮಾಧ್ಯಮಗಳ ಜೊತೆ ಅವರು ಮಾತನಾಡಿ, ಶೈಕ್ಷಣಿಕ ಹಿತದೃಷ್ಟಿಯಿಂದ ಕೈಗಾರಿಕಾ ಪ್ರದೇಶ ಇದ್ದರೂ ಅತ್ಯಂತ ಕಡಿಮೆ ಬೆಲೆಗೆ ಭೂಮಿಯನ್ನು ಮಾರಾಟ ಮಾಡಿದ್ದೇನೆ. ಇದರಲ್ಲಿ ಯಾವುದೇ ಹಣ ದುರುಪಯೋಗ ಆಗಿಲ್ಲ ಎಂದು ಸ್ಪಷ್ಟನೆ ನೀಡಿದರು.15 ಲಕ್ಷದ ಎರಡು ಚೆಕಗಳ ಮೂಲಕ ನನ್ನ ಖಾತೆಗೆ ಹಣ ಸೇರಿದೆ. ನಾನು ಯಾವುದೇ ಅಧಿಕಾರಿಗಳಿಗೆ ಹಣ ನೀಡಿಲ್ಲ. ಊಟಿ ಗ್ರಾಮದ ಶಾಲೆಗಾಗಿ ಬಿಇಓ ಅವರು ನಿರಂತರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರು, ಹಲವು ಸಂಘಟನೆಯ ಮುಖಂಡರೊಂದಿಗೆ ಸಭೆ ಮಾಡಿದ್ದಾರೆ. ಯಾವುದೇ ನಿರೀಕ್ಷೆಗಳಿಲ್ಲದೆ ನಮ್ಮ ಗ್ರಾಮದ ಮಕ್ಕಳಿಗಾಗಿ ಶ್ರಮವಹಿಸಿದ್ದಾರೆ. ನನ್ನ ಹೆಸರಿನಲ್ಲಿದ್ದ ಎರಡು ಎಕರೆ ಜಮೀನನ್ನು ಆರ್ ಟಿ ಜಿ ಎಸ್ ಟಿ ಮೂಲಕ ರಾಜ್ಯಪಾಲರ ಹೆಸರಿಗೆ ನೋಂದಣಿ ಮಾಡಿದ್ದೇನೆ.ಬಿಇಓ ಸುಖದೇವ್ ಭ್ರಷ್ಟಾಚಾರ ಎಸಗಿಲ್ಲ. ಸರಿಯಾಗಿ ತನಿಖೆ ನಡೆಸದೆ ಹಣ ದುರುಪಯೋಗ ಎಂಬ ಕಾರಣಕ್ಕೆ ಅವರನ್ನು ಅಮಾನತ್ತು ಮಾಡಿರುವುದು ದುರಾದೃಷ್ಟಕರ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕರ್ನಾಟಕ ಪ್ರಾಂತ ರೈತ ಸಂಘಟನೆ ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ ಮಾತನಾಡಿ‌, “ಸರ್ಕಾರ ಭೂಸ್ವಾಧೀನ ಮಾಡುವಾಗ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಭೂ ಸ್ವಾಧೀನಕ್ಕೆ ಪ್ರತ್ಯೇಕ ದರ ನಿಗದಿ ಮಾಡಿ ಸರಕಾರ ಅದೇಶ ಮಾಡಿದೆ. ಜಿಲ್ಲಾಧಿಕಾರಿಗಳು ದೇವದುರ್ಗ ತಾಲೂಕಿನ ಊಟಿ ಚಿನ್ನದ ಗಣಿ ಕೈಗಾರಿಕಾ ಪ್ರದೇಶವಿದ್ದರೂ ಪ್ರತಿ ಎಕರೆಗೆ ಕೇವಲ 12 ಲಕ್ಷ ಬೆಲೆ ನಿಗದಿ ಮಾಡಿರುವುದು ರೈತರಿಗೆ ಮಾಡಿದ ಅನ್ಯಾಯವಾಗಿದೆ. ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕರು ಊಟಿ ಗ್ರಾಮದ ಶಾಲೆಗೆ ಎರಡು ಎಕರೆ ಭೂಮಿ ಖರೀದಿಗಾಗಿ 30 ಲಕ್ಷ ಹಣ ಜಿಲ್ಲಾಧಿಕಾರಿಗಳ ಖಾತೆಗೆ ಚೆಕ್ ಮೂಲಕ ಜಮಾ ಮಾಡಿದ್ದಾರೆ.

