ಹಾಸನ | ಆನ್‌ಲೈನ್ ಗೇಮಿಂಗ್; ಲಕ್ಷಾಂತರ ಹಣ ಕಳೆದುಕೊಂಡ ಯುವಕ ಅತ್ಮಹತ್ಯೆ 

Date:

ಆನ್‌ಲೈನ್ ಗೇಮಿಂಗ್‌ನಲ್ಲಿ ಹಣ ಕಳೆದುಕೊಂಡು ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

- Advertisement -

ಬೇಲೂರು ತಾಲೂಕಿನ ಚೋಕನಹಳ್ಳಿ ಗ್ರಾಮದ ರಾಕೇಶ್ ಗೌಡ(23) ಮೃತ ಯುವಕ. ರಾಕೇಶ್ ಫೈನಾನ್ಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಇದೆ. ಹಲವಾರು ತಿಂಗಳಿಂದ ಆನ್‌ಲೈನ್ ಜೂಜಿನಲ್ಲಿ ಹಣ ಕಳೆದುಕೊಂಡಿದ್ದರು. ಇದರಿಂದ ಮನನೊಂದು ಜನವರಿ 18ರಂದು ಬೇಲೂರಿನ ಖಾಸಗಿ ಲಾಡ್ಜ್‌ನಲ್ಲಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಮೃತ ರಾಕೇಶ್‌ ಡೆತ್‌ನೋಟ್‌ನಲ್ಲಿ ಅವರ ತಾಯಿಗೆ ಕ್ಷಮೆ ಕೇಳಿದ್ದು, “ಆನ್‌ಲೈನ್ ಗೇಮ್ ನಿಷೇಧಿಸಬೇಕು, ಯಾರೂ ಆನ್‌ಲೈನ್ ಗೇಮ್ ಆಟ ಆಡಬೇಡಿ. ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್ ಅವರು ನನ್ನ ಅಂತಿಮ ದರ್ಶನಕ್ಕೆ ಬರಬೇಕು” ಎಂದು ಬರೆದಿಟ್ಟಿದ್ದಾರೆಂದು ಹೇಳಲಾಗಿದೆ.

ಅಂತಿಮ ದರ್ಶನ ಪಡೆದ ಶಾಸಕ ಎಚ್‌ ಕೆ ಸುರೇಶ :

ಆನ್‌ಲೈನ್ ಜೂಜಾಟದ ದುಷ್ಪರಿಣಾಮದಿಂದ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ ಹುಲ್ಲಳ್ಳಿ ಸುರೇಶ್ ಅವರು ಆಸ್ಪತ್ರೆಗೆ ತೆರಳಿ ರಾಕೇಶ್ ಅವರ ಪಾ‌ರ್ಥೀವ ಶರೀರದ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಆರ್ಥಿಕ ಸಹಾಯ ಮಾಡಿದರು.

“ಇತ್ತೀಚಿನ ದಿನಗಳಲ್ಲಿ ಯುವಸಮುದಾಯ ಆನ್‌ಲೈನ್ ಬೆಟ್ಟಿಂಗ್ ಪ್ರಭಾವಕ್ಕೆ ಒಳಗಾಗಿ, ಸಾಲ-ಶೂಲ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವುದು ತೀವ್ರ ಆತಂಕಕಾರಿ ಸಂಗತಿಯಾಗಿದೆ. ಯುವ ಸಮುದಾಯ ಎಚ್ಚೆತ್ತು ಜೂಜಾಟದಿಂದ ಹೊರಬರಬೇಕು” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ | ತಡೆಯಾಜ್ಞೆ‌ ಜಾಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಮುಂದಾದ ಅಧಿಕಾರಿಗಳು; ರೈತರ ಆಕ್ರೋಶ

ಈ ಕುರಿತು ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಪರಿಹಾರವಲ್ಲ 6
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊನ್ನಾವರ | ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದ ಸ್ಮೃತಿ ಮಂಧಾನ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ ಖ್ಯಾತ ಕ್ರಿಕೆಟರ್ ಸ್ಮೃತಿ...

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು...

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....