ಬಾಗೇಪಲ್ಲಿ | ಸ್ವಾಮಿನಿಷ್ಠೆ ಮತ್ತು ತ್ಯಾಗದ ಪ್ರತೀಕವೇ ಒನಕೆ ಓಬವ್ವ; ತಹಶೀಲ್ದಾರ್ ಮನೀಶಾ ಮಹೇಶ್ ಪತ್ರಿ

Date:

ಸ್ವಾಮಿನಿಷ್ಠೆ ಮತ್ತು ತ್ಯಾಗದ ಪ್ರತೀಕವೇ ಒನಕೆ ಓಬವ್ವ. ಚಿತ್ರದುರ್ಗ ಕೋಟೆಯನ್ನು ಶತ್ರು ಸೈನ್ಯದಿಂದ ಸಂರಕ್ಷಣೆ ಮಾಡುವ ಮೂಲಕ ಧೈರ್ಯ, ಶೌರ್ಯ ಮೆರೆದಿದ್ದಾರೆ. ಒನಕೆ ಓಬವ್ವ ಎಲ್ಲರಿಗೂ ಆದರ್ಶ ಎಂದು ಬಾಗೇಪಲ್ಲಿ ತಹಶೀಲ್ದಾರ್‌ ಮನೀಶಾ ಮಹೇಶ್‌ ಪತ್ರಿ ಹೇಳಿದರು.

- Advertisement -

ಬಾಗೇಪಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ತಾಲೂಕು ಆಡಳಿತ ಆಯೋಜಿಸಿದ್ದ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಒನಕೆ ಓಬವ್ವ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
ಓಬವ್ವ ಜಯಂತಿ 3

ಎದುರಾಳಿ ಸೈನಿಕರು ಕೋಟೆಯನ್ನು ಮುತ್ತಿದಾಗ ತನ್ನ ಮನೆಯಲ್ಲಿ ಆಹಾರ ತಯಾರಿಗೆ ಬಳಸುವಂತಹ ಒನಕೆಯನ್ನೇ ಆಯುಧವಾಗಿ ಬಳಸಿ ನೂರಾರು ಸೈನಿಕರ ರುಂಡಗಳನ್ನು ಚೆಂಡಾಡಿ, ಕೋಟೆಯನ್ನು ರಕ್ಷಿಸಿದ ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸಗಳು ನಮ್ಮ ನಾಡಿನ ಹೆಣ್ಣು ಮಕ್ಕಳಿಗೆ ಸ್ಫೂರ್ತಿ ಎಂದರು.

ಛಲವಾದಿ ಸಮುದಾಯದ ಮುಖಂಡ ಟಿ.ರಾಮಪ್ಪ ಮಾತನಾಡಿ, ಸಮಾಜದಲ್ಲಿ ಛಲವಾದಿ ಸಮುದಾಯಕ್ಕೆ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯ ವಿಚಾರದಲ್ಲಿ ಅನ್ಯಾಯವಾಗುತ್ತಿದೆ. ಆದ್ದರಿಂದ ರಾಜ್ಯದಲ್ಲಿನ ಛಲವಾದಿ ಸಮುದಾಯ ಒಗ್ಗೂಡಬೇಕಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಸತ್ಯನಾರಾಯಣ ರೆಡ್ಡಿ, ಬಿಇಓ ಎನ್.ವೆಂಕಟೇಶಪ್ಪ, ಪುರಸಭೆ ಮುಖ್ಯಾಧಿಕಾರಿಗಳಾದ ಶ್ರೀನಿವಾಸ್, ಬಿಳ್ಳೂರು ನಾಗರಾಜು, ಸಾಕ್ಷರತೆ ಇಲಾಖೆ ಶಿವಪ್ಪ, ಛಲವಾದಿ ಸಮುದಾಯದ ಮುಖಂಡರು, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...