ಬೆಳ್ತಂಗಡಿ | ಕೀಟ ನಿರ್ವಹಣಾ ತಂತ್ರಗಳಿಗಾಗಿ ʼಎನ್‌ಪಿಎಸ್‌ಎಸ್‌ʼ ಅಪ್ಲಿಕೇಶನ್!

Date:

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು ರೈತರ ಬಳಕೆಗಾಗಿ ʼರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ(ಎನ್‌ಪಿಎಸ್‌ಎಸ್‌)ʼ ಎಂಬ ಹೊಸ ಅಪ್ಲಿಕೇಶನ್ ಒಂದನ್ನು ಅಭಿವೃದ್ಧಿಪಡಿಸಿದ್ದು, ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಜನರಿಗೆ ಇದರ ಕುರಿತಾಗಿ ಮಾಹಿತಿ ಒದಗಿಸಲು ರಾಜ್ಯಾದ್ಯಂತ ಕಾರ್ಯಾಗಾರಗಳನ್ನು ನಡೆಸುತ್ತಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕೃಷಿ ತರಬೇತಿ ಕೇಂದ್ರದಲ್ಲಿ ಕಾರ್ಯಾಗಾರ ನಡೆಸಿದ್ದು, ಈ ಅಪ್ಲಿಕೇಶನ್, ಕೃತಕ ಬುದ್ಧಿಮತ್ತೆ(ಎಐ) ಮತ್ತು ಯಂತ್ರ ಕಲಿಕೆ(ಎಂಎಲ್)ಯಂತಹ ಸುಧಾರಿತ ತಂತ್ರಜ್ಞಾನಗಳನ್ನು ಸಂಯೋಜಿಸುವ ಮೂಲಕ ನಿಜಾವಧಿಯ ಕೀಟ ಮೇಲ್ವಿಚಾರಣೆ ಕುರಿತು ಸಮಯೋಚಿತ ಸಲಹೆಗಳು ಮತ್ತು ಪರಿಣಾಮಕಾರಿ ತಂತ್ರಗಳನ್ನು ನೀಡುತ್ತದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಭಾರತ ಸರ್ಕಾರದ ಅಂಗಸಂಸ್ಥೆಯಾದ  ಪ್ರಾದೇಶಿಕ ಕೇಂದ್ರ ಸಮಗ್ರ ಕೀಟ ನಿರ್ವಹಣಾ ಕೇಂದ್ರ, ಬೆಂಗಳೂರು(ಆರ್‌ಸಿಐಪಿಎಂಸಿ) ಹಾಗೂ ಸಸ್ಯ ಸಂರಕ್ಷಣಾ, ಸಂಘರೋಧ ಮತ್ತು ಸಂಗ್ರಹಣೆ ನಿರ್ದೇಶನಾಲಯ ಭಾರತ ಸರ್ಕಾರ(ಡಿಪಿಪಿಕ್ಯೂಎಸ್‌)ಗಳು ಜಂಟಿಯಾಗಿ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ರಾಜ್ಯಾದ್ಯಂತ ಜನರಿಗೆ ಇದರ ಕುರಿತಾಗಿ ಮಾಹಿತಿ ಒದಗಿಸಲು ಕಾರ್ಯಾಗಾರಗಳನ್ನು ನಡೆಸುತ್ತಿದೆ. ಅದರಂತೆ ದಾವಣಗೆರೆ, ಉಡುಪಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕಾರ್ಯಾಗಾರ ನಡೆಸಲಾಗಿದ್ದು, ರಾಜ್ಯದ ಇತರೆ ಜಿಲ್ಲೆಗಳಲ್ಲೂ ನಡೆಸುವ ಯೋಜನೆಯಲ್ಲಿದೆ.

beb

ಎನ್‌ಪಿಎಸ್‌ಎಸ್‌ ಅಪ್ಲಿಕೇಶನ್‌, ಕೀಟ ಸಂಭವವನ್ನು ಆರಂಭದಲ್ಲೇ ಪತ್ತೆಹಚ್ಚಿ ತುರ್ತು ಕ್ರಮದ ಬಗ್ಗೆ ಮಾಹಿತಿ ಒದಗಿಸುತ್ತದೆ. ಈ ಮೂಲಕ ರೈತರಿಗೆ ಕೀಟ ಕಣ್ಗಾವಲು ಹಾಗೂ ಕೀಟ ನಿರ್ವಹಣೆ ಕುರಿತ ತಜ್ಞರ ಸಲಹೆಯನ್ನು ಸುಲಭ ಮತ್ತು ಸಕಾಲದಲ್ಲಿ ಪಡೆಯಬಹುದಾಗಿದೆ. ಅಲ್ಲದೆ ನುರಿತ ಕೃಷಿ ನಿರ್ವಾಹಕರು, ತರಬೇತಿ ಹೊಂದಿದ ಸಂಪನ್ಮೂಲ ವ್ಯಕ್ತಿಗಳು ಮತ್ತು ರೈತರು ಸಲ್ಲಿಸಿದ ನಿಜ ಅವಧಿಯ ಡೇಟಾವನ್ನು ಬಳಸಿಕೊಂಡು, ಕೀಟದಿಂದ ಉಂಟಾಗಲಿರುವ ಬೆಳೆ ನಷ್ಟವನ್ನು ಗುರುತಿಸಿ ಕೂಡಲೇ ಕಡಿಮೆ ಮಾಡಬಹುದಾಗಿದೆ. ಜತೆಗೆ ಇದು ವಿವಿಧ ಸಾರ್ವಜನಿಕ ಏಜೆನ್ಸಿಗಳಿಗೆ ರಾಷ್ಟ್ರೀಯ ಕೀಟ ಸನ್ನಿವೇಶದ ಭಂಡಾರವನ್ನೇ ಒದಗಿಸುತ್ತದೆ ಮತ್ತು ಕೀಟಗಳ ಹಾಟ್‌ಸ್ಪಾಟ್‌ಗಳನ್ನು ಗುರುತಿಸಲು ಸಹಾಯ ಮಾಡುತ್ತದೆ. ಆ ಮೂಲಕ ಸಸ್ಯ ಸಂರಕ್ಷಣಾ ಕ್ಷೇತ್ರದಲ್ಲಿ  ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಹಕಾರಿಯಾಗಿದೆ.

ಈ ಸುದ್ದಿ ಓದಿದ್ದೀರಾ?: ತುಮಕೂರು | ಆರ್‌ಟಿಒ ಬ್ರೋಕರ್ ಮನೆ ಮೇಲೆ ಲೋಕಾಯುಕ್ತ ದಾಳಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...