ದರ ನಿಗದಿಗಾಗಿ ಜಿಲ್ಲಾಧಿಕಾರಿಗಳು ದಿನಾಂಕ 4/09/ 2023 ರಂದು ಸಭೆ ಕರೆದಿದ್ದಾರೆ. ಸಭೆಯಲ್ಲಿ ಊಟಿ ಕೈಗಾರಿಕಾ‌ ಪ್ರದೇಶವಿದ್ದರೂ ಪ್ರತಿ ಎಕರೆಗೆ 12 ಲಕ್ಷದಂತೆ ದರ ನಿಗದಿ ಮಾಡಿದ್ದರಿಂದ ಸಭೆಯಲ್ಲಿ ಅಧಿಕಾರಿಗಳು ಮತ್ತು ರೈತರ ಮಧ್ಯೆ ವಿವಾದ ಸೃಷ್ಠಿಯಾಗಿದೆ. ಭೂ ಸ್ವಾಧೀನ ಪ್ರಕ್ರಿಯೆಯಂತೆ ಭೂಮಿ ಖರೀದಿಸಬೇಕಾದ ಜಿಲ್ಲಾಧಿಕಾರಿಗಳು ಹಟ್ಟಿ ಚಿನ್ನದ ಗಣಿ ಕಂಪನಿ ನೀಡಿದ 30 ಲಕ್ಷ ಹಣ ವಾಪಸ್ ಕಂಪನಿ ಖಾತೆಗೆ ಜಮೆ ಮಾಡಿರುವ ಜಿಲ್ಲಾಧಿಕಾರಿಗಳ ನಡೆಗೆ ಕರ್ನಾಟಕ ಪ್ರಾಂತ ರೈತ ಸಂಘ ಬಲವಾಗಿ ಖಂಡಿಸುತ್ತದೆ.

ಊಟಿ ಶಾಲೆಯ ಜಮೀನ ಖರೀದಿಗಾಗಿ ಬಿಇಓ ಸುಖದೇವ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತೊಮ್ಮೆ ಕಂಪನಿ ವ್ಯವಸ್ಥಾಪಕರನ್ನ ಭೇಟಿ ಮಾಡಿ ಊಟಿ ಶಾಲೆಯ ಜಮೀನು ಖರೀದಿಗಾಗಿ ಮನವಿ ಮಾಡಿಕೊಂಡಿದ್ದಾರೆ. ಮನವಿಗೆ ಸ್ಪಂದಿಸಿದ ವ್ಯವಸ್ಥಾಪಕರು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಇಲಾಖೆ ಖಾತೆಗೆ 30 ಲಕ್ಷ ರೂ ಹಣ ಚೆಕ್ ಮೂಲಕ ಜಮಾ ಮಾಡಿದ್ದಾರೆ.

ಕಂಪನಿ ನೀಡಿದ 30 ಲಕ್ಷ ಹಣವನ್ನ ಎರಡು ಎಕರೆ ಭೂಮಿ ಮಾರಾಟ ಮಾಡಿದ ರೈತ ಸಿದ್ದಪ್ಪನಿಗೆ 15 ಲಕ್ಷದಂತೆ ಎರಡು ಚಕ್ ಮೂಲಕ 30 ಲಕ್ಷ ಹಣವನ್ನ ಶಾಲಾ ಮುಖ್ಯಗುರುಗಳು ಹಾಗೂ ಶಾಲಾ ಮೇಲುಸ್ತುವಾರಿ ಖಾತೆಯ ಮೂಲಕ ರೈತ ಸಿದ್ದಪ್ಪನ ಖಾತೆಗೆ ಜಮಾ ಮಾಡಿದ್ದಾರೆ. ಬಿಇಓ ಅವರು ಜಿಲ್ಲಾಧಿಕಾರಿ ಸೇರಿದಂತೆ ತಾಲೂಕ ಮಟ್ಟದ ಅಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿರುವ ದಾಖಲೆಗಳಿವೆ.ಇದನ್ನ ರೈತ ಕೂಡ ಯಾವುದೆ ಹಣ ದುರುಪಯೋಗ ಮಾಡದೆ ಸಂಪೂರ್ಣ ಹಣ ನನ್ನ ಖಾತೆಗೆ ಜಮೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಭೂ ಸ್ವಾಧೀನ ಪ್ರಕ್ರಿಯೆಗೆ ಸಂಭಂದಿಸಿದಂತೆ ಕೆಲವು ನಿಯಮಗಳನ್ನು ಜಿಲ್ಲಾಧಿಕಾರಿಗಳು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಕೂಡ ತಪ್ಪಾಗಿದೆ. ಆದರೆ ಸರಕಾರ ಮತ್ತು ಶಿಕ್ಷಣ ಇಲಾಖೆ ದೂರನ್ನ ಸರಿಯಾಗಿ ಪರಿಶೀಲನೆ ಮಾಡದೆ ರಾಜಕೀಯ ಪ್ರಭಾವ ಬಳಿಸಿ ಯಾವುದೆ ಭ್ರಷ್ಟಾಚಾರ ಮಾಡದೆ ಇದ್ದರು ಕೇವಲ ಬಿಇಓ ಸುಖದೇವ್ ಅವರನ್ನ ಹೊಣೆಗಾರರನ್ನಾಗಿ ಮಾಡಿ ಅಮಾನತ್ತು ಮಾಡಿರುವುದು ಅತ್ಯಂತ ಖಂಡನೀಯ” ಎಂದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘಟನೆಯ ಹೋಬಳಿ ಘಟಕದ ಅಧ್ಯಕ್ಷ ದುರ್ಗಪ್ಪ ಹೊರಟಿ, ಕಾರ್ಯದರ್ಶಿ ರಂಗನಾಥ್ ಬುಂಕಲದೊಡ್ಡಿ ಮತ್ತು ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...