- ಬಾಳೆಬರೆ ಘಾಟಿ ಎರಡು ಭಾಗಗಳಲ್ಲಿ ಕಾಂಕ್ರೀಟ್ ಪೇವ್‌ಮೆಂಟ್ ನಿರ್ಮಾಣ ಕಾರ್ಯ
- ಪರ್ಯಾಯ ಮಾರ್ಗ ಬಳಸಲು ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಅಧಿಸೂಚನೆ
ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟಿ ಎರಡು ಭಾಗಗಳಲ್ಲಿ ಕಾಂಕ್ರೀಟ್ ಪೇವ್‌ಮೆಂಟ್ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಈ ಮಾರ್ಗದಲ್ಲಿ ಏಪ್ರಿಲ್ 15ರ ವರೆಗೆ ವಾಹನ ಸಂಚಾರ ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.
ಈ ಹಿಂದೆ ಏ. 5ರ ವರೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಕಾಮಗಾರಿ ವೇಳೆ ಹಲವು ಬಾರಿ ಯಂತ್ರೋಪಕರಣಗಳು ದುರಸ್ತಿಗೆ ಒಳಪಟ್ಟ ಕಾರಣ ಹೆಚ್ಚುವರಿ ಹತ್ತು ದಿನಗಳ ಕಾಲ ಸಂಚಾರ ನಿಷೇಧ ವಿಸ್ತರಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಗೋ ಸಾಗಾಟ | ವಾಹನ ತಡೆದ ಬಳಿಕ ಸ್ಟನ್ ಗನ್ ಬಳಸಿ ದೌರ್ಜನ್ಯ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ
ಸದ್ಯ ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ – ಹಾಲಾಡಿ – ಬನ್ನೂರು ಅಥವಾ ತೀರ್ಥಹಳ್ಳಿ – ಹೆಬ್ರಿ – ಉಡುಪಿ – ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕು. ಘನ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಕಾನಗೋಡು-ನಗರ-ಕೊಲ್ಲೂರು ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕು.