ಈಗ ಬಿತ್ತರವಾದ ಪಟ್ಟಿ ನಿಜ; ಖಾತೆ ಹಂಚಿಕೆ ಬಗ್ಗೆ ಸ್ಪಷ್ಟನೆ ನೀಡಿದ ಸತೀಶ್ ಜಾರಕಿಹೊಳಿ

Date:

ನೂತನ ಸಚಿವರಿಗೆ ಖಾತೆ ಹಂಚಿಕೆ ಈಗಾಗಲೇ ಫೈನಲ್ ಆಗಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ನಂತರ ಮಾಧ್ಯಮಗಳಲ್ಲಿ ಬಿತ್ತರವಾದ ಪಟ್ಟಿಯೇ ನಿಜವಿದ್ದು, ರಾಜ್ಯಪಾಲರಿಂದ ಅಂತಿಮ ಮುದ್ರೆ ಅಷ್ಟೇ ಬಾಕಿ ಇದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಖಾತೆ ಹಂಚಿಕೆಯಾದ ಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹೀಗೆ ಹರಿದಾಡುತ್ತಿದ್ದ ಪಟ್ಟಿಯನ್ನು ನಕಲಿ ಎಂದು ಕಾಂಗ್ರೆಸ್​ ಟ್ವೀಟ್​ ಮಾಡಿತ್ತು. ಈ ವಿಚಾರಕ್ಕೆ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಆದರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಿನ್ನವಾಗಿ ಪ್ರತಿಕ್ರಿಯಿಸಿದ್ದು, “ಇನ್ನೂ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಿಲ್ಲ” ಎಂದಿದ್ದಾರೆ.

ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಂಪುಟ ವಿಸ್ತರಣೆ ಬೆನ್ನಲ್ಲೆ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂಬ ಪಟ್ಟಿಯೊಂದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿತ್ತು. ಇದನ್ನು ಗಮನಿಸಿದ ಕಾಂಗ್ರೆಸ್​ ಟ್ವೀಟ್​ ಮಾಡುವ ಮೂಲಕ ಅದು ನಕಲಿ ಪಟ್ಟಿ ಎಂದು ಸ್ಪಷ್ಟನೆ ನೀಡಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾವೇರಿ ವಿವಾದ | ಜನರ ಹಿತದೃಷ್ಟಿಯಿಂದ ಬಿಜೆಪಿ, ಜೆಡಿಎಸ್ ಹೋರಾಡುತ್ತಿಲ್ಲ: ಸಿದ್ದರಾಮಯ್ಯ

ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣ ಇತರರ ಮೂಲಭೂತ ಹಕ್ಕುಗಳ ರಕ್ಷಣೆ ಕೂಡ...

ಬೆಂಗಳೂರು ನಗರ | ಹೈಟೆಕ್‌ ಕ್ರೀಡಾಂಗಣ ನಿರ್ಮಾಣ‌, ₹10 ಕೋಟಿ ಅನುದಾನ: ಡಿಕೆ ಶಿವಕುಮಾರ್

ಆನೇಕಲ್ ಪಟ್ಟಣದಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಭರವಸೆ ವಕೀಲ ಸಂಘದಿಂದ ಬೇಡಿಕೆ,...

ದಕ್ಷಿಣ ಕನ್ನಡ | ಮಸೀದಿಗೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ; ಇಬ್ಬರು ಆರೋಪಿಗಳ ಬಂಧನ

ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಮಸೀದಿಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿ...