ಮೈಸೂರು | ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ವಿರೋಧ; ರೈತ ಸಂಘದಿಂದ ಪ್ರತಿಭಟನೆ

Date:

ಮೈಸೂರು ಗ್ರಾಮಾಂತರ ತಾಲ್ಲೂಕು, ವರುಣಾ ಹೋಬಳಿ, ಗುಡುಮಾದನಹಳ್ಳಿ ರೈತರು ಸ್ವಾಧೀನ ಹೊಂದಿರುವ ಭೂಮಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ಮಾಡಲು, ರೈತರನ್ನು ಒಕ್ಕಲೆಬ್ಬಿಸುವ ಹೊರಟಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಪ್ರತಿಭಟನಾ ಧರಣಿ ನಡೆಸಿ, ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

- Advertisement -

ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, ಗುಡುಮಾದನಹಳ್ಳಿ ಗ್ರಾಮದಲ್ಲಿ ಸರಿಸುಮಾರು 80 ಕುಟುಂಬಗಳು ಕಳೆದ 65-70 ವರ್ಷಗಳಿಂದಲೂ ಸರ್ವೆ-ನಂ 8, 60, 68, 36 ಎಕರೆ ಪ್ರದೇಶದಲ್ಲಿ ಬೇಸಾಯ ಮಾಡುತ್ತಿದ್ದು ತೆಂಗು, ಅಡಿಕ ಬೆಳದಿರುತ್ತಾರೆ. ವರ್ಷದಲ್ಲಿ ಎರಡು ಬೆಳೆ ಬೆಳೆಯುವ ರೈತರು ಮೊದಲಾರ್ಧ 6 ತಿಂಗಳು ದಳವಾಯಿ ಕೆರೆ ಅವಲಂಬಿಸಿ, ಇನ್ನಾರು ತಿಂಗಳು ವರುಣಾ ನಾಲೆ ನೀರಿನ್ನಾಶ್ರಯಿಸಿ ಭತ್ತ ಬೆಳೆಯುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದಲ್ಲದೆ, ಇಲ್ಲಿರುವ ರೈತ ಕುಟುಂಬಗಳು ಬದುಕಿನ ನಿರ್ವಹಣೆಗಾಗಿ ಗ್ರಾಮದಲ್ಲಿ ಒಟ್ಟಾರೆ 400 ಹಸು ಸಾಕಿದ್ದು, ಹೈನುಗಾರಿಕೆ ಬಳಕೆಗಾಗಿ, ರಾಸುಗಳ ಮೇವಿಗಾಗಿ ಹುಲ್ಲನ್ನು ಸಹ ಬೆಳೆಯುತ್ತಾರೆ. ಆದರೆ, ಇದೀಗ ಸರ್ಕಾರ ಇದೇ ಪ್ರದೇಶದಲ್ಲಿ 20 ಎಕರೆ ಭೂಮಿಯನ್ನು ನಿಮ್ಮಾನ್ಸ್‌ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರು ಮಾಡಿದ್ದು, ರೈತರನ್ನು ಬಲವಂತವಾಗಿ ಒಕ್ಕಲೆಬ್ಬಿಸಲು ಪ್ರಯತ್ನ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಏಕರೂಪ ಶಿಕ್ಷಣಕ್ಕಾಗಿ ಆಗ್ರಹಿಸಿ ರೈತ ಸಂಘದಿಂದ 1295ಕಿಮೀ ಪಾದಯಾತ್ರೆ

ಜಿಲ್ಲಾಧ್ಯಕ್ಷರಾದ ಎಲ್. ಕೆಂಪೂಗೌಡ ಮಾತನಾಡಿ, ಸರ್ಕಾರ ರೈತರ ಭೂಮಿ ಸ್ವಾಧೀನ ಪಡಿಸಿಕೊಂಡು, ಅಭಿವೃದ್ಧಿ ಹೆಸರಿನಲ್ಲಿ ರೈತ ಕುಟುಂಬಗಳನ್ನು ಬೀದಿಪಾಲು ಮಾಡ ಹೊರಟಿದೆ. ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ರೈತರ ಫಲವತ್ತಾದ ಭೂಮಿಯ ಅಗತ್ಯವಿಲ್ಲ. ಬರುಡಾದ, ಬಂಜರು ಭೂಮಿ, ಸರ್ಕಾರಿ ಗೋಮಾಳ, ಬೀಳು ಬಳಸಿಯು ಕಟ್ಟಡ ನಿರ್ಮಿಸ ಬಹುದು. ಆದರೆ, ರಾಜಕೀಯ ದುರುದ್ದೇಶದಿಂದ ಹಠಕ್ಕೆ ಬಿದ್ದಂತೆ ರೈತರ ಭೂಮಿ ಕಬಳಿಸುವುದು ಸರಿಯಲ್ಲ. ಭೂಮಿಯನ್ನೇ ನಂಬಿ ಬದುಕುವ ಕುಟುಂಬಗಳನ್ನು ಸಂಕಷ್ಟಕ್ಕೆ ದೂಡುವುದು ಸರಿಯಲ್ಲ ಎಂದರು.

ಈ ಸುದ್ದಿ ಓದಿದ್ದೀರಾ? ಕೆ ಆರ್ ಪೇಟೆ | ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರ ತಡೆಗಟ್ಟುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ಸಂಘಟನಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ, ಕಾರ್ಯದರ್ಶಿ ಮಂಡಕಳ್ಳಿ ಮಹೇಶ್ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

ಹಕ್ಕೊತ್ತಾಯ:

  • ನಿಮ್ಹಾನ್ಸ್ ಆಸ್ಪತ್ರೆಯನ್ನು ಬೇರೆ ಕಡೆ ನಿರ್ಮಾಣ ಮಾಡಲು ಕ್ರಮ ಕೈಗೊಂಡು G_{d} ಜಮೀನನ್ನು ಉಳಿಸಬೇಕು.
  • ಮೈಸೂರು ಸೌತ್ ಪೋಲೀಸ್ ಠಾಣಾ ಸಬ್‌ ಇನ್ಸ್‌ಪೆಕ್ಟರ್ ಶೇಖರ್‌ರವರು ರೈತ ಹೋರಾಟಗಾರರ ಕಪಾಳಕ್ಕೆ ಹೊಡೆದು, ಹಲ್ಲೆ ಮಾಡಿರುತ್ತಾರೆ. ಅಲ್ಲದೆ, ಮಹಿಳೆ ಮೇಲೆ ದೌರ್ಜನ್ಯ ಎಸಗಿದ್ದು, ಇವರ ಮೇಲೆ ದೂರು ದಾಖಲಿಸಬೇಕು ಮತ್ತು ಇವರನ್ನು ಅಮಾನತ್ತಿನಲ್ಲಿಟ್ಟು ತನಿಖೆ ನಡೆಸಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...