ಮಂಡ್ಯ | ಕಾಮಗಾರಿ ಆರಂಭಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ-ಬೇಡಿಕೆ ಈಡೇರದಿದ್ದರೆ ಕಪ್ಪು ಬಾವುಟ ಪ್ರತಿಭಟನೆ: ಸಿದ್ದರಾಜು

Date:

ಕರ್ನಾಟಕ ಜನಶಕ್ತಿ, ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಾಗೂ ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ನೇತೃತ್ವದಲ್ಲಿ ಮಂಡ್ಯದ ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿ ಮುಂಭಾಗದಲ್ಲಿ ಸೋಮವಾರ ಧರಣಿ ನಡೆಸಿ, ಕಾಳಿಕಾಂಭ ಶ್ರಮಿಕ ನಗರದ ನಿವಾಸಿಗಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಒತ್ತಾಯಿಸಲಾಯಿತು.

- Advertisement -

ಮಂಡ್ಯ ನಗರದ ಕಾಳಿಕಾಂಭ ದೇವಸ್ಥಾನದ ಹಿಂಭಾಗದ ಕೊಳಚೆ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯಿಂದ ಅಲ್ಲಿನ ನಿವಾಸಿಗಳ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಅನೇಕ ಗುಡಿಸಲುಗಳು ಹಾಗೂ ಸಣ್ಣ ಮನೆಗಳ ಮೇಲ್ಛಾವಣಿಯ ಸೀಟುಗಳು ಮತ್ತು ಗರಿಗಳು ಗಾಳಿಗೆ ತೂರಿಹೋಗಿದ್ದು, ಮಳೆನೀರು ಮನೆಗಳೊಳಗೆ ನುಗ್ಗಿ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಳೆ ನೀರು ನಿಂತಿರುವ ಪರಿಣಾಮ ಚೇಳು, ಹಾವು ಸೇರಿದಂತೆ ವಿಷಜಂತುಗಳು ಮನೆಗಳಿಗೆ ನುಗ್ಗುತ್ತಿದ್ದು, ಮಕ್ಕಳು, ಮಹಿಳೆಯರು ಹಾಗೂ ವಯೋವೃದ್ಧರ ಆರೋಗ್ಯ ಮತ್ತು ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದೆ. ಭಯ ಮತ್ತು ಅಸುರಕ್ಷಿತ ವಾತಾವರಣದಲ್ಲಿ ಜನರು ದಿನ ಕಳೆಯುವಂತಾಗಿದೆ ಎಂದು ಹೇಳಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಸಿದ್ದರಾಜು, ಕಾಳಿಕಾಂಭ ಶ್ರಮಿಕ ನಗರದ ನಿವಾಸಿಗಳ ಪರವಾಗಿ ಸಲ್ಲಿಸಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ 2025ರ ಸೆಪ್ಟೆಂಬರ್ 19ರಂದು ಹೈಕೋರ್ಟ್ ತೀರ್ಪು ನೀಡಿದ್ದರೂ, ಸುಮಾರು ಒಂಬತ್ತು ತಿಂಗಳು ಕಳೆದರೂ ಕೊಳಗೇರಿ ಅಭಿವೃದ್ಧಿ ಮಂಡಳಿ ಮನೆಗಳ ನಿರ್ಮಾಣ ಕಾಮಗಾರಿಯನ್ನು ಆರಂಭಿಸಿಲ್ಲ ಎಂದು ಆರೋಪಿಸಿದರು.

ಅಧಿಕಾರಿಗಳ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ಬಡ ಜನರು ಬೀದಿಗೆ ಬಿದ್ದಿದ್ದು, ಮಾನವೀಯ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ ಬಡಜನ ವಿರೋಧಿ ನೀತಿಯನ್ನು ಖಂಡಿಸಿ ಹೋರಾಟ ಆರಂಭಿಸಲಾಗಿದೆ ಎಂದು ಹೇಳಿದರು.

ಅಧಿಕಾರಿಗಳು ಮತ್ತು ಸರ್ಕಾರವು ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಜೂನ್ 3ರಂದು ಬೆಂಗಳೂರಿನಲ್ಲಿ ನಡೆಯಲಿರುವ ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ಸಾಧಕರ ಬದುಕಿನ ಸ್ಫೂರ್ತಿ ಅನಾವರಣಗೊಳಿಸಿದ ‘ಸಾಧನೆಯ ಶಿಖರಗಳು’ ಕೃತಿ ಲೋಕಾರ್ಪಣೆ

ಧರಣಿಯಲ್ಲಿ ರಾಜು, ಶಿವಲಿಂಗ, ಸುಮತಿ, ಸುಬ್ರಹ್ಮಣ್ಯ, ಇಲಿಯಾಜ್ ಪಾಷ, ದಿವ್ಯ, ವಿಶಾಲಾಕ್ಷಮ್ಮ, ವರಲಕ್ಷ್ಮಿ ಸೇರಿದಂತೆ ಹಲವರು ಇದ್ದರು.

ಬೇಡಿಕೆಗಳು:

  • ಕಾಳಿಕಾಂಭ ಶ್ರಮಿಕ ನಗರದ 39 ಮನೆಗಳ ನಿರ್ಮಾಣ ಕಾಮಗಾರಿಯನ್ನು ತಕ್ಷಣ ಆರಂಭಿಸಬೇಕು.
  • ಮಳೆಗಾಲದ ಹಿನ್ನೆಲೆಯಲ್ಲಿ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಿ ನಿವಾಸಿಗಳಿಗೆ ಆಶ್ರಯ ಕಲ್ಪಿಸಬೇಕು.
  • ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ದವಸ-ಧಾನ್ಯ ಹಾಗೂ ಗೃಹೋಪಯೋಗಿ ವಸ್ತುಗಳು ಹಾನಿಗೊಳಗಾಗಿರುವುದರಿಂದ ಪ್ರತಿ ಮನೆಗೆ ₹25 ಸಾವಿರ ಪರಿಹಾರ ನೀಡಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...