ವಿಜಯಪುರ | ಬಿಜೆಪಿ ಅಧಿಕಾರದಲ್ಲೂ ವಕ್ಫ್‌ ಪರ ನೋಟಿಸ್ ನೀಡಲಾಗಿದೆ:‌ ಸಚಿವ ಎಂ ಬಿ ಪಾಟೀಲ್

Date:

ಬಿಜೆಪಿ ಅಧಿಕಾರಾವಧಿಯಲ್ಲೂ ವಕ್ಫ್ ಪರ ನೋಟಿಸ್ ‌ನೀಡಲಾಗಿದೆ. ಪಹಣಿಯಲ್ಲಿ ವಕ್ಫ್ ಎಂದು ನಮೂದು ಮಾಡಲಾಗಿದೆ. ಅವರ ಕಾಲದಲ್ಲಿ ಗೆಜೆಟ್ ಬಗ್ಗೆ ಹೋರಾಟ ಮಾಡಿಲ್ಲ? ಬಿಜೆಪಿಯ 2014ರ ಚುನಾವಣಾ ಪ್ರಣಾಳಿಕೆಯಲ್ಲಿ ವಕ್ಫ್ ಪರ ಭರವಸೆ ನೀಡಿದ್ದರು. ಸಚಿವೆ ಶೋಭಾ ಕರಂದ್ಲಾಜೆ ಸಂಸತ್‌ನಲ್ಲಿ ವಕ್ಫ ಪರವಾಗಿ ಪ್ರಶ್ನೆ ಕೇಳಿದ್ದರು. ನಂತರ ವಕ್ಫ ವಿರುದ್ಧ ಹೋರಾಟ ಮಾಡಿದ್ದಾರೆ. ಇದು ಅವರ ದ್ವಂದ್ವ ನೀತಿ, ರಾಜಕೀಯ ಬೇಳೆ ಬೇಯಿಸಿಕೊಳ್ಳುವ ತಂತ್ರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಕಿಡಿಕಾರಿದರು.

- Advertisement -

ವಿಜಯಪುರ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ವಕ್ಫ್ ವಿಚಾರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಧ್ಯೆ ಪೈಪೋಟಿ ನಡೆದಿದೆ. ವಕ್ಫ್ ಹೋರಾಟದ ಕ್ರೆಡಿಟ್‌ಗಾಗಿ ಹೋರಾಟ ನಡೆದಿದೆ” ಎಂದು ಸಚಿವ ಎಂಬಿ ಪಾಟೀಲ್ ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ : ವಿಜಯಪುರ | ಇಂದಿರಾಗಾಂಧಿ ಭಾರತಕ್ಕಷ್ಟೇ ಅಲ್ಲ ಇಡೀ ವಿಶ್ವಕಂಡ ಧೀಮಂತ ನಾಯಕಿ: ಮಲ್ಲಿಕಾರ್ಜುನ ಎಸ್ ಲೋಣಿ

ವಕ್ಫ್ ಕಾಯ್ದೆ ವಿರೋಧಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಟಾಂಗ್ ಕೊಟ್ಟ ಕೈಗಾರಿಕಾ ಸಚಿವ ಎಂಬಿ ಪಾಟೀಲ್, “ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ್ದು ಏನು? 1974ರಿಂದ ಇಲ್ಲಿಯವರೆಗೆ ಏಕೆ ಹೋರಾಟ ಮಾಡಿಲ್ಲ” ಎಂದು ಪ್ರಶ್ನಿಸಿದರು.

ಚುನಾವಣಾ ಫಲಿತಾಂಶ ಪ್ರಕಟ ವಿಚಾರವಾಗಿ ಮಾತನಾಡಿದ ಅವರು, “ಉಪ ಚುನಾವಣೆ, ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಕಾಂಗ್ರೆಸ್ ಗೆಲುವು ಸಾಧಿಸಲಿದೆಯೆಂಬ ವಿಶ್ವಾಸವಿದೆ” ಎಂದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ನಬಾರ್ಡ್ ಸಾಲ ಖೋತಾ ಮಾಡಿದ ಮೋದಿ ಸರ್ಕಾರ ರೈತಪರವೇ?

ಉದ್ಯಮಿ ಗೌತಮ್ ಅದಾನಿ ಮೇಲೆ ಅಮೆರಿಕಾ ಕೋರ್ಟ್‌ನಿಂದ ವಾರೆಂಟ್ ಜಾರಿ ವಿಚಾರವಾಗಿ ಮಾತನಾಡಿದ ಸಚಿವರು, “ಯಾರಾದರೇನು? ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಕ್ರಮ ಆಗುತ್ತದೆ. ಅದೊಂದು ಕಾನೂನು ಪ್ರಕ್ರಿಯೆ” ಎಂದು ಎಂ ಬಿ ಪಾಟೀಲ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...