ಗ್ರಾಮ ಪಂ.ಗಳಲ್ಲಿ ಅಧಿಕಾರಿಗಳ ಹಸ್ತಕ್ಷೇಪ; ಚುನಾಯಿತ ಸದಸ್ಯರ ಬೃಹತ್ ಪ್ರತಿಭಟನೆ

Date:

ಸ್ಥಳೀಯ ಸರ್ಕಾರಗಳಾಗಿರುವ ಗ್ರಾಮ ಪಂಚಾಯತಿಗಳಲ್ಲಿ ಚುನಾಯಿತ ಸದಸ್ಯರನ್ನು ಪಿಡಿಒಗಳು ಮತ್ತು ಮೇಲಿನ ಹಂತದ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಜನಪ್ರತಿನಿಧಿಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯದ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ನೇತೃತ್ವದಲ್ಲಿ ಗ್ರಾಮ ಪಂಚಾಯತಿಗಳ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. “ಅಧಿಕಾರಿಗಳು ಗ್ರಾಮ ಪಂಚಾಯತಿ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದು, ಗ್ರಾಮ ಪಂಚಾಯತಿಗಳನ್ನು ತಮ್ಮ ಕೈಕೆಳಗಿನ ಶಾಖಾ ಕಚೇರಿಗಳನ್ನಾಗಿ ಮಾಡಿಕೊಂಡಿದ್ದಾರೆ. ಹೀಗಾಗಿ, ಗ್ರಾಮ ಪಂಚಾಯಿತಿಗಳಿಗೆ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಕೇವಲ ಮೂಕ ಪ್ರೇಕ್ಷಕರಾಗಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಅಧಿಕಾರಿಗಳ ಹಸ್ತಕ್ಷೇಪದಿಂದ ಪಂಚಾಯತ್ ರಾಜ್ ವ್ಯವಸ್ಥೆಯ ಮೂಲಕ ಭಾರತದ ಕಟ್ಟಕಡೆಯ ವ್ಯಕ್ತಿಯನ್ನು ಪ್ರಭುವನ್ನಾಗಿಸಬೇಕೆಂಬ ಗಾಂಧಿ ಆಶಯ ಮಣ್ಣು ಪಾಲಾಗಿದೆ.  ದೇಶದ ಅಭಿವೃದ್ಧಿಯಲ್ಲಿ ಎಲ್ಲರೂ ಭಾಗಿಯಾಗಬೇಕು ಎಂಬ ಆಶಯದಿಂದ ಅಂಬೇಡ್ಕರ್ ಒದಗಿಸಿದ ಮೀಸಲಾತಿಯ ಉದ್ದೇಶ ವಿಫಲವಾಗಿದೆ. ಗ್ರಾಮ ಪಂಚಾಯತಿ ಸದಸ್ಯರು ಅಧಿಕಾರವಿದ್ದರೂ ಚಲಾಯಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸ್ವತಂತ್ರ್ಯ ಸ್ಥಳೀಯ ಸರ್ಕಾರಗಳಾಗಿ ಕಾರ್ಯನಿರ್ವಹಿಸಬೇಕಿದ್ದ ಗ್ರಾಮ ಪಂಚಾಯತಿಗಳು ತಮ್ಮ ಸ್ವತಂತ್ರ್ಯವನ್ನು ಕಳೆದುಕೊಂಡಿವೆ. ಸಂವಿಧಾನದ ಮತ್ತು ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆಯ ಆಶಯದಂತೆ ಗ್ರಾಮ ಪಂಚಾಯಿತಿಗಳು ಕಾರ್ಯನಿರ್ವಹಿಸುವಂತಾಬೇಕು. ಅದಕ್ಕಾಗಿ, ಗ್ರಾಮ ಪಂಚಾಯತಿ ಆಡಳಿತದಲ್ಲಿ ಪಿಡಿಒ ಮತ್ತು ಅಧಿಕಾರಿಗಳ ಹಸ್ತಕ್ಷೇಪ ಮತ್ತು ಪ್ರಭಾವನ್ನು ನಿಯಂತ್ರಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಕೇರಳದಲ್ಲಿ ಗ್ರಾಮ ಪಂಚಾಯತಿಗಳ ಅಧ್ಯಕ್ಷರಿಗೆ 15,000 ರೂ. ಉಪಾಧ್ಯಕ್ಷರಿಗೆ 12,500 ರೂ. ಹಾಗೂ ಸದಸ್ಯರಿಗೆ 7,000 ರೂ. ಗೌರವಧನ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಗೌರವಧನ ಹೆಚ್ಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

