ಬೆಂ.ಗ್ರಾಮಾಂತರ | ಮನೆಗೊಂದು ಉದ್ಯೋಗ ನನ್ನ ಗುರಿ : ಸಚಿವ ಕೆ ಎಚ್ ಮುನಿಯಪ್ಪ

Date:

Advertisements

ಜಿಲ್ಲೆಯಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳವನ್ನು ಆಯೋಜಿಸುವ ಮೂಲಕ ಜಿಲ್ಲೆಯ ಪ್ರತಿಯೊಂದು ಕುಟುಂಬದ ಒಬ್ಬರಿಗೆ ಉದ್ಯೋಗ ಸಿಗುವಂತೆ ಮಾಡುವುದು ನನ್ನ ಗುರಿ ಎಂದು ಆಹಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೈಗಾರಿಕೆ ಕೇಂದ್ರ ಸಹಯೋಗದಲ್ಲಿ ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ 101 ಗ್ರಾಮ ಪಂಚಾಯಿತಿಗಳಿದ್ದು, ಸುಮಾರು 2 ಲಕ್ಷ ಕುಟುಂಬಗಳಿವೆ. ಪ್ರತಿ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಿಕೊಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಉದ್ಯೋಗ ಮೇಳ ಅಯೋಜಿಸಲಾಗಿದ್ದು, ಇಂದು ಆರಂಭ, ಮುಂದಿನ ದಿನಗಳಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳ ಆಯೋಜಿಸಿ ಮನೆ ಮನೆಗೆ ಉದ್ಯೋಗ ಕಲ್ಪಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

Advertisements
ಉದ್ಯೋಗ ಮೇಳ 2

ಕಂಪನಿಗಳು ಕೂಡ ಉದ್ಯೋಗ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆ ಕೈ ಜೋಡಿಸಬೇಕು. ಕೌಶಲ್ಯ ಆಧಾರಿತ ಅಭ್ಯರ್ಥಿಗಳ ಅವಶ್ಯಕತೆ ಇದ್ದಲ್ಲಿ ಕಂಪನಿಗಳು ಮಾಹಿತಿಯನ್ನು ಸಂಬಂಧಪಟ್ಟ ಜಿಲ್ಲಾಡಳಿತಕ್ಕೆ ನೀಡಿದರೆ ಕಂಪನಿಗಳ ಬೇಡಿಕೆಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ಇಲಾಖೆಯಿಂದ ಕೌಶಲ್ಯ ತರಬೇತಿ ಕಲ್ಪಿಸಿಕೊಡಲಾಗುವುದು ಎಂದರು.

ಕೈಗಾರಿಕಾ ವಲಯದ ಅಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ. ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಮನೆ ಮನೆಯ ಉದ್ಯೋಗಿಗಳ ಸರ್ವೆ ನಡೆಸಲಾಗುತ್ತಿದ್ದು, ಉದ್ಯೋಗ ಇಲ್ಲದ ಮನೆಗೆ ಒಂದು ಉದ್ಯೋಗ ಕೊಡಿಸುವ ಕೆಲಸ ಆರಂಭಗೊಂಡಿದೆ ಎಂದು ಕೆ ಎಚ್‌ ಮುನಿಯಪ್ಪ ಹೇಳಿದರು.

ಚಿಕ್ಕಬಳ್ಳಾಪುರ ಸಂಸದ ಡಾ.ಕೆ ಸುಧಾಕರ್ ಮಾತನಾಡಿ, ಪ್ರಧಾನಮಂತ್ರಿಯವರು 10 ವರ್ಷಗಳಲ್ಲಿ 50 ಲಕ್ಷ ಕೋಟಿ ರೂ. ಮೂಲಸೌಕರ್ಯಕ್ಕೆ ಅನುದಾನ ನೀಡಿ, ಉದ್ಯಮ ಕ್ಷೇತ್ರದಲ್ಲಿ ಅಭಿವೃದ್ಧಿ ತಂದಿದ್ದಾರೆ. ಯುವಕರು ಕೇವಲ ಡಿಗ್ರಿ ಪಡೆದರೆ ಪ್ರಯೋಜನೆವಿಲ್ಲ. ಕೌಶಲ್ಯ ಭರಿತ ಶಿಕ್ಷಣ ಪಡೆದ್ರೆ ತಕ್ಷಣವೇ ಸಾಕಷ್ಟು ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸ್ಟೀಲ್ ಇಂಡಿಯಾ, ಪಿ.ಎಮ್ ವಿಶ್ವಕರ್ಮ ಸೇರಿದಂತೆ ಅನೇಕ ಜನಪರ ಯೋಜನೆ ಜಾರಿಗೆ ತಂದು ಕೌಶಲ್ಯ ತರಬೇತಿ ನೀಡಿ, ಉದ್ಯೋಗ ಕಲ್ಪಿಸಿಕೊಡುತ್ತಿದೆ ಎಂದರು.

