ಕಲಬುರಗಿ | ಅ.29,30: ಕಲ್ಯಾಣ ಕರ್ನಾಟಕದ ಬಯಲಾಟ ಪರಂಪರೆ ಕುರಿತು ವಿಚಾರ ಸಂಕಿರಣ; ಬಯಲಾಟ ಪ್ರದರ್ಶನ

Date:

Advertisements

ಬಾಗಲಕೋಟೆಯ ಕರ್ನಾಟಕ ಬಯಲಾಟ ಅಕಾಡೆಮಿ, ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ, ಡಾ. ಅಂಬೇಡ್ಕರ್ ಕಲಾ, ವಾಣಿಜ್ಯ ಪದವಿ ಮತ್ತು ಸ್ನಾತಕೋತ್ತರ ಕೇಂದ್ರ, ಕನ್ನಡ ವಿಭಾಗ ಸಂಯುಕ್ತ ಆಶ್ರಯದಲ್ಲಿ `ಕಲ್ಯಾಣ ಕರ್ನಾಟಕ ಬಯಲಾಟ ಪರಂಪರೆ’ ಕುರಿತು ಅಕ್ಟೋಬರ್ 29 ಮತ್ತು 30 ರಂದು ಎರಡು ದಿನಗಳ ವಿಚಾರ ಸಂಕಿರಣ ಮತ್ತು ಬಯಲಾಟ ಪ್ರದರ್ಶನವನ್ನು ಕಲಬುರಗಿಯ ‘ಗುಲ್ಬರ್ಗಾ ವಿಶ್ವವಿದ್ಯಾಲಯ’ದ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಅ.29ರಂಧೂ ಬೆಳಗ್ಗೆ 10.30 ಕ್ಕೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ದಯಾನಂದ ಅಗಸರ ಅವರು ವಿಚಾರ ಸಂಕಿರಣ ಉದ್ಘಾಟನೆ ಮಾಡಲಿದ್ದಾರೆ. ಬಯಲಾಟ ಅಕಾಡೆಮಿಯ ಸದಸ್ಯರಾಧ ಡಾ. ಅರುಣ್ ಜೋಳದಕೂಡ್ಲಿಗಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.

ಕಲಬುರಗಿಯ ಚಿಂತಕರಾದ ಆರ್.ಕೆ.ಹುಡಗಿ ಅವರು ಆಶಯ ಭಾಷಣ ಮಾಡಲಿದ್ದಾರೆ. ಕೊಪ್ಪಳದ ಬಂಡಾಯ ಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರು ಮತ್ತು ಕಲಬುರಗಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಸನೂರು, ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿಯ ಪ್ರಧಾನ ಕಾರ್ಯದರ್ಶಿಗಳಾದ ಶಾಂತಪ್ಪ ಸೂರನ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Advertisements

ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾದ ಡಾ. ಎಚ್.ಟಿ. ಪೋತೆ ಅವರು ಉಪಸ್ಥಿತರಿರಲಿದ್ದು, ಕರ್ನಾಟಕ ಬಯಲಾಟ ಅಕಾಡೆಮಿಯ (ಬಾಗಲಕೋಟೆ)ಅಧ್ಯಕ್ಷರಾದ ಡಾ. ಕೆ.ಆರ್. ದುರ್ಗಾದಾಸ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಮಧ್ಯಾಹ್ನ 2 ಗಂಟೆಯ ನಂತರ ಮೊದಲ ಗೋಷ್ಠಿಯಲ್ಲಿ ಕಲ್ಯಾಣ ಕರ್ನಾಟಕದ ಬಯಲಾಟಗಳು’ ಕುರಿತಂತೆ ಡಾ. ಅಂಬೇಡ್ಕರ್ ಕಲಾ, ವಾಣಿಜ್ಯ ಪದವಿ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ವಸಂತ ವಿ. ನಾಶಿ ಮಾತನಾಡಲಿದ್ದಾರೆ. ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಸ್ಥಿತಿಗತಿಗಳು’ ಕುರಿತಂತೆ ರಾಯಚೂರಿನ ಹೋರಾಟಗಾರರಾದ ಡಾ. ಅಬ್ದುಲ್ ರಜಾಕ್ ಅವರು ಮಾತನಾಡಲಿದ್ದಾರೆ. ಸಂಜೆ 4.30ರಿಂದ ಬಯಲಾಟದ ಹಾಡುಗಾರಿಕೆ ಮತ್ತು ಪ್ರದರ್ಶನ ಇರಲಿದೆ.

