ಬೀದರ್‌ | ಜನಸ್ನೇಹಿ ಪೊಲೀಸ್ ವ್ಯವಸ್ಥೆಯಿಂದ ಅಪರಾಧ ಇಳಿಕೆ: ಎಸ್‌ಪಿ ಚನ್ನಬಸವಣ್ಣ

Date:

Advertisements
ಬೀದರ ಜಿಲ್ಲೆಯಲ್ಲಿ ಅಪರಾಧಗಳ ಸಂಖ್ಯೆ 2022ನೇ ಸಾಲಿಗೆ ಹೋಲಿಸಿದರೆ 2023ನೇ ಸಾಲಿನಲ್ಲಿ ಕಡಿಮೆಯಾಗಿದ್ದು, ಇದಕ್ಕೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಕಾರಣವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಹೇಳಿದರು.
ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿ, “ಕೊಲೆ, ಅತ್ಯಾಚಾರ, ಗಲಭೆ, ಗಾಯದ ಗಲಾಟೆ, ಮಹಿಳೆಯರಿಗೆ ಸಂಬಂಧಿಸಿದ ಅಪರಾಧ ಪ್ರಕರಣಗಳು ಶೇ 14% ರಷ್ಟು ಹಾಗೂ ಸ್ವತ್ತಿನ ಅಪರಾಧಗಳಾದ ಸುಲಿಗೆ, ದರೋಡೆ ಪ್ರಕರಣಗಳು ಶೇ 60.84% ರಷ್ಟು ಕಡಿಮೆಯಾಗಿದೆ. ಸುಮಾರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ 77 ಜನ ತಲೆಮರಿಸಿಕೊಂಡಿದ್ದ ಆರೋಪಿತರನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ” ಎಂದರು.
“2023ನೇ ಸಾಲಿನಲ್ಲಿ 800 ಮೊಬೈಲ್‌ಗಳನ್ನು ಪತ್ತೆ ಹಚ್ಚಲಾಗಿದೆ, 305 ಮೊಬೈಲ್‌ಗಳನ್ನು ವಾರಸುದಾರರ ಹಿಂದುರುಗಿಸಲಾಗಿದೆ, ಉಳಿದವುಗಳನ್ನು ಹಿಂದಿರುಗಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ. ಸಂಘಟಿತ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎರಡು ವಿಶೇಷ ತಂಡಗಳಾದ ರೌಡಿ ನಿಗೃಹ ದಳ ಮತ್ತು ಮಾದಕ ವಸ್ತು ಪ್ರತಿಬಂಧಕ ದಳ ರಚಿಸಿ ಹೆಚ್ಚಿನ ದಾಳಿ ಮಾಡಿ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೇವೆ” ಎಂದು ಮಾಹಿತಿ ನೀಡಿದರು.
“ಅಕ್ರಮವಾಗಿ ಮಾರಾಟ ಮಾಡುವ ಜಾಲದ ಮೇಲೆ ವಿಶೇಷ ನಿಗಾ ವಹಿಸಿ ದಾಳಿಯನ್ನು ಮಾಡಿ 93 ಪ್ರಕರಣಗಳನ್ನು ದಾಖಲಿಸಿ ಒಟ್ಟು 267 ಜನರ ಮೇಲೆ ಕ್ರಮಕೈಗೊಂಡು ಪಡಿತರ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಮಾಧಕ ವಸ್ತುಗಳ ಸಾಗಾಣಿಕೆಗಳಲ್ಲಿ ಒಟ್ಟು 32 ಪ್ರಕರಣಗಳನ್ನು ದಾಖಲಿಸಿ ಅದರಲ್ಲಿ 15.13 ಕೋಟಿ ಮೌಲ್ಯದ ಮಾಧಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಸೈಬರ್ ವಂಚನೆ 26 ಪ್ರಕರಣಗಳನ್ನು ಭೇದಿಸಿ 51.83 ಲಕ್ಷ ರೂ. ಹಿಂದಿರುಗಿಸಲಾಗಿದೆ” ಎಂದರು.