ಉದ್ಯೋಗ ಮೇಳ2

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ತಯಾರಿಕಾ ಕೈಗಾರಿಕೆಗಳು ಹೆಚ್ಚು ಸ್ಥಾಪನೆಯಾಗುವಂತೆ ಕ್ರಮವಹಿಸಿ, ಯುವಕರಿಗೆ ಉದ್ಯೋಗ ಕೊಡಿಸುವ ಗ್ಯಾರಂಟಿಗೆ ಒತ್ತು ನೀಡುವ ಕೆಲಸ ಆಗಬೇಕಿದೆ ಎಂದು ಹೇಳಿದರು‌‌.

ಕಿಯೋನಿಕ್ಸ್ ಅಧ್ಯಕ್ಷರು ಹಾಗೂ ಹೊಸಕೋಟೆ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಮಾತನಾಡಿ, ಯುವಕರಿಗೆ ವಿದ್ಯಾಭ್ಯಾಸವಷ್ಟೇ ನೀಡಿದರೇ ಸಾಕಾಗದು. ಅವರ ಶಿಕ್ಷಣಕ್ಕೆ ತಕ್ಕ ಉದ್ಯೋಗ ಕೊಡಿಸಿ, ಕುಟುಂಬದ ಆರ್ಥಿಕ ಸ್ಥಿತಿಗತಿ ಸುಧಾರಿಸುವ ಮೂಲಕ ಸಬಲರಾಗಿಸಬೇಕೆನ್ನುವ ಸದುದ್ದೇಶದಿಂದ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಸುಮಾರು 26 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ನೀಡಲು 200 ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿವೆ. ಜಿಲ್ಲೆ ವ್ಯಾಪ್ತಿಯಲ್ಲಿ ಅಂತರಾಷ್ಟ್ರೀಯ ಉದ್ಯಮಿಗಳಿದ್ದು, ನಿರುದ್ಯೋಗಿಗಳಿಗೆ ಸಾಕಷ್ಟು ಉದ್ಯೋಗವನ್ನು ನೀಡುತ್ತಾ ಸಾವಿರಾರು ಕುಟುಂಬಗಳಿಗೆ ನೆರವಾಗಲಿದ್ದಾರೆ. ರಾಜ್ಯ ಸರ್ಕಾರ ಯುವಕರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನವನ್ನು ಮೀಸಲು ಇಟ್ಟಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಕೆಲಸ ಮಾಡಿದರೆ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಬಹುದಾಗಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬುಲ್ಡೋಜರ್‌, ತಲವಾರು ಹೇಳಿಕೆ; ಬಿಜೆಪಿ ಮುಖಂಡರಿಗೆ ಸೌಹಾರ್ದ ಕರ್ನಾಟಕ ಬೇಕಿಲ್ಲವೇ?!

ಮೇಳದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ ಮುನಿರಾಜು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್, ಗ್ಯಾರಂಟಿ ಅನುಷ್ಠಾನಗಳ ಜಿಲ್ಲಾಧ್ಯಕ್ಷ ರಾಜಣ್ಣ, ಗ್ಯಾರಂಟಿ ಅನುಷ್ಠಾನಗಳ ದೇವನಹಳ್ಳಿ ತಾಲೂಕು ಅಧ್ಯಕ್ಷ ಜಗನ್ನಾಥ, ದೊಡ್ಡಬಳ್ಳಾಪುರ ಮಾಜಿ ಶಾಸಕ ವೆಂಕಟರಮಣಯ್ಯ, ಅಪರ ಜಿಲ್ಲಾಧಿಕಾರಿ ಸುಮಾ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪ್ರತಿಷ್ಠಿತ ಕಂಪನಿಗಳ ಮುಖ್ಯಸ್ಥರು, ಉದ್ಯೋಗಾಕಾಂಕ್ಷಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X