ಕೆಎಚ್‌ಐಆರ್‌ ಸಿಟಿ ಕೊಪ್ಪಳದಲ್ಲಿ ಆರಂಭಿಸುವಂತೆ ಸರ್ಕಾರಕ್ಕೆ ಒತ್ತಾಯ

Date:

Advertisements

ಬೆಂಗಳೂರು ನಗರದಿಂದ ಸುಮಾರು 60 ಕಿಲೋ ಮೀಟರ್ ದೂರದಲ್ಲಿ ಆರಂಭಿಸಲು ಉದ್ದೇಶಿಸಲಾಗಿರುವ ಕೆಎಚ್‌ಐಆರ್‌(Knowledge, Health, Innovation and Research) ಸಿಟಿಯನ್ನು ಕೊಪ್ಪಳ ಜಿಲ್ಲೆಗೆ ಸ್ಥಳಾಂತರಿಸಬೇಕು ಹಾಗೂ ಸ್ಥಾಪಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಬೆಂಗಳೂರು ಸಮೀಪ 2 ಸಾವಿರ ಎಕರೆಯಲ್ಲಿ ಕೆಎಚ್‌ಐಆರ್‌ ಸಿಟಿ ಆರಂಭವಾಗಲಿದೆ. ಬೆಂಗಳೂರು ಈಗಾಗಲೇ ಅತಿಯಾದ ಜನದಟ್ಟಣೆಯಿಂದ, ಟ್ರಾಫಿಕ್ ಸಮಸ್ಯೆ ಸೇರಿದಂತೆ ಇನ್ನಿತರ ತೊಂದರೆಯಿಂದ ಬಳಲುತ್ತಿದೆ. ಹೀಗಾಗಿ, ಬೆಂಗಳೂರಿನಲ್ಲಿ ಸ್ಥಾಪಿಸುವುದಕ್ಕಿಂತ ಕೊಪ್ಪಳ ಜಿಲ್ಲೆಯಲ್ಲಿ ಆರಂಭಿಸಬೇಕು ಎಂದು ಮನವಿ ಮಾಡಿದರು.

ಕೊಪ್ಪಳ ಜಿಲ್ಲೆಯಲ್ಲಿ ಸ್ಥಾಪಿಸಿದರೆ ಇಲ್ಲಿನ ಜನರು ವಲಸೆ ಹೋಗುವ ಸಮಸ್ಯೆಯನ್ನು ತಡೆಗಟ್ಟಬಹುದು. ನಿರುದ್ಯೋಗ, ಬಡತನ ,ಆರ್ಥಿಕ ಸಮಸ್ಯೆಯಿಂದ ಭಾಗದ ಜನರು ವಲಸೆ ಹೋಗುತ್ತಿದ್ದಾರೆ. ಒಂದು ವೇಳೆ ಕೆಎಚ್‌ಐಆರ್‌ ಸಿಟಿ ಕೊಪ್ಪಳದಲ್ಲಿ ಸ್ಥಾಪಿಸಿದರೆ ಯುವ ಸಬಲೀಕರಣಕ್ಕೆ ಅನುಕೂಲ ಆಗುತ್ತದೆ ಎಂದು ಒತ್ತಾಯಿಸಿದರು.

Advertisements

ಮನವಿ ಸಲ್ಲಿಸುವ ವೇಳೆ ಪ್ರಗತಿಪರ ಚಿಂತಕ ಅಲ್ಲಮ ಪ್ರಭು ಬೆಟ್ಟದೂರು, ಗಫ್ಫಾರ್, ಬಸವರಾಜ್ ಶೀಲವಂತ, ಲೋಹಿತ್, ಸಂಜೀವ್, ತುಕಾರಾಮ್, ಯಮನೂರು ಇನ್ನಿತರರು ಹಾಜರಿದ್ದರು.

ಇದನ್ನು ಓದಿದ್ದೀರಾ? ರಾಯಚೂರು | ದೇವದಾಸಿ ಮಹಿಳೆಯರಿಗೆ ನಿವೇಶನ ಹಂಚಿಕೆ ಮಾಡಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಸರಕಾರ ಕೆಎಚ್‌ಐಆರ್‌ ಸಿಟಿ ದಾಬಸ್‌ಪೇಟೆ ಮತ್ತು ದೊಡ್ಡಬಳ್ಳಾಪುರ ನಡುವೆ ಸ್ಥಾಪಿಸಲು ಸಿದ್ಧವಾಗಿದೆ. ಈ ಸ್ಥಳವು ಬೆಂಗಳೂರಿನಿಂದ 60 ಕಿಲೋಮೀಟರ್ ದೂರದಲ್ಲಿದೆ ಮತ್ತು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರದಲ್ಲೇ ಇದನ್ನು ಪ್ರಾರಂಭಿಸಲಿದ್ದಾರೆ ಎಂದು ಕರ್ನಾಟಕ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಈ ಯೋಜನೆಯು ನಾಲ್ಕು ವಿಭಾಗಗಳಲ್ಲಿ ₹ 40,000 ಕೋಟಿ ಮೌಲ್ಯದ ಹೂಡಿಕೆಗಳನ್ನು ಆಕರ್ಷಿಸುವ ನಿರೀಕ್ಷೆಯಿದೆ ಮತ್ತು ಸುಮಾರು 80,000 ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಸಾಧ್ಯತೆಯಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X