ಶಾಸಕ ಪ್ರದೀಪ್ ಈಶ್ವರ್ ಸಹಾಯ ಅರಸಿ ಬಂದ ವೃದ್ಧೆ; ಬರಿಗೈನಲ್ಲೇ ವಾಪಸ್

Date:

Advertisements

ಸದ್ಯ ರಾಜ್ಯ ರಾಜಕಾರಣದಲ್ಲಿ ತೆಲುಗು-ಕನ್ನಡ ಮಿಶ್ರಿತ ಡೈಲಾಗ್‌ಗಳಿಂದ ಅಬ್ಬರಿಸಿ ಬೊಬ್ಬಿರಿಯುತ್ತಿರುವವರು ಶಾಸಕ ಪ್ರದೀಪ್ ಈಶ್ವರ್. ಹಳ್ಳಿಗಳನ್ನು ಸುತ್ತುತ್ತ, ಹಲವು ಜನರನ್ನು ಮಾತನಾಡಿಸುತ್ತ, ಅದೆಲ್ಲವಲ್ಲೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಜನಪ್ರಿಯತೆ ಗಳಿಸುತ್ತಿದ್ದಾರೆ. ಅವರು ಇತ್ತೀಚೆಗೆ, ‘ನಮಸ್ತೆ ಚಿಕ್ಕಬಳ್ಳಾಪುರ’ ಕಾರ್ಯಕ್ರಮ ಮಾಡಿ, ಅಸಹಾಯಕರಿಗೆ ಹಣಕಾಸಿನ ನೆರವು ನೀಡುವುದಾಗಿ ಘೋಷಿಸಿದ್ದರು. ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದನ್ನು ಗಮನಿಸಿದ್ದ ಕಲಬುರಗಿಯ ಬಡ ವೃದ್ಧೆಯೊಬ್ಬರು ಚಿಕ್ಕಬಳ್ಳಾಪುರಕ್ಕೆ ಬಂದಿದ್ದರು. ಆದರೆ, ಶಾಸಕ ಪ್ರದೀಪ್‌ ಈಶ್ವರ್‌ ಅವರನ್ನು ಭೇಟಿ ಮಾಡಲಾಗದೆ ಬರಿಗೈನಲ್ಲಿ ವಾಪಸ್‌ ಹೋಗಿದ್ದಾರೆ.

ಕಲಬುರಗಿಯ ವೃದ್ಧೆ ಕಮಲಾಬಾಯಿ ಅವರ ಮಗ ಮಂಜುನಾಥ್‌ ಅವರಿಗೆ ಕಳೆದ ವರ್ಷ ಮೆದುಳಿನ ಶಸ್ತ್ರಚಿಕಿತ್ಸೆ ನಡೆದಿತ್ತು. ಶಸ್ತ್ರಚಿಕಿತ್ಸೆಗಾಗಿ ಬಡ ವೃದ್ಧೆ ಮತ್ತು ಆಕೆಯ ಮಗ ಸಾಲ ಮಾಡಿ ಹಣ ಹೊಂದಿಸಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ, ನಂತರದ ದಿನಗಳಲ್ಲಿ ಅವರಿಗೆ ಬದುಕು ಸಾಗಿಸುವುದು ದುಸ್ತರವಾಗಿತ್ತು. ಸಾಲಗಾರರು ಮನೆ ಮುಂದೆ ಬಂದು ಹಣಕ್ಕಾಗಿ ಮತ್ತೆ ಮತ್ತೆ ಪೀಡಿಸುತ್ತಿದ್ದರು.

ವೃದ್ಧೆ ಮತ್ತು ಆಕೆಯ ಮಗ ಮುಖ್ಯಮಂತ್ರಿ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸಿದ್ದರು. ಹಿಂದಿನ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರನ್ನೂ ಭೇಟಿ ಮಾಡಿದ್ದರು. ಆದರೆ, ಅವರಿಗೆ ಒಂದು ರೂಪಾಯಿ ಪರಿಹಾರವಾಗಲಿ, ಸಹಾಯಧನವಾಗಲಿ ಸಿಕ್ಕಿರಲಿಲ್ಲ.

Advertisements

ಈ ಸುದ್ದಿ ಓದಿದ್ದೀರಾ?: ಓದಿದ್ದು ಪಿಯುಸಿ, ವೃತ್ತಿ ಮೆಡಿಕಲ್ ಮೇಷ್ಟ್ರು; ‘ದೈತ್ಯ ಸಂಹಾರಿ’ ಪ್ರದೀಪ್ ಈಶ್ವರ್ ನಿಜಕ್ಕೂ ಎಂಥವರು?

ತಮ್ಮ ಬದುಕು ಇಷ್ಟೇ ಎಂದು ಭಾವಿಸಿ ನಿರಾಶೆಯಲ್ಲಿ ಜೀವನ ದೂಡುತ್ತಿದ್ದ ವೃದ್ಧೆ ಮತ್ತು ಆಕೆಯ ಮಗನಿಗೆ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಪ್ರದೀಪ್ ಈಶ್ವರ್ ಹೊಸ ಭರವಸೆಯಾಗಿ ಕಂಡಿದ್ದರು. ಅವರನ್ನು ಭೇಟಿ ಮಾಡಲು, ಕಲಬುರಗಿಯಿಂದ ಚಿಕ್ಕಬಳ್ಳಾಪುರಕ್ಕೆ 500 ಕಿ.ಮೀ. ಪ್ರಯಾಣ ಮಾಡಿ ಬಂದಿದ್ದರು. ಆದರೆ, ಅವರಿಗೆ ಶಾಸಕ ಪ್ರದೀಪ್‌ ಈಶ್ವರ್‌ ಸಂಪರ್ಕಕ್ಕೆ ಸಿಗಲಿಲ್ಲ. ಪರಿಣಾಮ ಮತ್ತದೇ ನಿರಾಶೆಯಿಂದ ವಾಪಸ್‌ ತೆರಳಿದ್ದಾರೆ.

“ಬಹಳಷ್ಟು ಮಂದಿಗೆ ಶಾಸಕ ಪ್ರದೀಪ್‌ ಈಶ್ವರ್‌ ಸಹಾಯ ಮಾಡುತ್ತಿದ್ದಾರೆಂದು ನಮಗೆ ಗೊತ್ತಾಯಿತು. ಅವರ ನೆರವು ಕೇಳಲು ತಮ್ಮೂರಿಂದ ಚಿಕ್ಕಬಳ್ಳಾಪುರಕ್ಕೆ ಬಂದೆವು. ಆದರೆ, ಅವರು ಸಿಗಲಿಲ್ಲ. ಫೋನ್‌ ಮೂಲಕವೂ ಸಂಪರ್ಕಿಸಿದೆವು, ಅವರು ಫೋನ್‌ ಕರೆಯನ್ನೂ ಸ್ವೀಕರಿಸಲಿಲ್ಲ” ಎಂದು ವೃದ್ಧೆ ಕಮಲಾಬಾಯಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X