ಉಡುಪಿ | ತನಗಿಂತ ತನ್ನ ದೇಶಮೊದಲೆಂದು ಬದುಕಿದ ಒನಕೆ ಓಬವ್ವ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ : ಕೋಟ ಶ್ರೀನಿವಾಸ್ ಪೂಜಾರಿ

Date:

ಮುದ್ದ ಹನುಮ ಎಂಬ ಒಬ್ಬ ಸಾಮಾನ್ಯ ಕಾವಲುಗಾರನ ಹೆಂಡತಿ ಓಬವ್ವ ತನ್ನ ರಾಜ್ಯಕ್ಕೆ ಶತ್ರುಗಳಿಂದ ಗಂಡಾಂತರ ಉಂಟಾಗುವ ಸಂದರ್ಭ ಬಂದಾಗ ತನ್ನ ಪ್ರಾಣವನ್ನೂ ಲೆಕ್ಕಿಸದೆ ಮಾತೃಭೂಮಿಗಾಗಿ ಒನಕೆ ಹಿಡಿದು ಶತ್ರುಗಳನ್ನು ಸದೆಬಡಿದು ರಾಜ್ಯದ ರಕ್ಷಣೆ ಮಾಡುತ್ತಾಳೆ. ಆಕೆಯ ಅಪ್ರತಿಮ ಸಾಹಸಕ್ಕಾಗಿ ಇತಿಹಾಸಕಾರರು ಆಕೆಯನ್ನು ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕನಂತಹ ವೀರ ಮಹಿಳೆಯರ ಸಾಲಿನಲ್ಲಿ ನಿಲ್ಲಿಸುತ್ತಾರೆ. ತನಗಿಂತ ತನ್ನ ದೇಶ ಮೊದಲೆಂದು ಬದುಕಿದ ಇಂತಹ ವೀರವನಿತೆ ಓಬವ್ವನ ತ್ಯಾಗ, ದೇಶ ಪ್ರೇಮ, ಸ್ವಾಮಿನಿಷ್ಠೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

