ಶಿವಮೊಗ್ಗ | ಮಹಿಳಾ ಸುರಕ್ಷತೆಯ ಅರಿವು ಕಾರ್ಯಕ್ರಮ

Date:

ಮಹಿಳಾ ಸಿಬ್ಬಂದಿಗಳಿಗೆ ಮಹಿಳಾ ಸುರಕ್ಷತೆಯ ಅರಿವು ಮೂಡಿಸುವ ಮೂಲಕ ಕಾನೂನಿನಲ್ಲಿ ಮಹಿಳೆ ಹಾಗೂ ಮಕ್ಕಳಿಗಿರುವ ವಿಶೇಷ ಹಕ್ಕುಗಳ ಬಗ್ಗೆ ಮತ್ತು ಪೋಕ್ಸೊ ಕಾಯ್ದೆ, ಬಾಲ್ಯ ವಿವಾಹ ನೀಷೇಧ ಕಾಯ್ದೆಗಳ ಬಗ್ಗೆ ಪಿಎಸ್ಐ ಸ್ವಪ್ನ ಮಾಹಿತಿ ನೀಡಿದರು.

- Advertisement -

ಶಿವಮೊಗ್ಗ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ರಿಲಯನ್ಸ್ ಮಾರ್ಟ್‌ನಲ್ಲಿ ರಾಣಿ ಚೆನ್ನಮ್ಮ ಪಡೆ ಉಸ್ತುವಾರಿಗಳು ಮಹಿಳಾ ಸಿಬ್ಬಂದಿಗಳಿಗಾಗಿ ಹಮ್ಮಿಕೊಂಡಿದ್ದ ಮಹಿಳಾ ಸುರಕ್ಷತೆಯ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

“ಸಾರ್ವಜನಿಕ ಸ್ಥಳದಲ್ಲಿ ನಿಮಗೆ ಯಾವುದೇ ಸಮಸ್ಯೆ, ಉಪಟಳ, ಕಿರಿಕಿರಿ ನೀಡುವವರಿದ್ದರೆ ಕೂಡಲೇ 112 ಸಹಾಯವಾಣಿ ಅಥವಾ ಚೆನ್ನಮ್ಮ ಪಡೆಗೆ ಮಾಹಿತಿ ನೀಡಿದರೆ ತೊಂದರೆ ನೀಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದರು.

“ಸಾಮಾಜಿಕ ಜಾಲತಾಣ, ಆನ್‌ಲೈನ್ ಚಾಟಿಂಗ್, ಫೇಸ್ ಬುಕ್, ಇನ್‌ಸ್ಟಾಗ್ರಾಂ ಬಳಕೆ ಮಾಡುವಾಗ ಎಚ್ಚರಿಕೆ ವಹಿಸಬೇಕು. ನಿಮ್ಮ ಖಾಸಗಿ ಮಾಹಿತಿ, ಫೋಟೋಗಳನ್ನು ಹಂಚಿಕೊಳ್ಳಬೇಡಿ. ಅವುಗಳನ್ನು ನಿಮ್ಮ ವಿರುದ್ಧವೇ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ” ಎಂದು ಎಚ್ಚರಿಕೆ ನೀಡಿದರು.

“ಯಾರೇ ಆಗಲಿ, ತಮ್ಮನ್ನು ಬ್ಯಾಂಕ್ ಅಧಿಕಾರಿಗಳೆಂದು ಹೇಳಿಕೊಂಡು ನಿಮಗೆ ಕರೆ ಮಾಡಿ, ನಿಮ್ಮ ಬ್ಯಾಂಕ್ ಅಕೌಂಟ್ ನಂಬರ್, ಎಟಿಎಂ ನಂಬರ್, ಎಟಿಎಂ ಪಿನ್ ನಂಬರ್ ಕೊಡಿ ಎಂದು ಕೇಳಿದಾಗ ಯಾವುದೇ ಕಾರಣಕ್ಕೂ ಕೊಡಬೇಡಿ. ಒಂದು ವೇಳೆ ಮಾಹಿತಿ ನೀಡಿದ್ದೇ ಆದಲ್ಲಿ, ನಿಮ್ಮ ಖಾತೆಯಲ್ಲಿರುವ ಹಣವನ್ನು ವರ್ಗಾವಣೆ ಮಾಡಿಕೊಂಡು ನಿಮಗೆ ಮೋಸ ಮಾಡುತ್ತಾರೆ. ಯಾವುದೇ ಬ್ಯಾಂಕ್ ಅಧಿಕಾರಿಗಳು ನಿಮ್ಮ ಖಾಸಗಿ ಅಥವಾ ವೈಯಕ್ತಿಕ ಮಾಹಿತಿಗಳನ್ನು ಕೇಳುವುದಿಲ್ಲ” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ನಂಜನಗೂಡು | ಆಕಳು ಕರುವಿನ ಬಾಲ ಕತ್ತರಿಸಿ ದುಷ್ಕರ್ಮಿಗಳು ಪರಾರಿ

“ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣ ಮಾಡುವಾಗ ಹಾಗೂ ಸಂತೆ, ಜಾತ್ರೆ, ಮಾರುಕಟ್ಟೆ, ಬಸ್‌ ಹಾಗೂ ರೈಲ್ವೆ ನಿಲ್ದಾಣದಂತಹ ಜನನಿಬಿಡ ಸ್ಥಳಗಳಲ್ಲಿ, ನಿಮ್ಮ ಬೆಲೆ ಬಾಳುವ ಆಭರಣ ಹಾಗೂ ನಿಮ್ಮ ವಸ್ತುಗಳ ಮೇಲೆ ಗಮನವಿರಲಿ. ಕಳ್ಳರು ನಿಮ್ಮ ಮೌಲ್ಯಯುತ ವಸ್ತುಗಳನ್ನು ಕಳ್ಳತನ ಮಾಡುವ ಸಾಧ್ಯತೆ ಇರುತ್ತದೆ. ನಿಮ್ಮ ವಸ್ತುಗಳ ಮೇಲೆ ಗಮನ ಇರಬೇಕು” ಎಂದರು.

“ಎಲ್ಲರೂ ಕಾನೂನನ್ನು ಪಾಲಿಸಿ, ಕಾನೂನನ್ನು ಗೌರವಿಸಿದಾಗ ಕಾನೂನು ಕೂಡ ನಿಮ್ಮನ್ನು ರಕ್ಷಿಸುತ್ತದೆ. ನಿಮ್ಮ ಸುರಕ್ಷತೆಯೇ ನಮ್ಮ ಹೊಣೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಚೆನ್ನಮ್ಮ ಪಡೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಹಾಗೂ ರಿಲಯನ್ಸ್ ಮಾರ್ಟ್‌ನ ಅಧಿಕಾರಿ, ಸಿಬ್ಬಂದಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಬ್ಬು ಬೆಳೆಗಾರರಿಂದ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಬಂದ್

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ಹಾಲು, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪಕ್ಕೆ ವಿರೋಧ; ವಿಜಯಪುರದಲ್ಲಿ ಎಸ್‌ಯುಸಿಐಸಿ ಪ್ರತಿಭಟನೆ

ನವೆಂಬರ್ 1ರಿಂದ ಜಾರಿಗೆ ಬರುವಂತೆ ಜಾರಿಗೊಳಿಸಿರುವ, ಪ್ರತಿ ಲೀಟರ್‌ ಹಾಲಿಗೆ ₹8...

ವಿಜಯಪುರ |ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ನ.30ರವರೆಗೆ ಅವಕಾಶ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2026-27ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ,...