ಅಪಘಾತ ಪ್ರಕರಣಗಳು ಹೆಚ್ಚುತ್ತಿರುವುದು ಕಂಡು ಜುಲೈ 2023 ರಿಂದ ರಸ್ತೆ ಸುರಕ್ಷತೆ ಬಗ್ಗೆ ವಿಶೇಷ ಅಭಿಯಾನ ಪ್ರಾರಂಭಿಸಿ ಮಾರಣಾಂತಿಕ ಅಪಘಾತದಲ್ಲಿ ಶೇ 14.44%, ಮತ್ತು ಮಾರಣಾಂತಕವಲ್ಲದ ಅಪಘಾತಗಳಲ್ಲಿ ಶೇ 24.60% ರಷ್ಟು ಇಳಿಮುಖವಾಗಿದೆ. ಜಿಲ್ಲೆಯ ವಿವಿದೆಡೆ ಒಟ್ಟು 9 ಮತ್ತು ಮಹಾರಾಷ್ಟ್ರದ ಉದಗೀರ ಪೊಲೀಸ್ ಠಾಣೆಯಲ್ಲಿ ದಾಖಲಾದ ಒಂದು ಸೇರಿ ಒಟ್ಟು 22 ಸ್ವತ್ತಿನ, ಕಳವು ಮತ್ತು ಮಾದಕ ಪದಾರ್ಥ ಹಾಗೂ ಗಾಂಜಾ ಪ್ರಕರಣಗಳಲ್ಲಿ ಒಟ್ಟು 17 ಜನ ಆರೋಪಿತರನ್ನು ಪತ್ತೆ ಮಾಡಿ ಒಟ್ಟು 90 ಲಕ್ಷ ರೂ.ಮೌಲ್ಯದ ಸ್ವತ್ತು ವಶಕ್ಕೆ ಪಡೆಯಲಾಗಿದೆ” ಎಂದು ತಿಳಿಸಿದರು.
“2024ನೇ ಸಾಲಿನಲ್ಲಿ ಸಮುದಾಯ ಸಹಭಾಗಿತ್ವದ ಪೊಲೀಸಿಂಗ್ ಮುಖಾಂತರ ಕಾನೂನು ಸುವ್ಯವಸ್ಥೆ ಮತ್ತು ಅಪರಾಧಗಳನ್ನು ತಡೆಗಟ್ಟುವ ಯೋಜನೆ ರೂಪಿಸಲಾಗುವುದು ಹಾಗೂ ಅಕ್ಕ ಪಡೆ, ಸೈಬರ್ ಅಪರಾಧಗಳು, ಕೆಕೆಆರ್‌ಡಿಬಿ ಅನುದಾನ, ಮನೆಗಳಲ್ಲಿ ಸಿಸಿಟಿ ಅಳವಡಿಕೆ ಜಾಗೃತಿ, ರಸ್ತೆ ಸುರಕ್ಷತೆ, ತಂತ್ರಜ್ಞಾನ ಚಾಲಿತ ಪೋಲಿಸಿಂಗ್, ಡ್ರಗ್ಸ್ ವಿರೋಧಿ ಸಮಿತಿಗಳನ್ನು ರಚಿಸುವ ಗುರಿಯನ್ನು ಹೊಂದಲಾಗಿದೆ” ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣನವರ ಮತ್ತು ಚಂದ್ರಕಾಂತ ಪೂಜಾರಿ, ಡಿವೈಎಸ್‌ಪಿ ಶಿವನಗೌಡ ಪಾಟೀಲ್, ಗಾಂಧಿಗಂಜ್ ಠಾಣೆಯ ಇನ್ಸಪೇಕ್ಟರ್ ಹನುಮರೆಡ್ಡಿ, ಹುಮನಾಬಾದ ಇನ್ಸಪೇಕ್ಟರ್ ಗುರು ಪಾಟೀಲ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X