ರಾಯಚೂರಿನಲ್ಲಿ ಒನಕೆ ಓಬವ್ವ ಜಯಂತಿಯನ್ನು ಕಾಟಾಚಾರಕ್ಕೆ ಆಚರಣೆ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗಿಯಾಗಿಲ್ಲ ಎಂದು ಆರೋಪಿಸಿ ರಾಯಚೂರು ದಲಿತ ಸಂಘಟನೆ ಮುಖಂಡರು ಕಾರ್ಯಕ್ರಮದ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
“ಒಬಕೆ ಓಬವ್ವ ಜಯಂತಿಯನ್ನು ಆಚರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಹೀಗಾಗಿ, ಎಲ್ಲ ಜಿಲ್ಲೆಗಳಲ್ಲಿ ಶಿಷ್ಟಾಚಾರದ ಪ್ರಕಾರ ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆಗಳು ಕಾರ್ಯಕ್ರಮವನ್ನು ನಡೆಸುತ್ತವೆ. ಅದೇ ರೀತಿ, ರಾಯಚೂರಿನ ಕನ್ನಡ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು” ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
“ಶಿಷ್ಟಾಚಾರದ ಪ್ರಕಾರ ಆಯಾ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಸಿಇಒ, ಶಾಸಕರು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಭಾಗವಹಿಸಬೇಕಾಗಿತ್ತು. ಆದರೆ ಯಾವೊಬ್ಬ ಸಚಿವರು, ಶಾಸಕರು, ಅಧಿಕಾರಿಗಳು ಭಾಗವಹಿಸಬೇಕು. ಆದರೆ, ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ” ಎಂದು ಆರೋಪಿಸಿದ್ದಾರೆ.
ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿಯೂ ಮಂತ್ರಿಗಳು, ಶಾಸಕರು, ಅಧಿಕಾರಿಗಳ ಹೆಸರು ನಮೂದಿಸಲಾಗಿದೆ. ಆದರೂ, ಹಲವು ಅಧಿಕಾರಿಗಳು ಜನಪ್ರತಿನಿಧಿಗಳು ಭಾವಹಿಸಿಲ್ಲ ಎಂದು ಕಿಡಿಕಾರಿದ್ದಾರೆ.