ಪೆನ್‌ಡ್ರೈವ್ ರಾಸಲೀಲೆ ಪ್ರಕರಣದಲ್ಲಿ ಸಿಲುಕಿ, ದೇಶ ಬಿಟ್ಟು ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಜನಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತೆಯರು ಬೀದರ್ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರಪತ್ರ ಬಿಡುಗಡೆಗೊಳಿಸಿ ಪ್ರತಿಭಟಿಸಿದರು.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಪ್ರಗತಿಪರ ಹೋರಾಟಗಾರರು, ಮೇ30 ರಂದು, ʼಹೋರಾಟದ ನಡಿಗೆ, ಹಾಸನದ ಕಡೆಗೆʼ ಎಂಬ ಘೋಷ ವಾಕ್ಯದೊಂದಿಗೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಒಕ್ಕೂಟದ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವರು ಎಂದು ತಿಳಿಸಿದರು.
“ಮಹಿಳೆಯರ ಬಗ್ಗೆ ಗೌರವ ಇದ್ದರೆ ಈ ಪ್ರತಿಭಟನೆಗೆ ಬೆಂಬಲಿಸಬೇಕು. ಹಾಸನ ಜಿಲ್ಲೆಯ ಮಾನವನ್ನ ಹರಾಜು ಮಾಡಿರುವವರನ್ನು ಬಂಧಿಸಬೇಕು ಮತ್ತು ಸಂತ್ರಸ್ತೆಯರಿಗೆ ನ್ಯಾಯ ದೊರಕಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ಹೋರಾಟ ಮಾಡಲಾಗುತ್ತಿದೆ. ನಾವು ಯಾವುದೇ ರಾಜಕೀಯ ಪ್ರೇರಿತವಾಗಿ ಪ್ರತಿಭಟನೆ ನಡೆಸುತ್ತಿಲ್ಲ” ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಧರ್ಮಾಧಿಕಾರಿ’ಗೆ ಅಡ್ಡಬಿದ್ದ ಸರ್ಕಾರ ಸಾರುತ್ತಿರುವ ಸಂದೇಶವೇನು?
ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಸಹ ಕಾರ್ಯದರ್ಶಿ ಸಾವಿತ್ರಿ ಚಿಕ್ಕಮಠ, ತಾಲೂಕು ಅಧ್ಯಕ್ಷೆ ಕಲಾವತಿ, ರೇಷ್ಮಾ ಹಂಶರಾಜ್ ಸೇರಿದಂತೆ ಇತರರಿದ್ದರು.