ರಾಯಚೂರು | ಆನ್‌ಲೈನ್‌ ಬೆಟ್ಟಿಂಗ್ ಗೇಮ್‌ನಿಂದ ಯುವಕರು ಬೀದಿಪಾಲು: ನಿಷೇಧಕ್ಕೆ ಆಗ್ರಹಿಸಿ ಮನವಿ

Date:

ಆನ್‌ಲೈನ್ ಗೇಮ್ ಹಾಗೂ ಬೆಟ್ಟಿಂಗ್‌ಗಳಿಂದ ಯುವಕರು ಭಾರೀ ಅನಾಹುತಕ್ಕೆ ಹಾಳಾಗುತ್ತಿದ್ದು, ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳ ವೆಬ್‌ಸೈಟ್‌ಗಳನ್ನು ನಿಷೇಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ವತಿಯಿಂದ ರಾಯಚೂರು ತಹಶೀಲ್ದಾರ್ ಅವರಿಗೆ ಹಕ್ಕೊತ್ತಾಯ ಮನವಿ ಸಲ್ಲಿಸಲಾಯಿತು.

- Advertisement -

ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು, ಯುವಕರು, ಮಕ್ಕಳು ಹಾಗೂ ವಿದ್ಯಾರ್ಥಿಗಳು ಆನ್‌ಲೈನ್ ಗೇಮ್‌ಗಳಿಂದ ಬಹಳಷ್ಟು ಅನಾಹುತಗಳಿಗೆ ಒಳಗಾಗುತ್ತಿದ್ದಾರೆ. ಗೇಮ್‌ಗಳ ವೆಬ್‌ಸೈಟ್‌ಗಳನ್ನೂ ಕೂಡಲೇ ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ದಿನನಿತ್ಯ ಆನ್‌ಲೈನ್ ಗೇಮ್‌ಗಳು ವ್ಯಾಪಕವಾಗಿ ಹರಡುತ್ತಿದ್ದು, ಒಂದು ಚಟವಾಗಿ ಬೆಳೆಯುತ್ತಿದೆ. ಇದರಿಂದ ಹಲವಾರು ಕುಟುಂಬಗಳು ಬೀದಿಗೆ ಬಂದಿವೆ. ಆನ್‌ಲೈನ್ ಗೇಮ್‌ಗಳಲ್ಲಿ ಶಾಲಾ ವಿದ್ಯಾರ್ಥಿಗಳು ಸಾಕಷ್ಟು ದುಡ್ಡು ಹಾಕಿ ಸೋತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಹೆಚ್ಚಾಗಿ ಸಂಭವಿಸುತ್ತಿವೆ. ಈಗಾಗಲೇ ರಾಜ್ಯದ ಕೆಲವು ಪೊಲೀಸ್ ಠಾಣೆಗಳಲ್ಲಿ ಅನಧಿಕೃತವಾಗಿ ಬೆಟ್ಟಿಂಗ್ ವ್ಯವಸ್ಥೆಯ ಬಗ್ಗೆ ದೂರುಗಳು ದಾಖಲಾಗುತ್ತಿದೆ. ಆನ್‌ಲೈನ್ ಗೇಮ್‌ಗಳ ಬುಕ್ಕಿಗಳ ಮೇಲೆ ಪ್ರಕರಣ ಶಿಸ್ತು ಕ್ರಮ ಜರುಗಿಸಬೇಕು. ಇದರ ಬಗ್ಗೆ ಹೆಚ್ಚಿನ ರೀತಿಯಲ್ಲಿ ಜನರಿಗೆ ಇದರ ಬಗ್ಗೆ ಅರಿವು ಮೂಡಿಸಬೇಕು ಎಂದು ಆಗ್ರಹಿಸಿದರು.

mnv1 1

ರಾಜ್ಯಾದ್ಯಂತ ನಡೆಯುತ್ತಿರುವ ಆನ್‌ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್‌ಗಳನ್ನು ನಡೆಸುವ ಆ್ಯಪ್‌ಗಳನ್ನು ರಾಜ್ಯ ಸರಕಾರ ಕೂಡಲೇ ನಿಷೇಧಿಸಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಮಾನನಷ್ಟ ಪ್ರಕರಣ | ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ

ಮನವಿ ಸಲ್ಲಿಸುವ ವೇಳೆ ನಮ್ಮ ಕರ್ನಾಟಕ ಸೇನೆಯ ಕೊಂಡಪ್ಪ, ಶಿವರಾಜ್ ನಾಯಕ, ಎಂ ಎಸ್ ವೆಂಕಟೇಶ್, ಉಮೇಶ್ ಗೌಡ, ಶಿವನಗೌಡ ನಾಯಕ, ಮಂಜುನಾಥ, ವಿಜಯ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...