ಕೋಲಾರ | ಏ.13ಕ್ಕೆ ಜಾನುವಾರುಗಳೊಂದಿಗೆ ಸಂಸದರ ಕಚೇರಿಗೆ ರೈತರಿಂದ ಮುತ್ತಿಗೆ

Date:

  • ಅಮುಲ್‌ – ನಂದಿನಿ ವಿಲೀನ ವಿರೋಧಿಸಿ ಪ್ರಭಟನೆ
  • ಎಪಿಎಂಸಿ ಆವರಣದಲ್ಲಿ ನಡೆದ ರೈತ ಸಂಘದ ಸಭೆ

ಕೆಎಂಎಫ್‌ನ ನಂದಿನಿ ಮತ್ತು ಅಮುಲ್‌ ವಿಲೀನ ವಿರೋಧಿಸಿ ‘ಗೋ ಬ್ಯಾಕ್‌ ಅಮುಲ್‌’ ಎಂಬ ಘೋಷಣೆಯೊಂದಿಗೆ ಏಪ್ರಿಲ್‌ 13ರಂದು ಜಾನುವಾರುಗಳೊಂದಿಗೆ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕೋಲಾರ ನಗರದ ಎಪಿಎಂಸಿ ಆವರಣದಲ್ಲಿ ನಡೆದ ರೈತಸಂಘದ ಸಭೆಯಲ್ಲಿ ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್‌ ಮಾತನಾಡಿ, “ಗೋ ಬ್ಯಾಕ್‌ ಅಮುಲ್‌ ಎಂಬ ಘೋಷಣೆಯೊಂದಿಗೆ ಕನ್ನಡಿಗರ ಆಸ್ತಿ, ರೈತ ಕೂಲಿ ಕಾರ್ಮಿಕರ ಸ್ವಾಭಿಮಾನದ ಬದುಕು ಕಲ್ಪಿಸಿ ಕೊಟ್ಟಿರುವ ನಂದಿನಿ ಹಾಲಿಗೆ ಪರ್ಯಾಯವಾಗಿ, ಗುಜರಾತಿನ ಅಮುಲ್‌ ಹಾಲಿನ ಉತ್ಪನ್ನಗಳ ಮಾರಾಟಕ್ಕೆ ಮಾರುಕಟ್ಟೆ ಒದಗಿಸಲು ಹೊರಟಿರುವ ಆದೇಶ ವಾಪಸ್‌ ಪಡೆಯದೇ ಇದ್ದರೆ, ಮತ ಕೇಳಲು ಬರುವ ಬಿಜೆಪಿ ನಾಯಕರಿಗೆ ಗ್ರಾಮೀಣ ಪ್ರದೇಶಗಳಲ್ಲಿ ಪೊರಕೆ ಚಳುವಳಿ ಮಾಡಬೇಕಾಗುತ್ತದೆ” ಎಂದು ಜನಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ ನಾರಾಯಣಗೌಡ ಮಾತನಾಡಿ, “ಕೋಟ್ಯಾಂತರ ಗ್ರಾಮೀಣ ಪ್ರದೇಶದ ರೈತಾಪಿ ಕುಟುಂಬಗಳಿಗೆ ಸಾಂಕ್ರಾಮಿಕ ರೋಗಗಳು ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಆರ್ಥಿಕವಾಗಿ ಸಂಸಾರದ ಕೈ ಹಿಡಿದ ಏಕೈಕ ಉದ್ಯಮ ಹೈನುಗಾರಿಕೆ. ಅಂತಹ ಉದ್ಯಮವನ್ನೇ ಹೊರ ರಾಜ್ಯದವರು ಕಿತ್ತುಕೊಳ್ಳಲು ಹೊರಟಿರುವುದು ದುರಾದೃಷ್ಟಕರ” ಎಂದು ಬೇಸರ ವ್ಯಕ್ತಪಡಿಸಿದರು.

