ಅ.9 ರಿಂದ ವಿಸ್ತರಿತ ನೇರಳೆ ಮಾರ್ಗದಲ್ಲಿ ‘ನಮ್ಮ ಮೆಟ್ರೋ’ ಸಂಚಾರ

Date:

ಬೆಂಗಳೂರಿನ ‘ನಮ್ಮ ಮೆಟ್ರೋ’ದ ನೇರಳೆ ಮಾರ್ಗವು ಯಾವುದೇ ಅಧಿಕೃತ ಉದ್ಘಾಟನೆ ಇಲ್ಲದೆ, ವಿಸ್ತರಿತ ಮಾರ್ಗದಲ್ಲಿ ಅಕ್ಟೋಬರ್ 9 (ಸೋಮವಾರ) ರಿಂದ ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿದೆ.

- Advertisement -

2.1 ಕಿ.ಮೀ ದೂರ ಇರುವ ಬೈಯಪ್ಪನಹಳ್ಳಿ-ಕೆ.ಆರ್.ಪುರ ಮತ್ತು 2.05 ಕಿ.ಮೀ ಇರುವ ಕೆಂಗೇರಿ-ಚಲ್ಲಘಟ್ಟ ಮಾರ್ಗಗಳಲ್ಲಿ ವಾಣಿಜ್ಯ ಸೇವೆಗಳು ಸೋಮವಾರ ಬೆಳಗ್ಗೆ 5 ರಿಂದ ಆರಂಭವಾಗಲಿವೆ. ಈ ಮಾರ್ಗಗಳು ನೇರಳೆ ಬಣ್ಣದ ಭಾಗವಾಗಿವೆ. 42.85 ಕಿ.ಮೀ ವ್ಯಾಪ್ತಿಯಿರುವ ಈ ಮಾರ್ಗವು ಪೂರ್ವದಲ್ಲಿ ವೈಟ್‌ಫೀಲ್ಡ್‌ನಿಂದ ಪಶ್ಚಿಮದಲ್ಲಿ ಚಲ್ಲಘಟ್ಟದವರೆಗೆ ವಿಸ್ತರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಅಧಿಕೃತ ಉದ್ಘಾಟನೆಗೆ ಕಾಯದೆ ಸಾರ್ವಜನಿಕರಿಗೆ ಎರಡೂ ಮಾರ್ಗಗಳನ್ನು ತೆರೆಯಲು ನಾನು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ವೈಯಕ್ತಿಕವಾಗಿ ವಿನಂತಿಸಿದ್ದೇನೆ. ಈ ತಿಂಗಳ ಕೊನೆಯಲ್ಲಿ ಅಧಿಕೃತ ಉದ್ಘಾಟನೆ ನಡೆಯಲಿದೆ” ಎಂದು ಸಂಸದ ಪಿ ಸಿ ಮೋಹನ್ ತಿಳಿಸಿದ್ದಾರೆ.

ನಾಳೆಯಿಂದ ನೇರಳೆ ಮಾರ್ಗದಲ್ಲಿ ‘ನಮ್ಮ ಮೆಟ್ರೋ’ ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಗಳೂರಿನ ಬಿಜೆಪಿ ಸಂಸದರು ಸ್ವಾಗತ ಕೋರಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿ ಪ್ರಧಾನಿ ಮೋದಿಯವರಿಗೆ ಸಂಸದರು ಧನ್ಯವಾದ ತಿಳಿಸಿದ್ದಾರೆ. ಅ.9 ರಿಂದ ಚಲ್ಲಘಟ್ಟ-ಕೆಂಗೇರಿ, ಬೈಯಪ್ಪನಹಳ್ಳಿ-ಕೆ.ಆರ್.ಪುರ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಲಿದೆ.

ಈ ಸುದ್ದಿ ಓದಿದ್ದೀರಾ? ಜಾತಿಗಣತಿ ಮಾಡಿ ಏನು ಉಪಯೋಗ: ಹೆಡ್‌.ಡಿ.ಕುಮಾರಸ್ವಾಮಿ ಪ್ರಶ್ನೆ

ಕೆ ಆರ್ ​ಪುರಂ-ಬೈಯಪ್ಪನಹಳ್ಳಿ ಮತ್ತು ಕೆಂಗೇರಿ-ಚಲ್ಲಘಟ್ಟ ಎರಡು ಮೆಟ್ರೋ ಮಾರ್ಗಗಳ ಆರಂಭದಿಂದ ಬೆಂಗಳೂರು ಪೂರ್ವದ ಕಡೆ ಜನದಟ್ಟಣೆ ಕಡಿಮೆ ಆಗುವ ನಿರೀಕ್ಷೆಯಿದೆ. ಪ್ರತಿದಿನ ಸುಮಾರು 5 ರಿಂದ 6 ಲಕ್ಷ ಜನರು ಬೆಂಗಳೂರು ಮೆಟ್ರೋವನ್ನು ಬಳಸುತ್ತಾರೆ. ಬೈಯಪ್ಪನಹಳ್ಳಿ-ಕೆ.ಆರ್.ಪುರಂ ಮೆಟ್ರೋ ವಿಭಾಗವು ಸಂಪೂರ್ಣ ತೆರೆದರೆ, ಸುಮಾರು 50-60 ಪ್ರತಿಶತದಷ್ಟು ಜನರಿಗೆ ಅನುಕೂಲವಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...