ಬೆಂಗಳೂರು ಹೊರವಲಯದ ರಾಮನಗರದಲ್ಲಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದು ಪೊಲೀಸರು ಆತ್ಮಹತ್ಯೆ ಶಂಕಿಸಿದ್ದಾರೆ.
ಮೃತ ವಿದ್ಯಾರ್ಥಿನಿಯನ್ನು ಕೇರಳದ ಕಣ್ಣೂರು ಮೂಲದ ಅನಾಮಿಕ ವಿನೀತ್ ಎಂದು ಗುರುತಿಸಲಾಗಿದೆ.
ಇದನ್ನು ಓದಿದ್ದೀರಾ? ಆಸ್ಪತ್ರೆಗೆ ದಾಖಲಾದ ಸಿಎಂ ಸಿದ್ದರಾಮಯ್ಯ: ಚಿಕ್ಕಬಳ್ಳಾಪುರ, ರಾಮನಗರ ಪ್ರವಾಸ ರದ್ದು
ಕನಕಪುರದ ಡಾ.ಚಂದ್ರಮ್ಮ ದಯಾನಂದ ಸಾಗರ್ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮೊದಲ ವರ್ಷ ಬಿಎಸ್‌ಇ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ಹೇಳಲಾಗಿದೆ.
ಅನಾಮಿಕ ಮಂಗಳವಾರ ಸಂಜೆ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಮೃತ ವಿದ್ಯಾರ್ಥಿನಿಯ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಸದ್ಯ ಅನೈಸರ್ಗಿಕ ಸಾವು ಎಂದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
