ಆನ್‌ಲೈನ್ ಗೇಮ್ ಹಾಗೂ ಬೆಟ್ಟಿಂಗ್‌ಗಳಿಂದ ಯುವಕರು ಭಾರೀ ಅನಾಹುತಕ್ಕೆ ಹಾಳಾಗುತ್ತಿದ್ದು, ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳ ವೆಬ್‌ಸೈಟ್‌ಗಳನ್ನು ನಿಷೇಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ವತಿಯಿಂದ ರಾಯಚೂರು ತಹಶೀಲ್ದಾರ್ ಅವರಿಗೆ ಹಕ್ಕೊತ್ತಾಯ ಮನವಿ ಸಲ್ಲಿಸಲಾಯಿತು.
ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು, ಯುವಕರು, ಮಕ್ಕಳು ಹಾಗೂ ವಿದ್ಯಾರ್ಥಿಗಳು ಆನ್‌ಲೈನ್ ಗೇಮ್‌ಗಳಿಂದ ಬಹಳಷ್ಟು ಅನಾಹುತಗಳಿಗೆ ಒಳಗಾಗುತ್ತಿದ್ದಾರೆ. ಗೇಮ್‌ಗಳ ವೆಬ್‌ಸೈಟ್‌ಗಳನ್ನೂ ಕೂಡಲೇ ನಿಷೇಧಿಸಬೇಕು ಎಂದು ಒತ್ತಾಯಿಸಿದರು.
ದಿನನಿತ್ಯ ಆನ್‌ಲೈನ್ ಗೇಮ್‌ಗಳು ವ್ಯಾಪಕವಾಗಿ ಹರಡುತ್ತಿದ್ದು, ಒಂದು ಚಟವಾಗಿ ಬೆಳೆಯುತ್ತಿದೆ. ಇದರಿಂದ ಹಲವಾರು ಕುಟುಂಬಗಳು ಬೀದಿಗೆ ಬಂದಿವೆ. ಆನ್‌ಲೈನ್ ಗೇಮ್‌ಗಳಲ್ಲಿ ಶಾಲಾ ವಿದ್ಯಾರ್ಥಿಗಳು ಸಾಕಷ್ಟು ದುಡ್ಡು ಹಾಕಿ ಸೋತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಹೆಚ್ಚಾಗಿ ಸಂಭವಿಸುತ್ತಿವೆ. ಈಗಾಗಲೇ ರಾಜ್ಯದ ಕೆಲವು ಪೊಲೀಸ್ ಠಾಣೆಗಳಲ್ಲಿ ಅನಧಿಕೃತವಾಗಿ ಬೆಟ್ಟಿಂಗ್ ವ್ಯವಸ್ಥೆಯ ಬಗ್ಗೆ ದೂರುಗಳು ದಾಖಲಾಗುತ್ತಿದೆ. ಆನ್‌ಲೈನ್ ಗೇಮ್‌ಗಳ ಬುಕ್ಕಿಗಳ ಮೇಲೆ ಪ್ರಕರಣ ಶಿಸ್ತು ಕ್ರಮ ಜರುಗಿಸಬೇಕು. ಇದರ ಬಗ್ಗೆ ಹೆಚ್ಚಿನ ರೀತಿಯಲ್ಲಿ ಜನರಿಗೆ ಇದರ ಬಗ್ಗೆ ಅರಿವು ಮೂಡಿಸಬೇಕು ಎಂದು ಆಗ್ರಹಿಸಿದರು.

ರಾಜ್ಯಾದ್ಯಂತ ನಡೆಯುತ್ತಿರುವ ಆನ್‌ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್‌ಗಳನ್ನು ನಡೆಸುವ ಆ್ಯಪ್‌ಗಳನ್ನು ರಾಜ್ಯ ಸರಕಾರ ಕೂಡಲೇ ನಿಷೇಧಿಸಬೇಕು ಎಂದು ಮನವಿ ಮಾಡಿದರು.
ಇದನ್ನು ಓದಿದ್ದೀರಾ? ಮಾನನಷ್ಟ ಪ್ರಕರಣ | ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ
ಮನವಿ ಸಲ್ಲಿಸುವ ವೇಳೆ ನಮ್ಮ ಕರ್ನಾಟಕ ಸೇನೆಯ ಕೊಂಡಪ್ಪ, ಶಿವರಾಜ್ ನಾಯಕ, ಎಂ ಎಸ್ ವೆಂಕಟೇಶ್, ಉಮೇಶ್ ಗೌಡ, ಶಿವನಗೌಡ ನಾಯಕ, ಮಂಜುನಾಥ, ವಿಜಯ ಇನ್ನಿತರರು ಉಪಸ್ಥಿತರಿದ್ದರು.
