ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ : ಸಂಘಪರಿವಾರದ ಮತ್ತೋರ್ವನ ಬಂಧನ

Date:

Advertisements
  • ಬಂಧಿತರ ಸಂಖ್ಯೆ 5ಕ್ಕೆ : ಎಲ್ಲರೂ ಸಂಘಪರಿವಾರದ ಕಾರ್ಯಕರ್ತರು
  • ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ

ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ, ಸಂಘಪರಿವಾರದ ಕಾರ್ಯಕರ್ತನನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಕೇರಳ ಬಾಯಾರು ನಿವಾಸಿ ರಾಜ ಯಾನೆ ರಾಜೇಶ(26) ಬಂಧಿತ ಆರೋಪಿ. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಒಟ್ಟು ಐವರನ್ನು ಬಂಧಿಸಲಾಗಿದೆ.

ಈ ಮೊದಲು ಮೂಡುಬಿದಿರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ (28), ಪೆರುವಾಯಿ ನಿವಾಸಿ ಜಯಪ್ರಕಾಶ್ (38) ಎಂಬ ನಾಲ್ವರು ಸಂಘಪರಿವಾರದ ಕಾರ್ಯಕರ್ತರನ್ನು ಬಂಧಿಸಲಾಗಿತ್ತು.

Advertisements

ನೊಂದ ಬಾಲಕಿ ಐದು ಮಂದಿಯ ಹೆಸರನ್ನು ದೂರಿನಲ್ಲಿ ತಿಳಿಸಿದ್ದಳು. ಈ ಹಿನ್ನೆಲೆಯಲ್ಲಿ ಮೂರು ಮಂದಿಯನ್ನು ರವಿವಾರ ಬಂಧಿಸಿದ್ದರೆ, ಓರ್ವನನ್ನು ಸೋಮವಾರ ಬಂಧಿಸಲಾಗಿತ್ತು. ಇನ್ನೋರ್ವ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ: ಐವರು ಸಂಘಪರಿವಾರದ ಕಾರ್ಯಕರ್ತರ ಬಂಧನ

ಪ್ರಕರಣದ ಹಿನ್ನೆಲೆ:
ಅಕ್ಷಯ್ ಬೆರಿಪದವಿನಲ್ಲಿ ಅಣ್ಣನ ಮನೆಯಲ್ಲಿದ್ದುಕೊಂಡು ಪೈಂಟಿಂಗ್ ಕೆಲಸ ನಿರ್ವಹಿಸುತ್ತಿದ್ದ. ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ಮಾಡುತ್ತಿದ್ದ. ಪರಿಶಿಷ್ಟ ಪಂಗಡಕ್ಕೆ ಸೇರಿದ ಬಾಲಕಿಯನ್ನು 2019 ರಲ್ಲಿ ಆಕೆಯ ಸಂಬಂಧಿಕರ ಮನೆಯಲ್ಲಿ ಜಯಪ್ರಕಾಶ್‌ ಎಂಬಾತ ಅತ್ಯಾಚಾರ ನಡೆಸಿದ್ದ.‌ ಕಳೆದ ಜನವರಿಯಲ್ಲಿ ಅಕ್ಷಯ್‌ ಎಂಬಾತ ಬೆರಿಪದವು ಶಾಲೆಯ ಬಳಿಗೆ ಬಂದು ಬೇರೆ ಬೇರೆ ದಿನಗಳಲ್ಲಿ ಮೂರು ಬಾರಿ ಅತ್ಯಾಚಾರ ನಡೆಸಿದ್ದಾನೆ.

ಕಳೆದ ಮೇ ತಿಂಗಳಿನಲ್ಲಿ ಬೆರಿಪದವು ರಾಜ ಎಂಬಾತ ಬಾಲಕಿಗೆ ಕರೆ ಮಾಡಿ ಮಾತನಾಡುತ್ತಿದ್ದ. ಬೆರಿಪದವು ವಿದ್ಯಾರಣ್ಯ ಶಾಲೆಯ ಗುಡ್ಡ ಜಾಗಕ್ಕೆ ಬರಲು ಹೇಳಿ, ಬಾಲಕಿಯನ್ನು ಮದುವೆಯಾಗುತ್ತೇನೆಂದು ಪುಸಲಾಯಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕಳೆದ ಜೂನ್‌ ತಿಂಗಳಿನ ಮೊದಲ ವಾರದಲ್ಲಿ ಅಚ್ಚು ಯಾನೆ ಅಕ್ಷಯ್‌ ಎಂಬಾತನ ಮುಖಾಂತರ ಸುಕುಮಾರ ಪರಿಚಯಿಸಿಕೊಂಡು ಮದುವೆಯಾಗುತ್ತೇನೆಂದು ಬೆರಿಪದವು ಎಂಬಲ್ಲಿಗೆ ಬರಲು ಹೇಳಿ ಅಲ್ಲಿನ ವಿದ್ಯಾರಣ್ಯ ಶಾಲೆಯ ಗುಡ್ಡ ಜಾಗದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಅಲ್ಲದೇ, 2023ರ ಜುಲೈ 28ರಂದು ರಾತ್ರಿ ವೇಳೆ ಕಮಾಲಾಕ್ಷ ಬೆಳ್ಚಡನು ಮದುವೆಯಾಗುತ್ತೇನೆಂದು ಭರವಸೆ ನೀಡಿದ್ದ. ಅಲ್ಲದೇ ಆತನ ಮನೆಯಾದ ಬಾಯಾರು ಗ್ರಾಮದಲ್ಲಿರುವ ಅವರ ಸಂಬಂಧಿಯ ಖಾಲಿ ಮನೆಗೆ ಬರಲು ಹೇಳಿ ಬಾಲಕಿಯು ಹೋದಾಗ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಎಲ್ಲ ಘಟನೆಗಳನ್ನು ಬಾಲಕಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದು, ಅದರಂತೆ ಪೋಕ್ಸೋ, ಅತ್ಯಾಚಾರ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X