ಬಡವರ ಕೆಲಸದಲ್ಲಿ ಉದಾಸೀನತೆ ತೋರುವ ಅಧಿಕಾರಿಗಳ ಶೀಘ್ರ ವರ್ಗಾವಣೆ : ಶಾಸಕ ಅಶೋಕ್ ರೈ

Date:

Advertisements

ಅಕ್ರಮ ಸಕ್ರಮ ಕಡತವಿಲೇವಾರಿ, 94 ಸಿ, 94 ಸಿ ಸಿ ಕಡತ ವಿಲೇವಾರಿ ಮಾಡುವಲ್ಲಿ ತೀವ್ರ ಉದಾಸೀನತೆ ತೋರಿ ಬಡವರ ಕೆಲಸ ಮಾಡುವಲ್ಲಿ ವಿಫಲವಾಗಿರುವ ಬಂಟ್ವಾಳ ತಹಶೀಲ್ದಾರ್ ಸಹಿತ ಹಲವು ಕಂದಾಯ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗುವುದು ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ರೈ ಹೇಳಿದರು.

ಅವರು ಬಂಟ್ವಾಳ ತಾಲೂಕು ಕೃಷಿ ಇಲಾಖೆ ವತಿಯಿಂದ ವಿಟ್ಲದಲ್ಲಿ ಕೃಷಿ ಸೌಲಭ್ಯ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.

WhatsApp Image 2025 08 26 at 1.30.10 PM

94 ಸಿ ,ಸಿಸಿ ಕೇವಲ 5 ಅಥವಾ 9 ಸೆಂಟ್ಸ್ ಜಾಗದಲ್ಲಿ‌ಮನೆ ಕಟ್ಟಿ ವಾಸವಿರುವ ಬಡವರಿಗೆ ಜಾಗದ ಹಕ್ಕು ಪತ್ರ ಕೊಡ್ಲಿಕ್ಕೆ ಹಿಂದೆ ಮುಂದೆ ನೋಡುತ್ತಾರೆ.‌ ಯಾವ ಅಧಿಕಾರಿಯೂ ಅವರ ಜಾಗವನ್ನು ಕೊಡುವುದಲ್ಲ, ಶಾಸಕನಾದ ‌ನನ್ನ ಜಾಗವನ್ನು ಕೊಡುವುದಲ್ಲ, ಅನೇಕ ವರ್ಷಗಳಿಂದ ಮನೆ ಕಟ್ಟಿಕೊಂಡಿರುವ ಕುಟುಂಬಗಳಿಗೆ ಇವರು ಯಾಕೆ ಹಕ್ಕು ಪತ್ರ ಕೊಡುತ್ತಿಲ್ಲ? ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಗಣೇಶ ಮೂರ್ತಿಗಳ ವಿಸರ್ಜನೆ | 41 ಕಲ್ಯಾಣಿ, 489 ಮೊಬೈಲ್ ಟ್ಯಾಂಕ್ ವ್ಯವಸ್ಥೆ ಕಲ್ಪಿಸಿದ ಬಿಬಿಎಂಪಿ

ಯಾರೆಲ್ಲಾ ಇದಕ್ಕೆ ಅರ್ಜಿ ಕೊಟ್ಟಿದ್ದಾರೋ ಕಾನೂನು ಪ್ರಕಾರ ಸರಿ ಇದ್ದ ಎಲ್ಲರಿಗೂ ಹಕ್ಕು ಪತ್ರ ಕೊಟ್ಟೇ ಕೊಡ್ತೇನೆ. ಬಡವರ ಪರ ಕಾಳಜಿ ಇಲ್ಲದ, ಉದಾಸೀನತೆ ತೋರುವ ಅಧಿಕಾರಿಗಳನ್ನು ಶೀಘ್ರವೇ ಎತ್ತಂಗಡಿ ಮಾಡಲಾಗುವುದು ಎಂದು ಹೇಳಿದ ಶಾಸಕರು, ಇದರಲ್ಲಿ ಯಾವುದೇ ರಾಜಿಯ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X