ಬೀದರ್‌ | ಫೆ.24ಕ್ಕೆ ಸುಭಾಷ್‌ ಚಂದ್ರ ಬೋಸ್‌ ಪ್ರೌಢಶಾಲೆಯಲ್ಲಿ ಗುರುವಂದನಾ ಸಮಾವೇಶ

Date:

Advertisements

ಔರಾದ ತಾಲೂಕಿನ ಸಂತಪೂರ ಗ್ರಾಮದ ಸುಭಾಷ ಚಂದ್ರ ಬೋಸ್‌ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳ ಒಕ್ಕೂಟದಿಂದ ಫೆ.24ರಂದು ʼಗುರುವಂದನಾ ಹಾಗೂ ಹಳೆ ವಿಧ್ಯಾರ್ಥಿಗಳ ಸ್ನೇಹ ಸಮ್ಮಿಲನʼ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ನಿವೃತ್ತ ಮುಖ್ಯಗುರು ಮಲ್ಲಿಕಾರ್ಜುನ ಹಿಪ್ಪಳಗಾಂವೆ ಹೇಳಿದರು.

ಸಂತಪೂರ ಗ್ರಾಮದಲ್ಲಿ ಸುಭಾಷ್‌ ಚಂದ್ರ ಬೋಸ್‌ ಪ್ರೌಢ ಶಾಲೆಯ ‘ಹಳೆ ವಿಧ್ಯಾರ್ಥಿಗಳ ಸಮನ್ವಯ ಸಮಿತಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

“1984 ರಿಂದ ಇಲ್ಲಿಯವರೆಗೂ ಸಾವಿರಾರು ವಿದ್ಯಾರ್ಥಿಗಳಿಗೆ ಬದುಕು ಕಟ್ಟಿಕೊಟ್ಟ ಶ್ರೇಯಸ್ಸು ಕರ್ನಾಟಕ ಪಬ್ಲಿಕ್ ಶಿಕ್ಷಣ ಸಂಸ್ಥೆಗೆ ಸಲ್ಲುತ್ತದೆ. ಈ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಸುಭಾಷ್ ಚಂದ್ರ ಬೋಸ್ ಪ್ರೌಢ ಶಾಲೆಯ ಸಾವಿರಾರು ವಿದ್ಯಾರ್ಥಿಗಳು ಇಂದು ದೇಶ-ವಿದೇಶದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ನಮ್ಮ ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದೆ” ಎಂದು ಸಂಸ್ಥೆಯ ಕಾರ್ಯದರ್ಶಿ ನಂದಾದೀಪ ಬೋರಾಳೆ ತಿಳಿಸಿದರು.

Advertisements

“ಕಳೆದ ನಾಲ್ಕು ದಶಕದಿಂದ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ತಮ್ಮ ವಿದ್ಯೆ ಗುರುಗಳು, ಬಾಲ್ಯದ ಗೆಳೆಯ, ಗೆಳೆತಿಯರೊಂದಿಗೆ ಮುಖಾಮುಖಿಯಾಗಿ ಬಾಲ್ಯದ ಸಂತಸದ ಕ್ಷಣಗಳನ್ನು ಮೆಲಕು ಹಾಕುವುದು ಹಾಗೂ ಸದ್ಯದ ಬದುಕಿನ ಕುರಿತು ಕುಶಲೋಪರಿಗೆ ಈ ಸಮಾವೇಶ ವೇದಿಕೆಯಾಗಲಿದೆ” ಎಂದು ನುಡಿದರು.

“ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸಂತೋಷ ಪಾಟಿಲ್ ಮಾತನಾಡಿ, “ಹಳೆ ವಿದ್ಯಾರ್ಥಿಗಳ ಸಮನ್ವಯ ಸಮಿತಿಯಿಂದ ಫೆ. 24 ರಂದು ಗುರುವಂದನಾ ಹಾಗೂ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಸಮಾವೇಶವನ್ನು ಅತ್ಯಂತ ಅರ್ಥಪೂರ್ಣವಾಗಿ ನಡೆಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮ ಯಶಸ್ವಿಗೊಳಿಸಲು ಪೂರ್ವ ಸಿದ್ಧತೆ ನಡೆಯುತ್ತಿದ್ದು, ಸಮಿತಿ ಹಾಗೂ ಉಪ ಸಮಿತಿಗಳನ್ನು ರಚಿಸಲಾಗಿದೆ. ಅಂದು ಮುಂಜಾನೆ ಸಂತಪೂರ ಪೋಲಿಸ್ ಠಾಣೆಯಿಂದ ಆರಂಭವಾಗಿ ಬಸವೇಶ್ವರ ವೃತ್ತ, ಅನುಭವ ಮಂಟಪ ಮಾರ್ಗವಾಗಿ ಬೃಹತ್ ಮೆರವಣಿಗೆ ನಡೆಯಲಿದೆ. ನಂತರ ಶಾಲೆಯ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಖ್ಯಾತ ಶಿಕ್ಷಣ ತಜ್ಣರು, ವಿವಿಧ ಗಣ್ಯರು, ಅತಿಥಿಗಳು ಭಾಗವಹಿಸಲಿದ್ದಾರೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸ್ಪೃಶ್ಯತೆ, ಮೌಢ್ಯ, ಜಾತೀಯತೆ ತೊಲಗಿಸಿ ಬಸವಣ್ಣನಿಗೆ ನಿಜ ಗೌರವ ಸಲ್ಲಿಸೋಣ

ಪತ್ರಿಕಾಗೋಷ್ಠಿಯಲ್ಲಿ ಶಾಲೆಯ ಮುಖ್ಯ ಗುರು ಮನೋಹರ್ ಬಿರಾದರ, ದೈಹಿಕ ಶಿಕ್ಷಣ ಶಿಕ್ಷಕ ಗುರುನಾಥ ದೇಶಮುಖ, ನಿವೃತ್ತ ಶಿಕ್ಷಕ ಶಿವರಾಜ ಜುಲಾಂಡೆ ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ನಾಗೇಶ ಸ್ವಾಮಿ ಸೇರಿದಂತೆ ಇತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X