ಬಸವಕಲ್ಯಾಣ | ಅಪಘಾತದಲ್ಲಿ ಓರ್ವ ಸಾವು; ಗಾಯಗೊಂಡಿದ್ದ ವ್ಯಕ್ತಿಯನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ದ ಸಿಪಿಐ

Date:

ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಓರ್ವ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ಬಳಿ ಗುರುವಾರ ಬೆಳಿಗ್ಗೆ ಜರುಗಿದೆ‌.

- Advertisement -

ಬೈಕ್‌ ಮೇಲೆ ಮೊಳಕೇರಾ ಗ್ರಾಮದ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಘಾಳೆಪ್ಪ ಖರ್ಗೆ (40) ಸಾವನ್ನಪ್ಪಿದ್ದಾರೆ. ವಿಶ್ವನಾಥ ಖರ್ಗೆ (28) ಗಾಯಗೊಂಡವರು ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಮಾನವೀಯತೆ ಮೆರೆದ ಸಿಪಿಐ :

ಬಸವಕಲ್ಯಾಣ ಸಿಪಿಐ ಅಲಿಸಾಬ್ ಅವರು ಬೆಳಿಗ್ಗೆ ಕಲಬುರಗಿಗೆ ತೆರಳುತಿದ್ದ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಇದನ್ನು ಕಂಡ ಸಿಪಿಐ ಅವರು ತಕ್ಷಣ ಗಾಯಾಳನ್ನು ತಮ್ಮ ಪೊಲೀಸ್ ವಾಹನದಲ್ಲಿ ಹುಮನಾಬಾದ್‌ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ತೋರಿದ ಪ್ರಸಂಗ ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೀದರ್‌ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ʼಈದಿನʼ ಫಲಶೃತಿ : ಹಾಲಹಳ್ಳಿ(ಕೆ) ಪ್ರೌಢ ಶಾಲೆಗೆ ಬಿಇಒ ಭೇಟಿ; ಶಾಲೆ ಸ್ಥಳಾಂತರ

ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆ ಪಿಎಸ್ಐ ಸಿದ್ದೇಶ್ವರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ನಾಳೆ ‘ಮನಸಿರಿ’ ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನ

ಶಿರಸಿ: ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಹಾಗೂ ಈ ಬಗ್ಗೆ...

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ ಮೆರಗು

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ...

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...