ಬೀದರ್ | ಆನ್‌ಲೈನ್ ಗೇಮಿಂಗ್‌ : ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

Date:

ಆನ್‌ಲೈನ್ ಗೇಮಿಂಗ್‌ನಲ್ಲಿ‌ ಹಣ ಕಳೆದುಕೊಂಡ ಯುವಕನೊಬ್ಬ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾಲ್ಕಿ ತಾಲ್ಲೂಕಿನ ಮೆಹಕರ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ.

- Advertisement -

ಭಾಲ್ಕಿ ತಾಲ್ಲೂಕಿನ ಸಾಯಗಾಂವ ಗ್ರಾಮದ ಸಮೀಪ ಜ್ಯೋತಿ ತಾಂಡಾ ಬಳಿ ಘಟನೆ ಜರುಗಿದ್ದು, ಹುಲಸೂರ ತಾಲ್ಲೂಕಿನ ಬೇಲೂರ ಗ್ರಾಮದ ವಿಜಯಕುಮಾರ್‌ ಹೊಳ್ಳೆ (24) ಆತ್ಮಹತ್ಯೆಗೆ ಯತ್ನಿಸಿದ ಯುವಕ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಡಿ. ಫಾರ್ಮ್‌ ಪದವೀಧರನಾದ ಯುವಕ ಬೀದರ್‌ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಕೆಲ ತಿಂಗಳಿಂದ ಆನ್‌ಲೈನ್ ಗೇಮಿಂಗ್‌ ವ್ಯಾಮೋಹಕ್ಕೆ ಸಿಲುಕಿ ₹1.50 ಲಕ್ಷ ಹಣ ಕಳೆದುಕೊಂಡಿದ್ದ. ಎರಡ್ಮೂರು ದಿನಗಳಲ್ಲಿ ಹಣ ಕೊಡುತ್ತೇವೆ ಎಂದು ಪೋಷಕರು ಹೇಳಿದ್ದರು. ಆದರೆ ಸಾಲಕ್ಕೆ ಹೆದರಿದ ಯುವಕ ಪೆಟ್ರೊಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ವಿಜಯಕುಮಾರ್ ಈ ಹಿಂದೆ ಕೂಡ ಆನ್‌ಲೈನ್ ಗೇಮಿಂಗ್‌ನಲ್ಲಿ ₹7-8 ಲಕ್ಷ ಹಣ ಕಳೆದುಕೊಂಡಿದ್ದ, ಅದನ್ನು ಪೋಷಕರು ತೀರಿಸಿದ್ದಾರೆ ಎಂಬ ಮಾಹಿತಿ ಇದೆ. ಮತ್ತೆ ಈಗ ಆನ್‌ಲೈನ್ ಆಟದಲ್ಲಿ ಹಣ ಕಳೆದುಕೊಂಡ ಯುವಕ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಮೆಹಕರ್‌ ಠಾಣೆ ಪಿಎಸ್‌ಐ ಶಿವಕುಮಾರ್‌ ಬಳತೆ ಈದಿನ.ಕಾಮ್‌ ಗೆ ತಿಳಿಸಿದ್ದಾರೆ.

ಶೇ.80% ಸುಟ್ಟ ಗಾಯಗಳಿಂದ ನರಳುತ್ತಿದ್ದ ಯುವಕನನ್ನು ಸ್ಥಳೀಯರು ಭಾಲ್ಕಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೀದರ್ ಬ್ರಿಮ್ಸ್‌ಗೆ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಯುವಜನರ ಜೀವಕ್ಕೆ ಕುತ್ತು ತರುತ್ತಿರುವ ಮೋಸದಾಟ: ಆನ್‌ಲೈನ್ ಗೇಮಿಂಗ್‌ ಬಗ್ಗೆ ಇರಲಿ ಎಚ್ಚರ

ಮೆಹಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...