“ಕೇಂದ್ರ ಸರ್ಕಾರದ ಆದೇಶವನ್ನು ತಿರಸ್ಕರಿಸದೆ ಅವರ ಮಾತಿಗೆ ಬೆನ್ನೆಲುಬಾಗಿ ರಾಜ್ಯದ ರೈತರೇ ಅಮುಲ್‌ ಉತ್ಪನ್ನಗಳನ್ನು ಬಯಸಿದ್ದಾರೆಂದು ಹೇಳಿಕೆ ನೀಡುತ್ತಿರುವುದು ನೋಡಿದರೆ, ಮುಂದಿನ ದಿನಗಳಲ್ಲಿ ಕರ್ನಾಟಕವನ್ನೇ ಮಹಾರಾಷ್ಟ್ರಕ್ಕೆ ಮಾರಾಟ ಮಾಡುವ ಕಾಲ ದೂರವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಭಾಷೆಯಿಂದ ಹಿಡಿದು ಆಹಾರದವರೆಗೂ ಕರ್ನಾಟಕವನ್ನೇ ಗುರಿಯಾಗಿಸಿಕೊಂಡಿರುವುದಕ್ಕೆ ಕಾರಣವಾದರೂ ಏನು? ಹಿರಿಯರು ಕಟ್ಟಿ ಬೆಳೆಸಿದಂತಹ ನಂದಿನಿಯನ್ನೇ ಉಳಿಸಿಕೊಳ್ಳಲಾಗದ ಜನಪ್ರತಿನಿಧಿಗಳಿಗೆ ಮಾನ ಮರ್ಯಾದೆ ಇದೆಯೇ? ಇದ್ದರೆ ಕೂಡಲೇ ಅಮುಲ್‌ ತಿರಸ್ಕರಿಸಿ, ರೈತಾಪಿ ವರ್ಗದ ಜೀವನ ಉಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ನಂದಿನಿ – ಅಮೂಲ್‌ ವಿಲೀನ ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ

“24 ಗಂಟೆಯಲ್ಲಿ ಕನ್ನಡಿಗರ ನಂದಿನಿಯನ್ನು ನಿರ್ಲಕ್ಷ್ಯ ಮಾಡಿ ಅಮುಲ್‌ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡಿರುವ ಆದೇಶವನ್ನು ವಾಪಸ್‌ ಪಡೆಯದೇ ಇದ್ದರೆ, ಜಾನುವಾರುಗಳ ಸಮೇತ ಸಂಸದ ಕಚೇರಿ ಏಪ್ರೀಲ್‌ 13ರಂದು ಮುತ್ತಿಗೆ ಹಾಕಿ ನ್ಯಾಯ ಪಡೆದುಕೊಳ್ಳುತ್ತೇವೆ. ನಮ್ಮ ಹೋರಾಟ ನಮ್ಮ ಕನ್ನಡಿಗರ ಆಸ್ತಿಯಾದ ನಂದಿನಿಯ ಉಳಿವಿಗಾಗಿ” ಎಂದು ಹೇಳಿದರು.

ಈ ವೇಳೆ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಫಾರೂಖ್‌ ಪಾಷ, ರಾಜ್ಯ ಕಾರ್ಯಾಧ್ಯಕ್ಷ ಬಂಗಾರಿ ಮಂಜು, ಕೋಲಾರ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್‌, ಹೆಬ್ಬಣಿ ಆನಂದರೆಡ್ಡಿ, ಭಾಸ್ಕರ್‌, ರಾಜೇಶ್‌, ಆದಿಲ್‌ ಪಾಷ, ವಿಜಯ್‌ ಪಾಲ್‌, ಜುಬೇರ್‌ ಪಾಷ, ಪದ್ಮಘಟ್ಟ ಧರ್ಮ, ನಂಗಲಿ ನಾಗೇಶ್‌, ಗಿರೀಶ್‌, ರಾಮಸಾಗರ ವೇಣು, ಮಾಸ್ತಿ ವೆಂಕಟೇಶ್‌, ಯಲ್ಲಣ್ಣ ಹಾಗೂ ಇತರರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಕಸದ ರಾಶಿಯಿಂದ ಸೂಸುವ ದಟ್ಟ ಹೊಗೆ; ಜನರ ಪರದಾಟ

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ದಶಕಗಳಷ್ಟು ಹಳೆಯದಾದ ಕಸದ ರಾಶಿಗಳಿದ್ದು, ಸಾಕಷ್ಟು ಸಮಸ್ಯೆಗಳನ್ನು...

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಮಕ್ಕಳಿಗಿದು ಸುರಕ್ಷಿತ ತಾಣವೇ?

ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ನಾಲ್ವರು ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೂ ರಾಜ್ಯದ...

ಹೆಣ್ಣುಭ್ರೂಣ ಹತ್ಯೆ ಪ್ರಕರಣ: 9 ಮಂದಿ ಆರೋಪಿಗಳ ಬಂಧನ; ಹಲವರ ಕೈವಾಡವಿರುವ ಶಂಕೆ

ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಪ್ರಕರಣದ ಆರೋಪಿಗಳು 1,500ಕ್ಕೂ ಅಧಿಕ...

ಬೆಂಗಳೂರು | ನ. 29ರಂದು ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ; ಕನ್ನಡ-ಉರ್ದು ಕವಿಗೋಷ್ಠಿ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ...