ಮೋದಿ ವಿರುದ್ಧ ಒಂದಾಗಲು ಪ್ರತಿಪಕ್ಷಗಳಿಂದ ಸಭೆ; ಖಾಸಗಿ ಹೋಟೆಲ್​ನಲ್ಲಿ ಭರದ ಸಿದ್ಧತೆ

Date:

  • ಜು. 17 ಮತ್ತು 18ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ
  • ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಔತಣಕೂಟ ಆಯೋಜನೆ

ಲೋಕಸಭೆ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳು ಒಂದಾಗಲು ಸಿದ್ಧತೆ ನಡೆಸಿದ್ದು, ಅದರಂತೆ ಜು. 17 ಮತ್ತು 18ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಚರ್ಚೆಯ ನೇತೃತ್ವವನ್ನು ಕಾಂಗ್ರೆಸ್‌ ವಹಿಸಿದೆ.

ಮಹಾ ಮೈತ್ರಿಕೂಟದ ಸಭೆಗೆ ಖಾಸಗಿ ಹೋಟೆಲ್​ನಲ್ಲಿ ಭರದ ಸಿದ್ಧತೆ ನಡೆದಿದೆ. ರೇಸ್ ಕೋರ್ಸ್​ನ ಕುಮಾರಕೃಪ ರಸ್ತೆಯಲ್ಲಿ ಬೃಹತ್ ಫ್ಲೆಕ್ಸ್ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ರಸ್ತೆಯ ಎಡಭಾಗದಲ್ಲಿ ವಿರೋಧ ಪಕ್ಷದ ನಾಯಕರುಗಳ ಫ್ಲೆಕ್ಸ್ ಅಳವಡಿಕೆ ಮಾಡಲಾಗಿದೆ.

ಎಂ ಕೆ ಸ್ಟ್ಯಾಲಿನ್, ಮಲ್ಲಿಕಾರ್ಜುನ ಖರ್ಗೆ, ಮಮತಾ ಬ್ಯಾನರ್ಜಿ, ನಿತೀಶ್ ಕುಮಾರ್, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೇರಳ ಕಾಂಗ್ರೆಸ್ ನ ಪ್ರಮುಖರು, ಉದ್ದವ ಠಾಕ್ರೆ ಸೇರಿದಂತೆ ಪ್ರಮುಖರ ಫ್ಲೆಕ್ಸ್ ಬ್ಯಾನರ್ ಅಳವಡಿಸಿ, ಎಐಸಿಸಿ ನಾಯಕರಿಂದ ಸಿದ್ದತೆಗಳ ಪರಿಶೀಲನೆ ಮಾಡಲಾಗುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಹಾ ಒಗ್ಗಟ್ಟಿಗೆ ಪ್ರತಿಪಕ್ಷಗಳು ಒಂದಾಗುತ್ತಿದ್ದು, ಮಹಾಘಟಬಂಧನ್​ ಮಿತ್ರ ಪಕ್ಷಗಳ ಸಭೆಗೆ ಆಗಮಿಸಲಿರುವ ಮುಖಂಡರ ವಸತಿ ಮತ್ತು ಔತಣ ಕೂಟಗಳ ಪರಿಶೀಲನೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ರಣದೀಪ್​ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಸೇರಿದಂತೆ ಹಲವಾರು ನಾಯಕರು ಶನಿವಾರ ರಾತ್ರಿಯೇ ಪರಿಶೀಲನೆ ನಡೆಸಿದರು.

ಬೆಂಗಳೂರಿನ ಪಂಚತಾರಾ ಹೋಟೆಲ್‌ಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 17ರಂದು ಬೆಂಗಳೂರಿನಲ್ಲಿ ಔತಣಕೂಟ ಏರ್ಪಡಿಸಿದ್ದಾರೆ. ಈ ಔತಣಕೂಟದಲ್ಲಿ ಟಿಎಂಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರೇನ್ ಅವರು ಭಾಗವಹಿಸುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸಭೆಗೆ ಆಗಮಿಸುತ್ತಾರೆ.

ಕಾಂಗ್ರೆಸ್​ ವರಿಷ್ಟರಾದ ಸೋನಿಯಾ ಗಾಂಧಿ ಮತ್ತು ರಾಹುಲ್​ ಗಾಂಧಿ ಜುಲೈ 18 ರಂದು ನಡೆಯಲಿರುವ ಸಭೆಗೆ ಹಾಜರಾಗಲಿದ್ದಾರೆ. ಆಮ್​ ಆದ್ಮಿ ಪಕ್ಷವೂ ಸೇರಿದಂತೆ 24 ಪಕ್ಷಗಳಿಗೆ ಈ ಸಭೆಯಲ್ಲಿ ಭಾಗಿಯಾಗಲು ಆಹ್ವಾನಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ‘ಪೆನ್‌ಡ್ರೈವ್’ ಪ್ರಕರಣಕ್ಕೆ ಸಂಬಂಧಿಸಿದವರ ಬಂಧನಕ್ಕೆ ಆಗ್ರಹ; ಏ.29ರಂದು ಪ್ರತಿಭಟನೆ

ಇಡೀ ನಾಗರಿಕ ಸಮಾಜವೇ ಬೆಚ್ಚಿಬೀಳುವಂತ ಘಟನೆ ಹಾಸನದಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ...

ವಿಜಯಪುರ | ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ ತನ್ನದೇ ಛಾಪು ಮೂಡಿಸಿದೆ: ಮಂಜುನಾಥ ಸುಣಗಾರ

ಇವತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ...

ವಿಜಯಪುರ | ಮೋದಿ ದುರಾಡಳಿತ ಕೊನೆಗಾಣಿಸಬೇಕು: ಅಪ್ಪಾಸಾಹೇಬ ಯರನಾಳ

ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ...

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...