ಬೀದರ್‌ | ನ.25-26ರಂದು ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ

Date:

ಬಸವಾದಿ ಶರಣರು ನಡೆದಾಡಿದ ಭೂಮಿ ಬಸವಕಲ್ಯಾಣದಲ್ಲಿ ನ.25 ಮತ್ತು 26 ರಂದು 44ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ  ಉತ್ಸವ ನಡೆಯಲಿದೆ. ಬಸವಾಭಿಮಾನಿಗಳು ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಂಡು ಉತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.

ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ವಿಶ್ವ ಬಸವ ಧರ್ಮ ಟ್ರಸ್ಟ್ ಅನುಭವ ಮಂಟಪ ಬಸವಕಲ್ಯಾಣ ವತಿಯಿಂದ 44ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ಸಮಾರಂಭದ ಭಿತ್ತಿ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.

“ಡಾ.ಬಸವಲಿಂಗ ಪಟ್ಟದ್ದೇವರು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ನ ಅಧ್ಯಕ್ಷರಾದ ಮೇಲೆ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವಕ್ಕೆ ಹೊಸ ಮೆರಗು ಬಂದಿದೆ. ಪ್ರತಿವರ್ಷ ಎರಡು ದಿವಸ ಅರ್ಥಪೂರ್ಣ ಸಮಾರಂಭ ಆಯೋಜಿಸುವ ಮೂಲಕ ಬಸವಾದಿ ಶರಣರನ್ನು ಸ್ಮರಣೆ ಮಾಡುತ್ತಿರುವುದು ಮಾದರಿ ಎನಿಸಿದೆ. ಮುಂದಿನ ದಿನಗಳಲ್ಲಿ ಅನುಭವ ಮಂಟಪ ಉತ್ಸವ ರಾಜ್ಯ ಮತ್ತು ರಾಷ್ಟ್ರದ ಗಮನ ಸಳೆಯುಂತಾಗಬೇಕು. ಈ ನಿಟ್ಟಿನಲ್ಲಿ ಅಗತ್ಯ ಸಹಾಯ ಸಹಕಾರ ನೀಡುತ್ತೇನೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಾನ್ನಿಧ್ಯ ವಹಿಸಿದ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ನ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, “ಬಸವಾದಿ ಶರಣರ ವಚನ ಸಾಹಿತ್ಯವನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ಶರಣ ಕಮ್ಮಟ, ಅನುಭವ ಮಂಟಪ ಉತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಇದು ನಮ್ಮೆಲ್ಲರ ಉತ್ಸವ ಆಗಬೇಕು. ಮುಂದಿನ ದಿನಮಾನಗಳಲ್ಲಿ ಮೈಸೂರಿನಲ್ಲಿ ನಡೆಯುವ ದಸರಾ ಮಾದರಿಯಂತೆ ಬಸವಕಲ್ಯಾಣ ಅನುಭವ ಮಂಟಪ ಉತ್ಸವ ನಡೆಯುವಂತಾಗಬೇಕು” ಎಂದು ಆಶಯ ವ್ಯಕ್ತಪಡಿಸಿದರು.

ನೇತೃತ್ವ ವಹಿಸಿದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, “ಡಾ.ಬಸವಲಿಂಗ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ನಡೆಯುವ ಶರಣ ಕಮ್ಮಟ, ಅನುಭವ ಮಂಟಪ ಉತ್ಸವದಲ್ಲಿ ನಾಡಿನ ಮಠಾಧೀಶರು, ಅನುಭಾವಿಗಳು, ರಾಜಕೀಯ ಮುಖಂಡರು, ಕಲಾವಿದರು ಸೇರಿ ಮುಂತಾದ ಗಣ್ಯರು ಭಾಗಿಯಾಗಲಿದ್ದು ಜಿಲ್ಲೆಯ ಬಸವಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಉತ್ಸವ ಯಶಸ್ವಿಗೊಳಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮಹಾರಾಷ್ಟ್ರದಲ್ಲಿ ಮೀಸಲಾತಿ ಹೋರಾಟ; ರಾಜ್ಯದ ಬಸ್‌ಗೆ ಬೆಂಕಿ

ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ ಚವ್ಹಾಣ, ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ವಂಕೆ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ತಾಪಂ ಎಡಿ ಚಂದ್ರಶೇಖರ ಬನ್ನಾಳೆ, ಧನರಾಜ ಬಂಬುಳಗೆ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...