ಅಸ್ತಿತ್ವಕ್ಕಾಗಿ ಬೆಂಗಳೂರಿನಲ್ಲಿ ಪ್ರತಿಪಕ್ಷಗಳು ಶೋ ಮಾಡುತ್ತಿವೆ: ಬಸವರಾಜ ಬೊಮ್ಮಾಯಿ ಟೀಕೆ

Date:

Advertisements

ಬೇರೆ ಬೇರೆ ರಾಜ್ಯಗಳಲ್ಲಿ ಅವರದೇ ಅಸ್ತಿತ್ವ ಇಲ್ಲದ ಪ್ರಾದೇಶಿಕ ಪಕ್ಷಗಳು ಒಂದೇ ಕಡೆ ಸೇರಿದರೆ ಏನೂ ಆಗುವುದಿಲ್ಲ. ಅಸ್ತಿತ್ವವೇ ಇಲ್ಲದವರು ಬೆಂಗಳೂರಿನಲ್ಲಿ ಅಸ್ತಿತ್ವಕ್ಕಾಗಿ ಶೋ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.

ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕರ್ನಾಟಕದಲ್ಲಿ ಯುಪಿಎ ಅಂಗ ಪಕ್ಷಗಳ ಸಭೆಯಿಂದ ಏನೂ ಪ್ರಯೋಜನವಿಲ್ಲ. ಮೋದಿ ಅವರದು ಮೇರು ವ್ಯಕ್ತಿತ್ವ, ರಾಷ್ಟ್ರದಲ್ಲಿ 9 ವರ್ಷದಲ್ಲಿ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸೇರಿ ಎಲ್ಲಾ ರಂಗದಲ್ಲೂ ದೊಡ್ಡ ಬದಲಾವಣೆ ತಂದು ದೇಶದವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗುತ್ತಿದ್ದಾರೆ‌‌” ಎಂದರು.

“ವಿಶ್ವದ ಎಲ್ಲ ರಾಷ್ಟ್ರಗಳ ಕೋವಿಡ್ ನಿರ್ವಹಿಸಲು ವಿಫಲವಾದಾಗ ಮೋದಿ ಉತ್ತಮವಾಗಿ ನಿರ್ವಹಣೆ ಮಾಡಿದರು.
ಅದಕ್ಕಾಗಿ ಇವತ್ತು ಭಾರತಕ್ಕೆ ಗೌರವ ಇದೆ, ಪ್ರಧಾನಿ ಮೋದಿ ನಾಯಕತ್ವವನ್ನು ಎಲ್ಲರೂ ಒಪ್ಪಿಕೊಂಡಿದ್ದಾರೆ. ರಾಷ್ಟ್ರದ ಪ್ರತಿ ಹಳ್ಳಿಗೂ ಮೋದಿ ಕಾರ್ಯಕ್ರಮ ಮುಟ್ಟಿದೆ” ಎಂದು ಹೇಳಿದರು.

Advertisements

“ಪ್ರತಿಪಕ್ಷಗಳು ಅವರ ಅಸ್ತಿತ್ವವನ್ನೇ ಅವರು ಕಾಪಾಡಿಕೊಳ್ಳಲು ಸಾಧ್ಯವಿಲ್ಲ. ಇಲ್ಲಿ ಬಂದು ಶೋ ಮಾಡೊ ಪ್ರಯತ್ನ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಏನೋ ದೊಡ್ಡ ಸಾಧನೆ ಮಾಡಿದ್ದೇವೆ ಅಂತ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಣ್ಣು ಮುಕ್ಕುವುದು ನಿಶ್ಚಿತ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X