ಈ ದಿನ.ಕಾಮ್ ವರದಿ ಫಲಶೃತಿ | ಕೊನೆಗೂ ಶತಾಯುಷಿ ಅಜ್ಜಿಯ ಖಾತೆಗೆ ಜಮೆಯಾಯ್ತು ವೃದ್ದಾಪ್ಯ ವೇತನ

Date:

ಭಾಲ್ಕಿ ತಾಲೂಕಿನ ಕಪಲಾಪುರ ಗ್ರಾಮದ ಲಕ್ಷ್ಮೀಬಾಯಿ ಮಹಾಪುರೆ ಎಂಬ 110 ವರ್ಷದ ಅಜ್ಜಿಗೆ ಕೊನೆಗೂ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ದಾಪ್ಯ ವೇತನ ಪಿಂಚಣಿ ಯೋಜನೆಯಡಿ ಮಾಸಿಕ ಪಿಂಚಣಿ ಮಂಜೂರಾಗಿದೆ.

- Advertisement -

ಲಕ್ಷ್ಮೀಬಾಯಿ ಅಜ್ಜಿಗೆ ಸುಮಾರು 10 ವರ್ಷಗಳಿಂದ ವೃದ್ದಾಪ್ಯ ವೇತನ ಸ್ಥಗಿತವಾಗಿತ್ತು. ಆಧಾರ್ ಕಾರ್ಡ್ ದೇಶದಲ್ಲಿ ಜಾರಿಗೆ ಬರುವುದಕ್ಕೂ ಮುಂಚೆಯಿಂದ ವೃದ್ದಾಪ್ಯ ವೇತನ ಪಡೆಯುತ್ತಿದ್ದ ಅಜ್ಜಿಗೆ, ನೂರು ವರ್ಷ ಪೂರೈಸಿದ ನಂತರ ಅಧಿಕಾರಿಗಳು ವೇತನಕ್ಕೆ ಕತ್ತರಿ ಹಾಕಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅಜ್ಜಿಗೆ 110 ವರ್ಷ ವಯಸ್ಸಾದರೂ ಅವರ ಹೆಸರಿಗೆ ಚುನಾವಣೆ ಮತದಾರ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ಸೇರಿದಂತೆ ಬದುಕಿಗೆ ಯಾವುದೇ ದಾಖಲೆಗಳಿಲ್ಲದೇ, ಸಂಕಷ್ಟದಿಂದ ದಿನ ದೂಡುತ್ತಿದ್ದರು.

ಈ ಬಗ್ಗೆ ಮಾಹಿತಿ ಅರಿತುಕೊಂಡ ʼಈ ದಿನ. ಕಾಮ್‌ʼ ನಲ್ಲಿ 2024ರ ಜನವರಿ 5ರಂದು ʼಶತಾಯುಷಿ ಅಜ್ಜಿಗೆ ಶಾಪವಾಯ್ತು ವಯಸ್ಸು?; ವೃದ್ದಾಪ್ಯ ವೇತನಕ್ಕೆ ಅಧಿಕಾರಿಗಳ ಕತ್ತರಿʼ ಎಂಬ ಶೀರ್ಷಿಕೆಯಡಿ ವಿಸ್ತೃತ ವರದಿ ಪ್ರಕಟವಾಗಿತ್ತು. ಅಲ್ಲದೇ, ವಿಡಿಯೋ ವರದಿ ಕೂಡ ಯೂಟ್ಯೂಬ್‌ನಲ್ಲಿ ಪ್ರಕಟಿಸಿತ್ತು.

ಲಕ್ಷ್ಮಿಬಾಯಿ ಕಪಲಾಪುರೆ
ʼಈದಿನ.ಕಾಮ್‌ʼ ವರದಿ ಪರಿಣಾಮ ಕಂದಾಯ ಇಲಾಖೆ ಅಧಿಕಾರಿಗಳು ಮನೆಗೆ ಭೇಟಿ ನೀಡಿದ ವೇಳೆ

ಇದಕ್ಕೆ ಸ್ಪಂದಿಸಿದ ಭಾಲ್ಕಿ ತಾಲೂಕು ಕಂದಾಯ ಇಲಾಖೆಯ ಅಧಿಕಾರಿಗಳು ಮರುದಿನವೇ (ಜ.6) ರಂದು ಕಪಲಾಪುರ ಗ್ರಾಮದ ಇಳಿವಯಸ್ಸಿನ ಲಕ್ಷ್ಮೀಬಾಯಿ ಅವರ ಮನೆಗೆ ದೌಡಾಯಿಸಿ, ಅಜ್ಜಿಯ ಬದುಕಿಗೆ ಯಾವುದೇ ದಾಖಲೆ ಇಲ್ಲ ಎಂಬುದು ಪರಿಶೀಲನೆ ಮೂಲಕ ಖಚಿತಪಡಿಸಿಕೊಂಡು ಹೊಸ ದಾಖಲೆ ಮಾಡಿಕೊಡಲು ನೋಂದಾಯಿಸಿಕೊಂಡಿದ್ದರು. ಆನಂತರ ಆಧಾರ್‌, ಮತದಾರರ ಚೀಟಿ, ಬ್ಯಾಂಕ್‌ ಪಾಸ್‌ ಬುಕ್‌ ಮಾಡಿಸಲು ಕುಟುಂಬಸ್ಥರಿಗೆ ಅಧಿಕಾರಿಗಳು ಸಹಕರಿಸಿ ಕೊನೆಗೆ ಫೆ.26 ರಂದು ವೃದ್ದಾಪ್ಯ ವೇತನ ಮಂಜೂರು ಮಾಡಿದರು.

ಶತಾಯುಷಿ ಅಜ್ಜಿ ಮತದಾನ ಮಾಡಿದರು.
ಲೋಕಸಭಾ ಚುನಾವಣೆಯಲ್ಲಿ ಶತಾಯುಷಿ ಲಕ್ಷ್ಮಿಬಾಯಿ ಮತದಾನ ಮಾಡಿದ ಸಂದರ್ಭ.

ಲಕ್ಷ್ಮೀಬಾಯಿ ಅಜ್ಜಿಗೆ ಚುನಾವಣೆ ಚೀಟಿ ಇಲ್ಲದ ಕಾರಣ ಕಳೆದ 10-15 ವರ್ಷಗಳಿಂದ ಮತದಾನವೇ ಮಾಡಿರಲಿಲ್ಲ. ʼಈ ದಿನ.ಕಾಮ್ʼ ವರದಿಯ ಪರಿಣಾಮ ಹೊಸ ಮತದಾರರ ಗುರುತಿನ ಚೀಟಿ ಬಂದಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಜ್ಜಿ ಗ್ರಾಮದ ಮತಗಟ್ಟೆಗೆ ತೆರಳಿ ಮತದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದರು. ಇದೀಗ ಜುಲೈ 12ರಂದು ಅಂಚೆ ಕಚೇರಿಯಲ್ಲಿರುವ ಲಕ್ಷ್ಮಿಬಾಯಿ ಅವರ ಖಾತೆಗೆ ವೃದ್ದಾಪ್ಯ ವೇತನದ ಒಂದು ತಿಂಗಳ ಹಣ ವರ್ಗಾವಣೆ ಆಗಿದೆ.

ʼನಮ್ಮ ಅಜ್ಜಿಗೆ ನೂರು ವಯಸ್ಸು ದಾಟಿದೆ, ಆದರೆ ಯಾವುದೇ ದಾಖಲೆ ಇಲ್ಲ, ವೃದ್ದಾಪ್ಯ ವೇತನ ಕೂಡ ಬಂದ್‌ ಆಗಿರುವ ಬಗ್ಗೆ ಈ ದಿನ.ಕಾಮ್‌ ಬೀದರ್‌ ಜಿಲ್ಲಾ ವರದಿಗಾರ ಬಾಲಾಜಿ ಕುಂಬಾರ್‌ ಅವರಿಗೆ ಕರೆ ಮೂಲಕ ಮಾಹಿತಿ ನೀಡಿದ್ದೆ. ಅವರು ಖುದ್ದು ಮನೆಗೆ ಭೇಟಿ ವಿಶೇಷ ಸುದ್ದಿ ಪ್ರಕಟಿಸಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರುʼ ಎಂದು ಅಜ್ಜಿಯ ಮೊಮ್ಮಗ ಅಂಬಾದಾಸ ಮಹಾಪುರೆ ಹೇಳುತ್ತಾರೆ.

ಈ ಸುದ್ದಿ ಓದಿದ್ದೀರಾ? ಶತಾಯುಷಿ ಅಜ್ಜಿಗೆ ಶಾಪವಾಯ್ತ ವಯಸ್ಸು?; ವೃದ್ದಾಪ್ಯ ವೇತನಕ್ಕೆ ಅಧಿಕಾರಿಗಳ ಕತ್ತರಿ

ಸುದ್ದಿ ಪ್ರಕಟವಾದ ಬಳಿಕ ಕಂದಾಯ ಇಲಾಖೆ ಅಧಿಕಾರಿಗಳು ಮನೆಗೆ ಭೇಟಿ ನೀಡಿ ಎಲ್ಲ ದಾಖಲೆ ಮಾಡಿಸಿ ವೃದ್ದಾಪ್ಯ ವೇತನ ಮತ್ತೆ ಜಾರಿ ಮಾಡುವುದಾಗಿ ಭರವಸೆ ನೀಡಿದ್ದರು. ಇದೀಗ ಅಜ್ಜಿಗೆ ಮೊದಲ ಕಂತಿನ ಹಣ ಬಂದಿದೆ. ಇದರಿಂದ ಅಜ್ಜಿ ಹಾಗೂ ನಮಗೂ ತುಂಬಾ ಖುಷಿಯಾಗಿದೆ. ಇದಕ್ಕೆ ನಿರಂತರವಾಗಿ ನಮ್ಮೊಂದಿಗೆ ಸ್ಪಂದಿಸಿ ಈ ದಿನ.ಕಾಮ್‌ ಮಾಧ್ಯಮ ತಂಡ ಹಾಗೂ ಕಂದಾಯ ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...