ವೈದ್ಯಕೀಯ ಕಾಲೇಜಿಗೆ 15 ದಿನದೊಳಗೆ ಡಿಪಿಆರ್‌ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ

Date:

ಕೋಲಾರ: ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ವಿಚಾರವಾಗಿ 15 ದಿನದೊಳಗೆ ಡಿಪಿಆರ್‌ ಸಿದ್ಧಪಡಿಸಲು ಆರೋಗ್ಯ, ಲೋಕೋಪಯೋಗಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಳಿಕ ಸಚಿವ ಸಂಪುಟದ ಮುಂದಿಟ್ಟು, ಒಪ್ಪಿಗೆ ಪಡೆದು ಮೂರು ತಿಂಗಳಲ್ಲಿ ಕಾಮಗಾರಿ ಆರಂಭಿಸುವ ಗುರಿ ಇಟ್ಟುಕೊಂಡಿದ್ದೇವೆ ಎಂದು ಶಾಸಕ ಕೊತ್ತೂರು ಮಂಜುನಾಥ್‌ ತಿಳಿಸಿದರು.

- Advertisement -

ನಗರ ಹೊರವಲಯದ ಸ್ಯಾನಿಟೋರಿಯಂ ಬಳಿ ಬುಧವಾರ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಗುರುತಿಸಲಾಗಿರುವ ಸ್ಥಳವನ್ನು ವಿಧಾನ ಪರಿಷತ್‌ ಸದಸ್ಯ ಎಂ.ಎಲ್‌.ಅನಿಲ್‌ ಕುಮಾರ್‌ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಿಪಿಆರ್‌ ಸಲ್ಲಿಸಲು ಸರ್ಕಾರ ನೀಡಿದ್ದ 15 ದಿನಗಳ ಗಡುವು ಮುಗಿದಿದೆ. ಆದರೆ, ನಮಗೆ ಅವರ ಪತ್ರ ಸಿಕ್ಕಿದ್ದೇ ತಡವಾಗಿ. ಹೀಗಾಗಿ, ಮತ್ತೆ 15 ದಿನ ನಿಗದಿಪಡಿಸಿದ್ದು, ಅಷ್ಟರೊಳಗೆ ಡಿಪಿಆರ್‌ ಸಲ್ಲಿಸಲು ಸೂಚಿಸಿದ್ದೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಈ ನಾವು ಪರಿಶೀಲಿಸಿರುವ ಸ್ಥಳ ಅರಣ್ಯ ಇಲಾಖೆಗೆ ಸೇರಿದ್ದಾಗಿದೆ. ಈ ಸಂಬಂಧ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಜಾಗ ಕೋರಿ ಅರ್ಜಿ ಹಾಗೂ ದಾಖಲೆ ಸಲ್ಲಿಸಿದ್ದೇವೆ. ಇದಕ್ಕೆ ಪರ್ಯಾಯವಾಗಿ ಮದನಹಳ್ಳಿ ಬಳಿ ಸರ್ವೆ ನಂಬರ್‌ 125ರಲ್ಲಿ ಅರಣ್ಯ ಇಲಾಖೆಗೆ ಜಾಗ ನೀಡುತ್ತೇವೆ. ಇದಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಒಪ್ಪಿಕೊಂಡಿದ್ದಾರೆ. ಅಲ್ಲದೇ, ಮರ ಕಡಿದಿದ್ದಕ್ಕೂ ಹಣ ನೀಡುತ್ತೇವೆ. ಆದಷ್ಟು ಮರಗಳನ್ನು ಉಳಿಸಿಕೊಂಡು ಕಟ್ಟಡ ಕಟ್ಟುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

22 ಎಕರೆ 36 ಗುಂಟೆ ಜಾಗ ಇಲ್ಲಿದೆ. ಈಗಾಗಲೇ ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆ ಇದ್ದು, ಇಲ್ಲಿ ಶೈಕ್ಷಣಿಕ, ಆಡಳಿತ ಕಟ್ಟಡ ಹಾಗೂ ಹಾಸ್ಟೆಲ್‌ ಬರಲಿವೆ. ಡಿಎಚ್‌ಓ ಆಸ್ಪತ್ರೆಯೂ ಇಲ್ಲಿರಲಿದೆ ಎಂದರು.

