ಸಾಗರ | ಮಾರಿ ಜಾತ್ರೆಯಂತೆ ಫ್ಲೆಕ್ಸ್;‌ ಟೀಕೆಗೆ ಗುರಿಯಾದ ಶಾಸಕ

Date:

ನಮ್ಮ ತಾಲೂಕಿನ ಶಾಸಕರು ಮಾರಿ ಜಾತ್ರೆಗೆ ಫ್ಲೆಕ್ಸ್‌ ಹಾಕಿದ ಹಾಗೆ ಹಾಕಿಸಿಕೊಂಡು ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇಂತಿಷ್ಟೇ ಫ್ಲೆಕ್ಸ್ ಹಾಕಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ ಎಂದು ಸಾಗರ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರತ್ನಾಕರ ಹೊನಗೋಡು ಆರೋಪಿಸಿದರು.

- Advertisement -

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಯಾರೇ ಆಗಲಿ ಇತಿಮಿತಿಗಳನ್ನು ಇಟ್ಟುಕೊಂಡು ಹುಟ್ಟುಹಬ್ಬ ಆಚರಿಸಬೇಕು. ಆದರೆ ಶಾಸಕ ಗೋಪಾಲಕೃಷ್ಣ ಅವರು ಸರ್ಕಾರಿ ನೌಕರರಿಗೆ, ಗುತ್ತಿಗೆದಾರರಿಗೆ ವಾರ್ನಿಂಗ್ ಕೊಟ್ಟು ಫ್ಲೆಕ್ಸ್ ಹಾಕಿಸಿಕೊಂಡು ಹುಟ್ಟುಹಬ್ಬ ಆಚರಿಸಿಕೊಳ್ಳುವುದು ಎಷ್ಟು ಸರಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಮುಂದುವರೆದು ಹೊಸನಗರದಲ್ಲಿ ಶಿಕ್ಷಣ ಸಚಿವರು ವೇದಿಕೆಯಲ್ಲಿ ಭಾಷಣ ಮಾಡುವಾಗ ಶಾಸಕ ಗೋಪಾಲಕೃಷ್ಣ ಅವರನ್ನು ಮಾಜಿ ಸಿಎಂ ಬಂಗಾರಪ್ಪನವರಿಗೆ ಹೋಲಿಸಿದ್ದಾರೆ. ಇದು ಅನೇಕ ಬಂಗಾರಪ್ಪನವರ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ತಾಲೂಕಿನಾದ್ಯಂತ ದುರಾಡಳಿತ ಹಾಗೂ ಅಧಿಕಾರದ ದಬ್ಬಾಳಿಕೆ ತಾಂಡವವಾಡುತ್ತಿದೆ. ನಗರಸಭೆ ಚುನಾವಣೆಯ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳ ಎದುರಿಗೆ ಶಾಸಕರು ವಿರೋಧ ಪಕ್ಷದ ನಾಯಕರ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ಇದನ್ನು ಗಮನಿಸಿದ ಪೊಲೀಸ್ ಅಧಿಕಾರಿಗಳು ನೇರವಾಗಿ ಎಫ್ ಐ ಆರ್ ಹಾಕಬೇಕಾಗಿತ್ತು, ಆದರೆ ಹಾಕಲಿಲ್ಲ ಎಂದು ಆರೋಪಿಸಿದರು. ಗೋಪಾಲಕೃಷ್ಣ ಬೇಳೂರು ತಮ್ಮ ಶೋಕಿಗಾಗಿ ಹೋಂ ಮಿನಿಸ್ಟರ್ ಸಹ ಉಪಯೋಗಿಸದ ಹಾಗೆ ಎಸ್ಕಾರ್ಟ್ ಸೇವೆಗಳನ್ನು ಬಳಸಿಕೊಂಡು ಸಾರ್ವಜನಿಕ ಹಣವನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಸಾಗರ | ಜನರಿಗೆ ಮೂಲ ಸೌಕರ್ಯ ಒದಗಿಸುವುದೇ ಗ್ರಾಮ ಪಂಚಾಯತಿಗಳ ಉದ್ದೇಶ

ಈ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಗುರುರಾಜ್, ಉಪಾಧ್ಯಕ್ಷೆ ರೂಪ ನಾಗರಾಜ್, ಗೌತಮಪುರ ಗ್ರಾಂ.ಪಂ ಸದಸ್ಯ ಪರಮೇಶ್, ಶಕ್ತಿ ಕೇಂದ್ರ ಅಧ್ಯಕ್ಷ ಶಾಂತಪ್ಪ, ಮಾಮ್ ಕೋಸ್ ನಿರ್ದೇಶಕ ಭರ್ಮಪ್ಪ ಹಾಗೂ ದೇವು ಬೀಸನ ಗದ್ದೆ, ಶ್ರೀಧರ ಸಂಪಳ್ಳಿ ಹಾಗೂ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...