ಫಲಾನುಭವಿಗಳಿಂದ ಪಡಿತರ ಅಂಗಡಿಗಳು ಹಣ ವಸೂಲಿ ಶಿಸ್ತು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

Date:

ಕೋಲಾರ: ಪಡಿತರ ಪಡೆಯಬೇಕಾದರೆ ನ್ಯಾಯಬೆಲೆ ಅಂಗಡಿಯಲ್ಲಿ ಫಲಾನುಭವಿಗಳು 10 ರುಪಾಯಿ ಕೊಟ್ಟು ಹೆಬ್ಬೆಟ್ಟಿನ ಗುರುತು ನೀಡಬೇಕು ಜೊತೆಗೆ ಒಂದೆರಡು ಕೆ.ಜಿ ಅಕ್ಕಿ ಕಡಿತಗೊಳಿಸುವ ದೂರುಗಳು ಬಂದಿವೆ. ಅಂತಹ ಪ್ರಕರಣಗಳು ಮರುಕಳಿಸಬಾರದು ಮತ್ತೆ ದೂರು ಬಂದರೆ ಅಂತಹ ನ್ಯಾಯಬೆಲೆ ಅಂಗಂಡಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ಸೂಚನೆ ನೀಡಿದರು.

- Advertisement -

ನಗರದ ತಾಪಂ ಸಭಾಂಗಣದಲ್ಲಿ ಶನಿವಾರ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಪ್ರತಿಯೊಂದು ನ್ಯಾಯಬೆಲೆ ಅಂಗಂಡಿಗಳ ಮುಂದೆ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಹಾಕಬೇಕು ಯಾವುದೇ ಕಾರಣಕ್ಕೂ ಹಣ ಪಡೆಯಬಾರದು ಸಾರ್ವಜನಿಕರು ನೇರವಾಗಿ ಕಛೇರಿಗೆ ದೂರು ನೀಡಬಹುದು ಮುಂದಿನ ದಿನಗಳಲ್ಲಿ ಎಲ್ಲಾ ಸೊಸೈಟಿಗಳ ಸಭೆ ಕರೆದು ಅವರ ಮೂಲಕ ಸೂಚನೆ ಸಹ ನೀಡಬೇಕು ಕೆಲವು ಕಡೆಯಲ್ಲಿ ಅಕ್ಕಿ ಪಡೆದು ಮಾರಾಟ ಮಾಡಿದ ಪ್ರಕರಣಗಳು ಇವೆ ಅಂತಹ ಫಲಾನುಭವಿಗಳನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದು ಮಾಡಿ ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸರ್ಕಾರದ ಮಹತ್ವಾಕಾಂಕ್ಷೆ ಪಂಚ ಗ್ಯಾರಂಟಿ ಯೋಜನೆಗಳನ್ನು ತಾಲ್ಲೂಕಿನ ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬರಿಗೆ ತಲುಪಿಸಲು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಮಿತಿಯ ಸದಸ್ಯರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಯಾವುದೇ ಕಾರಣಕ್ಕೂ ಲೋಪಗಳು ಆಗದಂತೆ ನೋಡಿಕೊಳ್ಳಬೇಕು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಬೇಕಾದರೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯವನ್ನು ನಿರ್ವಹಿಸಬೇಕು ಆಗ ಮಾತ್ರ ಸರ್ಕಾರಕ್ಕೆ ಹಾಗೂ ಸಮಿತಿಗೆ ಗೌರವ ಸಿಗುತ್ತದೆ ಎಂದು ಹೇಳಿದರು.

ವೇಮಗಲ್ ಭಾಗದಿಂದ ಬೆಂಗಳೂರಿಗೆ ನೇರವಾಗಿ ಹೋಗಲು ಬೆಳಗ್ಗೆ8 ಗಂಟೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ ನರಸಾಪುರ ಮಾರ್ಗದಲ್ಲಿ ಹೊಸಕೋಟೆ ಯಿಂದ ಬೆಂಗಳೂರಿಗೆ ಹೋಗಲಿದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಜೊತೆಗೆ ಫೆ‌ ೬ ರಂದು ನಡೆಯಲಿದೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸುವಂತೆ ಪ್ರತಿ ಪಂಚಾಯತಿ ಮಟ್ಟದಲ್ಲಿ ಗಮನ ಹರಿಸಬೇಕು ಜೊತೆಗೆ ಮುಂದಿನ ದಿನಗಳಲ್ಲಿ ಪ್ರತಿಯೊಂದು ಯೋಜನೆಗಳಿಗೆ ಸಂಬಂಧಿಸಿದಂತೆ ತಾಲೂಕು ಸಮಾವೇಶವನ್ನು ನಡೆಸಲು ಪೂರ್ವ ತಯಾರಿ ನಡೆಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನು ಓದಿದ್ದೀರಾ..? ವಿ.ಬಿ.ಜಿ ರಾಮ್​ ಜಿ ಯೋಜನೆ ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರ ಪಾಲಿಗೆ ಮರಣ ಶಾಸನ : ಡಾ.ಅನಿಲ್ ಕುಮಾರ್

ಈ ಸಭೆಯಲ್ಲಿ ತಾಪಂ ಇಒ ಮಂಜುನಾಥ್, ಸಹಾಯಕ ನಿರ್ದೇಶಕ ಮಂಜುನಾಥ್ ಪ್ರಸಾದ್, ಸೇರಿದಂತೆ ಸಮಿತಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...