ಸೆಮಿನಾರಿನ ಎರಡನೆಯ ದಿನವಾದ ಅ.30ರಂದು ಬೆಳಗ್ಗೆ 10.30 ಕ್ಕೆ ಸಮಾವೇಶದ ಎರಡನೆಯ ಗೋಷ್ಠಿ ಇರಲಿದೆ. ಕಲ್ಯಾಣ ಕರ್ನಾಟಕದ ಬಯಲಾಟಗಳ ಸಾಂಸ್ಕೃತಿಕ ಅನನ್ಯತೆ’ ಕುರಿತು ಕನ್ನಡ ವಿಶ್ವವಿದ್ಯಾಲಯ ಹಂಪಿಯ ಸಹ ಪ್ರಾಧ್ಯಾಪಕರಾದ ಡಾ. ವೆಂಕಟಗಿರಿ ದಳವಾಯಿ ಮತ್ತು ‘ಬಯಲಾಟಗಳಲ್ಲಿ ಮಹಿಳೆಯರು’ ಎಂಬ ವಿಷಯದ ಕುರಿತಂತೆ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಅನಸೂಯ ಕಾಂಬಳೆ ಅವರು ಮಾತನಾಡಲಿದ್ದಾರೆ.

ಮಧ್ಯಾಹ್ನ 12.30ಕ್ಕೆ ತೊಗಲು ಗೊಂಬೆ ಆಟ ಇರುತ್ತದೆ. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಡಾ. ಎಚ್.ಟಿ. ಪೋತೆ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಚಿಂತಕಿ ಕೆ. ನೀಲಾ ಕಲಬುರಗಿ, ಕಲಬುರಗಿಯ ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿಯ ಆಡಳಿತಾಧಿಕಾರಿ ಡಾ. ಚಂದ್ರಶೇಖರ ಶೀಲವಂತರ, ಕಲಬುರಗಿ ಡಾ. ಅಂಬೇಡ್ಕರ್ ಕಲಾ ವಾಣಿಜ್ಯ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲ ಡಾ. ಡಿ. ವಿಜಯಕುಮಾರ್ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ರಾಜನಾಳಕರ್ ಲಕ್ಷ್ಮಣ್ ಅವರು ವಹಿಸಲಿದ್ದಾರೆ.

ಇದನ್ನು ಓದಿದ್ದೀರಾ? ತುಮಕೂರು | ಕೋಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವತಿ 12 ಗಂಟೆಯ ಬಳಿಕ ಜೀವಂತವಾಗಿ ಪತ್ತೆ!

ಅ.29ರ ಸಂಜೆ 4 ಗಂಟೆಗೆ ಕರ್ನಾಟಕ ಜಾನಪದ ದೊಡ್ಡಾಟ ಮತ್ತು ಹವ್ಯಾಸಿ ಕಲಾವಿದರ ಸಂಘ (ರಿ) ಮಾಶಾಳ ಅವರಿಂದ ‘ದ್ರೌಪದಿ ವಸ್ತ್ರಾಪಹರಣ’ ಬಯಲಾಟವನ್ನು ಅಭಿನಯಿಸುವರು. ಅಂದೇ ಸಂಜೆ 5.30ಕ್ಕೆ ಲಕ್ಷ್ಮೀ ದೊಡ್ಡಾಟ ಸಂಘ, ಚಡಚಣ, ವಿಜಾಪೂರ ಜಿಲ್ಲೆ ಅವರು ಧರ್ಮ ವಿಜಯ (ಅನುಸಂಧಾನ ಪ್ರಸಂಗ) ಬಯಲಾಟವನ್ನು ಅಭಿನಯಿಸುವರು.

ಅ.30ರಂದು ಮಧ್ಯಾಹ್ನ 12.30ಕ್ಕೆ ಕೊಪ್ಪಳ ಜಿಲ್ಲೆಯ ರಾಜರಾಜೇಶ್ವರಿ ತೊಗಲು ಗೊಂಬೆ ಕಲಾಮೇಳ, ಮೊರನಾಳದವರು `ವಿರಾಟ ಪರ್ವ’ ಕುರಿತ ತೊಗಲು ಗೊಂಬೆ ಆಟ ಪ್ರದರ್ಶನ ಮಾಡಲಿದ್ದಾರೆ. ಅದೇ ದಿನ ಮಧ್ಯಾಹ್ನ 2.30ಕ್ಕೆ ರಾಯಚೂರು ಜಿಲ್ಲೆಯ ಅಂಬಾಭವಾನಿ ಬಯಲು ನಾಟ್ಯಸಂಘದವರು ಶ್ರೀದೇವಿ ಮಹಾತ್ಮ (ಶುಂಭ ನಿಶುಂಭ ಮರ್ಧಿನಿ) ಬಯಲಾಟ ಪ್ರದರ್ಶಿಸಲಿದ್ದಾರೆ ಎಂದು ಕಲಬುರಗಿಯ ಡಾ. ಅಂಬೇಡ್ಕರ್ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರೂ, ಬಯಲಾಟ ಅಕಾಡೆಮಿಯ ಸದಸ್ಯರೂ ಆದ ಡಾ. ಅರುಣ್ ಜೋಳದಕೂಡ್ಲಿಗಿ ಅವರು ಮಾಹಿತಿ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X