ಔರಾದ್ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಶಿಬಿರ ಉದ್ಘಾಟನೆ

Date:

ಬೀದರ್‌ ಜಿಲ್ಲೆಯ ಔರಾದ್ ತಾಲ್ಲೂಕಿನ ಗಣೇಶಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಔರಾದ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ರಾಷ್ಟ್ರೀಯ ಸೇವೆ ಯೋಜನೆ ಶಿಬಿರವನ್ನು ಶನಿವಾರ ಉದ್ಘಾಟಿಸಲಾಯಿತು.

- Advertisement -

ಕಾಲೇಜು ಪ್ರಾಚಾರ್ಯೆ ಪ್ರೊ.ಅಂಬಿಕಾದೇವಿ ಕೊತಮೀರ್ ಮಾತನಾಡಿ, ‘ಭಾರತ ಸಮನ್ವಯದ ನಾಡಾಗಿದ್ದು, ಸಹಬಾಳ್ವೆ, ಸಹೋದರತೆ, ಶಾಂತಿ ಬಯಸುತ್ತದೆ. ದೇಶದ ಪ್ರಗತಿಯಲ್ಲಿ ನಮ್ಮ ಒಳಿತಿದೆ ಎಂಬ ಭಾವನೆ ಎಲ್ಲ ವಿದ್ಯಾರ್ಥಿಗಳು ಅರ್ಥೈಸಿಕೊಳ್ಳಬೇಕು’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾ.ಪಂ. ಸದಸ್ಯ ಜ್ಞಾನೇಶ್ವರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಗಣೇಶಪುರ ಗ್ರಾಮದಲ್ಲಿ ನಡೆಯುತ್ತಿರುವುದು ಅತ್ಯಂತ ಸಂತೋಷ ತರಿಸಿದೆ.‌ ವಿದ್ಯಾರ್ಥಿಗಳು ಎನ್ಎಸ್ಎಸ್ ಶಿಬಿರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ಎನ್.ಎಸ್.ಎಸ್ ಘಟಕದ ಸಂಯೋಜಕ ಹಾಗೂ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ವಿನಾಯಕ ಕೊತಮೀರ್ ಪ್ರಾಸ್ತಾವಿಕ ಮಾತನಾಡಿ, ‘ಇಂದಿನ ಯುವಕರು ಅತ್ಯಮೂಲ್ಯ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಎನ್ಎಸ್ಎಸ್ ಶಿಬಿರ ಸಹಕಾರಿಯಾಗಿದೆ. ದೇಶದ ಪ್ರಗತಿ ಕುರಿತು ಆಲೋಚನೆ ನಡೆಸುವುದು ಅಗತ್ಯವಾಗಿದೆ’ ಎಂದರು.

ರಾಷ್ಟ್ರೀಯ ಸೇವಾ ಯೋಜನೆ ಕುರಿತು ಕನ್ನಡ ವಿಭಾಗದ ಮುಖ್ಯಸ್ಥ ರಾಮಣ್ಣ ಉಪ್ಪಾರ ಮಾತನಾಡಿ, ‘ವಿದ್ಯಾರ್ಥಿಗಳು ನಾಯಕತ್ವದ ಗುಣಗಳು ಬೆಳೆಸಿಕೊಳ್ಳಬೇಕು. ಸಹನೆ, ಸಮಯ ಪ್ರಜ್ಞೆ, ಆತ್ಮವಿಶ್ವಾಸ ಹಾಗೂ ಕಠಿಣ ಪರಿಶ್ರಮದಿಂದ ಬದುಕಿನಲ್ಲಿ ಯಶಸ್ಸು ಸಾಧಿಸಬಹುದು’ ಎಂದು ಹೇಳಿದರು.

ಬಳಿಕ ಶಿಬಿರದ ವಿದ್ಯಾರ್ಥಿಗಳು ಶಾಲಾ ಆವರಣ, ಗ್ರಾಮದಲ್ಲಿ ಶ್ರಮದಾನ, ಸ್ವಚ್ಛತಾ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ : ಬೀದರ್‌ | ಪತ್ರಿಕೋದ್ಯಮ ಅಧ್ಯಯನದಿಂದ ಸಾಮಾಜಿಕ ಹೊಣೆಗಾರಿಕೆ

ಕಾರ್ಯಕ್ರಮದಲ್ಲಿ ಸುನೀಲ ಮಾಳಗೆ, ಪ್ರೊ. ಸಂಜುಕುಮಾರ ತಾಂದಳೆ, ಡಾ.ದಯಾನಂದ ಬಾವಗೆ ಸೇರಿದಂತೆ ವಿದ್ಯಾರ್ಥಿಗಳು ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...