ರಾಜ್ಯದಲ್ಲಿ ಹೊಸದಾಗಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆಂದು ಬಜೆಟ್‌ನಲ್ಲಿ ₹ 800 ಕೋಟಿ ಮೀಸಲಿಡಲಾಗಿದೆ. ಅದರಲ್ಲಿ ವಿಜಯಪುರ ಹಾಗೂ ಕೋಲಾರದಲ್ಲಿ ಕಾಲೇಜು ನಿರ್ಮಿಸಲಾಗುತ್ತಿದೆ. ಹೀಗಾಗಿ, ನಮಗೆ ₹ 400 ಕೋಟಿ ಸಿಗಬಹುದು. ಆರಂಭದಲ್ಲಿ ನಮಗೆ ₹ 200 ಕೋಟಿ ಲಭಿಸಿದರೆ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಬಹುದು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಸಹಕಾರ ನೀಡಿ ತ್ವರಿತಗತಿಯಲ್ಲಿ ಕೆಲಸ ಆಗಲು ಕಾರಣರಾಗಿದ್ದಾರೆ. ಮುಂದಿನ 25 ವರ್ಷಗಳ ಜನಸಂಖ್ಯೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಆರೋಗ್ಯ ಇಲಾಖೆಯೊಂದಿಗೆ ತಹಶೀಲ್ದಾರ್‌, ಸರ್ವೆ ಇಲಾಖೆ, ನಗರಸಭೆ, ತಾಲ್ಲೂಕು ಪಂಚಾಯಿತಿ ಇಒ, ಪಿಡಿಒಗಳು ಸಮನ್ವಯ ಸಾಧಿಸಿ ಕೆಲಸ ಮಾಡಬೇಕು. ವಾಸ್ತು ಪ್ರಕಾರವೇ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಬೇಕು ಎಂದು ನಿರ್ದೇಶನ ನೀಡಿದರು.

ಹಿಂದೆ ₹ 5 ಸಾವಿರ ಕೋಟಿಯಲ್ಲಿ ಕ್ಯಾನ್ಸರ್‌ ಆಸ್ಪತ್ರೆ ನಿರ್ಮಾಣ ಮಾಡಲು ಟಾಟಾ ಸಂಸ್ಥೆ ಮುಂದೆ ಬಂದಿತ್ತು. ಆದರೆ, ಅರಣ್ಯ ಇಲಾಖೆಯ ಜಾಗವಾಗಿದ್ದ ಕಾರಣ ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಾಗಲಿಲ್ಲ. ಆ ಆಸ್ಪತ್ರೆ ಬೇರೆ ಕಡೆ ಹೋಯಿತು ಎಂದರು.

ಇದಕ್ಕೂ ಮೊದಲು ಸಚಿವರು ಆರೋಗ್ಯ, ಕಂದಾಯ, ಲೋಕೋಪಯೋಗಿ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ವಾಟ್ಸ್‌ಆ್ಯಪ್‌ ಗ್ರೂಪ್ ಮಾಡಿಕೊಂಡು ಪರಸ್ಪರ ಸಂಪರ್ಕದಲ್ಲಿರಬೇಕು. ಇದು ಪ್ರಮುಖ ವಿಚಾರವಾಗಿದ್ದು, ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಆದ್ಯತೆ ಮೇಲೆ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

ಇದನ್ನು ಓದಿದ್ದೀರಾ…? ವ್ಯವಹಾರ ಸುಲಭಿಕರಣ ಹೆಸರಲ್ಲಿ ಕಾರ್ಮಿಕರ ಕಾನೂನಿಗೆ ಧಕ್ಕೆ ಸಿಐಟಿಯು ವತಿಯಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ಎಂ.ಎಲ್‌.ಅನಿಲ್‌ ಕುಮಾರ್‌, ಕುಡಾ ಅಧ್ಯಕ್ಷ ಮೊಹಮ್ಮದ್‌ ಹನೀಫ್‌, ತಹಶೀಲ್ದಾರ್‌ ಡಾ.ನಯನಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಶ್ರೀನಿವಾಸ್‌, ಕೋಲಾರ ನಗರಸಭೆ ಆಯುಕ್ತ ನವೀನ್‌ ಚಂದ್ರ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...