  1. ಗ್ರಾಮ ಪಂಚಾಯತಿಗಳಿಗೆ ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಲು ಬೇಕಾಗುವ ಜವಾಬ್ದಾರಿ ನಕ್ಷೆ ರಚನೆ ಮಾಡಬೇಕು.
  2. ಪ್ರಜಾಪ್ರಭುತ್ವದ ಮೂಲಘಟಕಗಳಾದ ಪ್ರಜೆಗಳಿಗೆ ಅಧಿಕಾರ ನೀಡಲು ಗ್ರಾಮಸಭಾಗಳಿಗೆ ನಿಯಮಗಳನ್ನು ರಚಿಸಬೇಕು.
  3. ಸರ್ಕಾರದ ವಿವಿಧ ಯೋಜನೆಗಳ ಸೇವೆಯನ್ನು ಜನರ ಬಳಿಗೆ ಕೊಂಡೊಯ್ಯುವ ದೃಷ್ಟಿಯಿಂದ ಬಾಪುಜಿ ಸೇವಾ ಕೇಂದ್ರಗಳ ಬಲವರ್ಧನೆ, ಮುಂಚೂಣಿ ಕಾರ್ಯಾಲಯಗಳ ಸ್ಥಾಪನೆ ಮಾಡಬೇಕು.
  4. 29 ವಿಷಯಗಳಿಗೆ ಸಂಬಂಧಿಸಿದ ಎಲ್ಲ ಇಲಾಖೆಗಳು ಪಂಚಾಯತ್ ರಾಜ್ ಸಂಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಸುವಂತಾಗಲು ಅಧಿಕಾರ ವಿಕೇಂದ್ರೀಕರಣ ಕಾಯ್ದೆ ರಚನೆ ಮಾಡಬೇಕು.
  5. ಗ್ರಾಮ ಪಂಚಾಯತಿಯ ಆಡಳಿತ ವ್ಯವಸ್ಥಿತವಾಗಿ ನಡೆಯಲು ಕಚೇರಿ ನಿರ್ವಹಣ ಕೈಪಿಡಿ ರಚಿಸಬೇಕು.
  6. ಇ-ಸ್ವತ್ತು ಆಂದೋಲನದ ಮೂಲಕ ಗ್ರಾಮ ಪಂಚಾಯತಿಯ ತೆರಿಗೆಗೆ ಒಳಪಟ್ಟಿರುವ ಎಲ್ಲ ಆಸ್ತಿಗಳಿಗೆ ಈ ಸ್ವತ್ತು ದಾಖಲೆ ಸೃಜನೆ ಮಾಡಿ ಹಂಚಬೇಕು.
  7. ಪಂಚಾಯತಿ ಸದಸ್ಯರನ್ನು ರಾಜ್ಯ ಶಿಷ್ಟಾಚಾರಕ್ಕೆ ಒಳಪಡಿಸಬೇಕು.
  8. ಕೇರಳ ಮಾದರಿಯ ಗೌರವಧನ ಹೆಚ್ಚಳ ಮಾಡಬೇಕು.
  9. ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನದಲ್ಲಿರುವ ತೊಡಕುಗಳ ನಿವಾರಣೆ ಮಾಡಬೇಕು.
  10. ಅಧಿಕಾರಿಗಳ ಹಸ್ತಕ್ಷೇಪವನ್ನು ತಡೆಯಬೇಕು. ಚುನಾಯಿತ ಸದಸ್ಯರಿಗೆ ಅಧಿಕಾರ ನೀಡಬೇಕು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಡಿಯಾ ಒಕ್ಕೂಟಕ್ಕೆ ಹೆದರಿ ಅರವಿಂದ್ ಕೇಜ್ರಿವಾಲ್‌ ಬಂಧಿಸಲು ಕೇಂದ್ರದಿಂದ ಸಂಚು: ಮೋಹನ್ ದಾಸರಿ

"ಇಂಡಿಯಾ ಒಕ್ಕೂಟದಲ್ಲಿ ಎಎಪಿ-ಕಾಂಗ್ರೆಸ್ ನಡುವೆ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ...

ರೈಲಿಗೆ ಬೆಂಕಿ ಹಚ್ಚಿ ಸುಡುತ್ತೇವೆ ಎಂದವರನ್ನು ಒದ್ದು ಒಳಗೆ ಹಾಕಬೇಕು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳುತ್ತಿದ್ದ ರೈಲಿಗೆ ಹೊಸಪೇಟೆಯಲ್ಲಿ ಬೆಂಕಿ ಹಚ್ಚಿ ಸುಡುತ್ತೇವೆ...

ರಾಯಚೂರು | ಮಳಿಗೆ ತೆರವು ಮಾಡಲು ಹೋಗಿದ್ದ ನಗರಸಭೆ ಸಿಬ್ಬಂದಿ; ಮಾರಕಾಸ್ತ್ರ ಹಿಡಿದು ಬೆದರಿಕೆ

ನಗರಸಭೆ ವ್ಯಾಪ್ತಿಗೆ ಬರುವ ಮಳಿಗೆಗಳನ್ನು ಖಾಲಿಮಾಡಿಸಲು ಹೋಗಿದ್ದ ನಗರಸಭೆ ಸಿಬ್ಬಂದಿಗಳಿಗೆ ಮಾರಕಾಸ್ತ್ರ...

ರಾಯಚೂರು | ಮಾ.3ರಿಂದ 5ರವರೆಗೆ ತೆಲಂಗಾಣದಲ್ಲಿ ರಾಷ್ಟ್ರೀಯ ಐಕ್ಯತಾ ಸಮ್ಮೇಳನ

ಸಿಪಿಐ(ಎಂಎಲ್) ಮಾಸ್ ಲೈನ್ ಸಮಿತಿಯಿಂದ ಮಾ.3ರಿಂದ 5ರವರೆಗೆ ತೆಲಂಗಾಣ ಖಮ್ಮಂನಲ್ಲಿ ರಾಷ್ಟ್ರೀಯ...