- Advertisement -

ಅವರು ಇಂದು ನಗರದ ಮಣಿಪಾಲ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಒನಕೆ ಓಬವ್ವ ಆತ್ಮರಕ್ಷಣೆಯ ಪ್ರತೀಕ. ಹೆಣ್ಣುಮಕ್ಕಳು ತಮ್ಮ ಆತ್ಮ ರಕ್ಷಣೆಯ ಜೊತೆಗೆ ತನ್ನ ಪ್ರಾಂತ್ಯ, ರಾಜ್ಯ ಮತ್ತು ದೇಶಕ್ಕೋಸ್ಕರ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಹೋರಾಡುತ್ತಾರೆ ಎನ್ನುವುದಕ್ಕೆ ಒನಕೆ ಓಬವ್ವ ಸಾಕ್ಷಿ. ಚಿತ್ರದುರ್ಗದ ಕಲ್ಲಿನ ಕೋಟೆ ಕಂಡಾಗಲೆಲ್ಲಾ ಓಬವ್ವನ ಸ್ಮರಣೆಯಾಗುತ್ತದೆ. ಆಕೆಯ ತ್ಯಾಗ, ಬಲಿದಾನ ಮತ್ತು ಸಮರ್ಪಣೆಯನ್ನು ಸ್ಮರಿಸುವ ಸಲುವಾಗಿ ಸರ್ಕಾರವು ಒನಕೆ ಓಬವ್ವಳ ಜಯಂತಿಯನ್ನು ಆಚರಿಸಿ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮದ ಭಾವವನ್ನು ಬಿತ್ತುತ್ತಿರುವುದು ಸಂತೋಷದ ವಿಚಾರ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಮಾಜ ಕಲ್ಯಾಣ ಇಲಾಖೆಯ ಸಚಿವನಾಗಿದ್ದಾಗ ಹೆಣ್ಣು ಮಕ್ಕಳು ತಮ್ಮ ಆತ್ಮರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯದ 800 ಶಾಲೆಗಳು ಮತ್ತು 3500 ಹಾಸ್ಟೆಲ್ ಗಳಲ್ಲಿ ಕರಾಟೆ ಕಲಿಸಲು ಮುಂದಾದಾಗ ಅದಕ್ಕೆ ಯಾವ ಹೆಸರಿಡುವುದು ಎನ್ನುವ ಚರ್ಚೆ ನಡೆದಾಗ ಎಲ್ಲರ ಅಭಿಮತವೂ ಒನಕೆ ಓಬವ್ವನ ಹೆಸರಿಡುವುದು ಸೂಕ್ತ ಎಂದಾಗಿತ್ತು. ವಿದ್ಯಾರ್ಥಿನಿಯರ ಆತ್ಮರಕ್ಷಣಾ ಕಲಿಕೆಗೆ ಸರ್ವಾನುಮತದಿಂದ ಒನಕೆ ಓಬವ್ವನ ಹೆಸರನ್ನು ಇಟ್ಟು ಆಕೆಯ ಹೆಸರನ್ನು ಚಿರಸ್ಥಾಯಿಯಾಗಿಸುವ ಪ್ರಯತ್ನ ಮಾಡಿದ್ದೆ. ಜಾತಿ, ಮತ, ನಾನು-ನನ್ನದು ಎನ್ನುವುದಕ್ಕಿಂತ ಭಾರತ ಮೊದಲು ಎನ್ನುವ ಭಾವನೆ ವಿದ್ಯಾರ್ಥಿಗಳಲ್ಲಿ ಮೊಳೆಯಬೇಕು ಅದಕ್ಕೆ ಒನಕೆ ಓಬವ್ವ ಜಯಂತಿ ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಕುತಂತ್ರದಿಂದ ಚಿತ್ರದುರ್ಗದ ಕೋಟೆಗೆ ಒಳನುಸುಳಿದ ಹೈದರಾಲಿಯ ಸೈನ್ಯದ ವಿರುದ್ಧ ದಿಟ್ಟತನದಿಂದ ಹೋರಾಡಿದ ವೀರವನಿತೆ ಒನಕೆ ಓಬವ್ವರ ಧೈರ್ಯ, ದೇಶ ಪ್ರೇಮ, ಸದಾ ಸ್ಮರಣೀಯವಾಗಿರುವುದರ ಜೊತೆಗೆ ಸ್ರ್ರೀ ಶಕ್ತಿಯ ಸಂಕೇತವಾಗಿ ಇಂದಿಗೂ ಮಹಿಳೆಯರಿಗೆ ಓಬವ್ವಳ ಹೋರಾಟದ ಮನೋಭಾವ ಸದಾ ಸ್ಫೂರ್ತಿದಾಯಕವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ಸಮಾಜಕ್ಕೆ ಮಹನೀಯರು, ಮಹಿಳೆಯರು ನೀಡಿದ ಕೊಡುಗೆ, ತ್ಯಾಗ, ಬಲಿದಾನ, ಸಾಧನೆಗಳ ಸಾರ್ಥಕ ಸೇವೆ ಗುರುತಿಸಿ ಜಯಂತಿ ಕಾರ್ಯಕ್ರಮವನ್ನು ಅಯೋಜಿಸಲಾಗುತ್ತಿದೆ ಇಂದಿನ ಯುವ ಪೀಳಿಗೆಯು ಮಹನೀಯರ ಮಹತ್ವವನ್ನು ಅರಿತು ಅವರ ತತ್ವ ಆದರ್ಶಗಳನ್ನು ಪಾಲಿಸುವಂತಾಗಬೇಕು ಎಂದರು.

ಕುಂದಾಪುರದ ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಒನಕೆ ಓಬವ್ವರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಕೋಶದ ಸುಬ್ರಮಣ್ಯ ಶೆಟ್ಟಿ, ಮಣಿಪಾಲ ಹೈಸ್ಕೂಲ್ ಟ್ರಸ್ಟ್ ಹಾಗೂ ಮಣಿಪಾಲ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಕಾಲೇಜಿನ ಉಪಪ್ರಾಂಶುಪಾಲ ನಾಗೇಂದ್ರ ಪೈ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು, ವರ್ಷಾ ನಿರೂಪಿಸಿ, ಕಾಲೇಜಿನ ಹಿರಿಯ ಶಿಕ್ಷಕ ಸಚ್ಚಿದಾನಂದ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...