ಮೈಸೂರು | ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಕಚೇರಿ ಸ್ಥಳಾಂತರಕ್ಕೆ ವಿರೋಧ: ಧರಣಿ ಎಚ್ಚರಿಕೆ ನೀಡಿದ ಜಿ.ಟಿ. ದೇವೇಗೌಡ

Date:

ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯ ಕಚೇರಿಯನ್ನು ರಮ್ಮನಹಳ್ಳಿ ಗ್ರಾಮದಲ್ಲೇ ಮುಂದುವರಿಸದಿದ್ದರೆ ಸಾವಿರಾರು ಗ್ರಾಮಸ್ಥರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸುವುದಾಗಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿಯವರಿಗೆ ಎಚ್ಚರಿಕೆ ನೀಡಿದರು.

- Advertisement -

ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಕಚೇರಿ ಸ್ಥಳಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಹುಣಸೂರು ರಸ್ತೆಯ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಇಂದು ಶಾಸಕ ಜಿ.ಟಿ. ದೇವೇಗೌಡರನ್ನು ಭೇಟಿ ಮಾಡಿದ ರಮ್ಮನಹಳ್ಳಿ ಗ್ರಾಮದ ನೂರಾರು ಮಂದಿ ಮುಖಂಡರು, ಜಿಲ್ಲಾಧಿಕಾರಿಗಳ ಸೂಚನೆಗೂ ಪರಿಗಣನೆ ನೀಡದೇ ಪಟ್ಟಣ ಪಂಚಾಯಿತಿ ಕಚೇರಿಯನ್ನು ಬೇರೆಡೆ ನಡೆಸುತ್ತಿರುವುದಾಗಿ ದೂರು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ್ ಹಾಗೂ ಕಂದಾಯ ನಿರೀಕ್ಷಕ ಮಂಜುನಾಥ್ ತಮ್ಮ ಸ್ವಹಿತಾಸಕ್ತಿಗಾಗಿ ಕಚೇರಿಯನ್ನು ಸ್ಥಳಾಂತರಿಸಿ ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ರಮ್ಮನಹಳ್ಳಿ ಗ್ರಾಮಸ್ಥರಿಗೆ ತೀವ್ರ ಅನಾನುಕೂಲ ಉಂಟಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು. ಈ ಸಮಸ್ಯೆಯನ್ನು ತಕ್ಷಣ ಬಗೆಹರಿಸಿ ಕಚೇರಿಯನ್ನು ರಮ್ಮನಹಳ್ಳಿಯಲ್ಲೇ ಉಳಿಸಬೇಕೆಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ ಶಾಸಕ ಜಿ.ಟಿ.ದೇವೇಗೌಡರು, “ಈಗಾಗಲೇ ಸೂಚನೆ ನೀಡಿದ್ದರೂ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಕಚೇರಿ ಸ್ಥಳಾಂತರ ಸಮಸ್ಯೆ ಏಕೆ ಬಗೆಹರಿದಿಲ್ಲ?” ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, “ರಮ್ಮನಹಳ್ಳಿಯಲ್ಲೇ ಪಟ್ಟಣ ಪಂಚಾಯಿತಿ ಮುಖ್ಯ ಕಚೇರಿಯನ್ನು ಮುಂದುವರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

ಆದರೆ, ನಾಳೆಯಿಂದಲೇ ರಮ್ಮನಹಳ್ಳಿ ಗ್ರಾಮದಲ್ಲೇ ಪಟ್ಟಣ ಪಂಚಾಯಿತಿ ಮುಖ್ಯ ಕಚೇರಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳದಿದ್ದರೆ ಸಾವಿರಾರು ಗ್ರಾಮಸ್ಥರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸುವುದಾಗಿ ಶಾಸಕ ಜಿ.ಟಿ.ದೇವೇಗೌಡರು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ಪೌಷ್ಟಿಕ ಆಹಾರ ವಿತರಣೆಯಲ್ಲಿ ವಿಳಂಬ ಖಂಡಿಸಿ ಆದಿವಾಸಿಗಳ ಪ್ರತಿಭಟನೆ

ಈ ಸಂದರ್ಭದಲ್ಲಿ ರಮ್ಮನಹಳ್ಳಿ ಗ್ರಾಮದ ಮುಖಂಡರಾದ ವೆಂಕಟಯ್ಯ, ಎಂ. ಮಹದೇವು, ನಾಗರಾಜು, ಗೋಪಾಲಿ, ಮಹದೇವ, ಜೆ. ಗೋವಿಂದ, ರಾಜಶೇಖರ, ರಮೇಶ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು...