ಬೀದರ್‌ | ಡಾ.ಅಂಬೇಡ್ಕರ್‌ ಬಗ್ಗೆ ಅಮಿತ್‌ ಶಾ ಹೇಳಿಕೆ : ಜಿಲ್ಲಾದ್ಯಂತ ಭುಗಿಲೆದ್ದ ಆಕ್ರೋಶ

Date:

ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಬಗ್ಗೆ ಕೇಂದ್ರ ಸಚಿವ ಅಮಿತ್‌ ಶಾ ಆಡಿರುವ ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಜಿಲ್ಲಾದ್ಯಂತ ಅಮಿತ್‌ ಶಾ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

- Advertisement -

ಡಾ.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್‌ನಲ್ಲಿ ನೀಡಿರುವ ಹೇಳಿಕೆ ಖಂಡಿಸಿ ಜನಪರ ಸಂಘಟನೆಗಳ ಒಕ್ಕೂಟ, ವಿವಿಧ ದಲಿತ ಪರ ಸಂಘಟನೆಗಳ ನೇತ್ರತ್ವದಲ್ಲಿ ಹುಮನಾಬಾದ್ ಬಂದ್ ಕರೆ ನೀಡಿದ ಹಿನ್ನಲೆ ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಚ್ಚಿ ಪ್ರತಿಭಟನೆಗೆ ಬೆಂಬಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಲ್ಲಿ ಜನಪರ ಸಂಘಟನೆಗಳ ಒಕ್ಕೂಟದಿಂದ ಹಳೆ ತಹಸೀಲ್ ಕಚೇರಿಯಿಂದ ಛತ್ರಪತಿ ಶಿವಾಜಿ ವೃತ್ತ, ಬಸವೇಶ್ವರ ವೃತ್ತ, ಬಾಲಾಜಿ ಮಂದಿರ ಸರ್ದಾರ್ ಪಟೇಲ್‌ ವೃತ್ತದ ಮೂಲಕ ಡಾ.‌ ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದವರೆಗೆ ಕೇಂದ್ರ ಸರ್ಕಾರ ಹಾಗೂ ಅಮಿತ್‌ ಶಾ ವಿರುದ್ಧ ಘೋಷಣೆ ಕೂಗುತ್ತ ಮೆರವಣಿಗೆ ತೆರಳಿತು. ಬಳಿಕ ಅಮಿತ್‌ ಶಾ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರು ಸಚಿವರಾದ ಬಳಿಕ ಜಿಲ್ಲೆಯಲ್ಲಿ ಹಾಗೂ ಅವರ ತವರು ಕ್ಷೇತ್ರ ಭಾಲ್ಕಿಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿವೆ. ಹೀಗಾಗಿ ಸಚಿವ ಈಶ್ವರ ಖಂಡ್ರೆ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ, ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಅವರನ್ನು ಅಮಾನತ್ತುಗೊಳಿಸಬೇಕು ಎಂದು ಒತ್ತಾಯಿಸಿದರು.

ʼಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಡಾ.ಅಂಬೇಡ್ಕರ್ ಅವರನ್ನು ಅವಮಾನಿಸಿದ್ದು ಖಂಡನೀಯ. ಇದರಿಂದ ಅಂಬೇಡ್ಕರ್‌ ಅನುಯಾಯಿಗಳಿಗೆ ನೋವು ತಂದಿದೆ. ಕೂಡಲೇ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ದೇಶದ್ರೋಹ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದು ಆಗ್ರಹಿಸಿದರು.

ಈ ಸಂಬಂಧ ರಾಷ್ಟ್ರಪತಿ, ರಾಜ್ಯಪಾಲರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ಅಂಜುಮ್ ತಬಸುಮ್ ಅವರಿಗೆ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ರಮೇಶ ಡಾಕುಳಗಿ, ರಮೇಶ ಚವ್ಹಾಣ್, ಅಂಕುಶ ಗೋಖಲೆ, ಶೇಕ್ ಮಕ್ಸೂದ್, ಗೌತಮ ಶಿವರಾಜ ಚೀನಕೇರೆ, ರವಿಕುಮಾರ ಹೊಸಳ್ಳಿ, ಗಜೇಂದ್ರ ಕನಕಟಕರ್, ಅನೀಲ ದೊಡ್ಡಿ, ಸುಭಾಷ ಆರ್ಯ, ಶ್ರೀಧರ, ಲಕ್ಷ್ಮೀಪುತ್ರ ಮಾಳಗೆ, ಶಿವಪುತ್ರ ಮಾಳಗೆ, ಪ್ರಭುರಾವ್ ತಾಳಮಡಗಿ, ಗೌತಮ‌ ಸಾಗರ್‌ ಸೇರಿದಂತೆ ವಿವಿಧ ಸಂಘಟನೆಗಳ ಅನೇಕರು ಪಾಲ್ಗೊಂಡಿದ್ದರು.

ಹುಲಸೂರ : ಅಮಿತ್‌ ಶಾ ಗಡಿಪಾರಿಗೆ ದಲಿತ್‌ ಪ್ಯಾಂಥರ್‌ ಆಗ್ರಹ

ಸಂಸತ್ತಿನಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಭಾರತೀಯ ದಲಿತ್ ಫ್ಯಾಂಥರ್‌ ವತಿಯಿಂದ ಹುಲಸೂರ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.

WhatsApp Image 2024 12 25 at 8.29.08 AM
ಭಾರತೀಯ ದಲಿತ ಪ್ಯಾಂಥರ್‌ ವತಿಯಿಂದ ಹುಲಸೂರನಲ್ಲಿ ಗೃಹ ಸಚಿವ ಅಮಿತ್‌ ಶಾ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.

ದೇಶಕ್ಕೆ ಕೋಟ್ಯಾಂತರ ಜನರ ಪಾಲಿಗೆ ದೇವರ ಸಮಾನರಾದ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಿಗೆ ರಾಜ್ಯಸಭೆಯಲ್ಲಿ ಅಪಮಾನಿಸಿದ ಅಮಿತ್‌ ಶಾ ಸಂಪುಟದಲ್ಲಿ ಮುಂದುವರೆಯಲು ನೈತಿಕತೆ ಇಲ್ಲ. ಕೂಡಲೇ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂಬಂಧ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್‌ ಶಿವಾನಂದ ಮೇತ್ರೆ ಅವರಿಗೆ ಸಲ್ಲಿಸಿದರು.

ಭಾರತೀಯ ದಲಿತ ಪ್ಯಾಂಥರ್‌ ಜಿಲ್ಲಾಧ್ಯಕ್ಷ ವೈಜಿನಾಥ ಸಿಂಧೆ, ತಾಲ್ಲೂಕಾಧ್ಯಕ್ಷ ಅಶೋಕ ಸಿಂಧೆ ಸೇರಿದಂತೆ ಮನೋಹರ ಮೋರೆ, ಸಿದ್ದಾರ್ಥ ಡಾಂಗೆ, ಲೋಕೇಶ ಕಾಂಬಳೆ, ದತ್ತಾ ಮೋರೆ, ಸತೀಷ ಗಾಯಕವಾಡ, ದೇವಾನಂದ ಟೋಳೆ, ಸಂದೀಪ ಮುಕಿಂದೆ, ನಾಗನಾಥ ಬನ್ಸೂಡೆ, ಅಶೋಕ ಕಾಂಬಳೆ, ಅನೀಲ ಒಡೆಯಾರ್‌, ರಾಜು ಲಾಟೇ, ರಾವಸಾಬ್‌ ಸಿಂಧೆ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಕಮಲನಗರ : ಸಂಪುಟದಿಂದ ಅಮಿತ್‌ ಶಾ ವಜಾಕ್ಕೆ ಒತ್ತಾಯ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬಾಬಾ ಸಾಹೇಬ್‌ ಅಂಬೇಡ್ಕರ್‌ ಕುರಿತು ನೀಡಿದ ಹೇಳಿಕೆ ಖಂಡಿಸಿ ಕಮಲನಗರ ಪಟ್ಟಣದಲ್ಲಿ ಜನಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.

ಪಟ್ಟಣದ ಮುಖ್ಯ ರಸ್ತೆ ಬಸ್‌ ನಿಲ್ದಾಣದಿಂದ ತಹಸೀಲ್ದಾರ್‌ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ಅಮಿತ್‌ ಕುಲಕರ್ಣಿ ಅವರಿಗೆ ಸಲ್ಲಿಸಿದರು.

WhatsApp Image 2024 12 25 at 9.05.39 AM
ಕಮಲನಗರದಲ್ಲಿ ಜನಪರ ಸಂಘಟನೆಗಳ ಒಕ್ಕೂಟದಿಂದ ಅಮಿತ್‌ ಶಾ ವಿರುದ್ಧ ಪ್ರತಿಭಟನೆ ನಡೆಯಿತು.

ರಾಜ್ಯಸಭೆʼ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ತಮ್ಮ ಭಾಷಣದಲ್ಲಿ, ಅಂಬೇಡ್ಕ‌ರ್, ಅಂಬೇಡ್ಕ‌ರ್, ಅಂಬೇಡ್ಕ‌ರ್ ಎಂಬುದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಆಗಿದೆ. ಅಂಬೇಡ್ಕ‌ರ್ ಹೆಸರು ಜಪ ಮಾಡುವ ಬದಲಿಗೆ ದೇವರ ಹೆಸರನ್ನು ಜಪಿಸಿದ್ದರೆ ಏಳೇಳು ಜನ್ಮದಲ್ಲೂ ಸ್ವರ್ಗ ಪ್ರಾಪ್ತಿಯಾಗುತ್ತಿತ್ತುʼ ಎನ್ನುವ ಮೂಲಕ ಅಂಬೇಡ್ಕ‌ರ್ ಅವರನ್ನು ಅವಮಾನಿಸಿದ್ದಾರೆ. ಅಮಿತ್ ಶಾ ನೀಡಿರುವ ಹೇಳಿಕೆಯಿಂದ ಸಂವಿಧಾನಕ್ಕೂ ಅಪಮಾನಿಸಿದಂತಾಗಿದೆ. ಆದ್ದರಿಂದ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಒಕ್ಕೂಟದ ಪ್ರಮುಖರಾದ ಅಮೂಲ ಸೂರ್ಯವಂಶಿ, ಭಾಗವತ ಭೂತಾಳೆ, ಪ್ರವೀಣ ಕದಮ, ಶಾಲಿವಾನ ಡೊಂಗರೆ, ರಾಜೇನ ಸೂರ್ಯವಂಶಿ, ತುಳಸಿರಾಮ ಜಕಾತೆ, ಪ್ರೇಮಕುಮಾರ ರಣದೀವೆ, ಉಷಾ ವಾಘಮಾರೆ,ಜ್ಞಾನೋಬಾ ಕಾಂಬಳೆ, ಗೋವಿಂದರಾವ್‌ ತಾಂದಳೆ, ಉತ್ತಮಕುಮಾರ್‌ ಖ್ಯಾಡ್‌, ವಿಜಯಕುಮಾರ್‌ ಸೂರ್ಯವಂಶಿ, ನರಸಿಂಗ್‌ ನಿರ್ಮಳೆ, ವಿಜಯಾನಂದ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಚಿಟಗುಪ್ಪ : ಅಮಿತ್‌ ಶಾ ರಾಜೀನಾಮೆಗೆ ಆಗ್ರಹ

ರಾಜ್ಯಸಭೆಯಲ್ಲಿ ಡಾ.ಬಿ.ಆರ್.‌ ಅಂಬೇಡ್ಕರ್‌ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಚಿಟಗುಪ್ಪ ತಾಲ್ಲೂಕಿನ ಮನ್ನಾಏಖೇಳ್ಳಿಯಲ್ಲಿ ಪ್ರತಿಭಟನೆ ನಡೆಯಿತು.

ಸ್ವಾಭಿಮಾನಿ ಡಾ.ಬಿ.ಆರ್.‌ ಅಂಬೇಡ್ಕರ್‌ ವಾದಿಗಳ ಹೋರಾಟ ಸಮಿತಿಯ ಪ್ರಮುಖರರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.

WhatsApp Image 2024 12 25 at 9.34.55 AM
ಚಿಟಗುಪ್ಪ ತಾಲ್ಲೂಕಿನ ಮನ್ನಾಏಖೇಳ್ಳಿಯಲ್ಲಿ ಅಮಿತ್‌ ಶಾ ರಾಜೀನಾಮೆಗೆ ಆಗ್ರಹಿಸಿ ಸ್ವಾಭಿಮಾನಿ ಡಾ.ಬಿ.ಆರ್. ಅಂಬೇಡ್ಕರ್‌ ವಾದಿಗಳ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು.

ದೇಶದ ಜನತೆಗೆ ಸಂವಿಧಾನ ಮೂಲಕ ಸ್ವಾತಂತ್ರ್ಯ ಸಮಾನತೆ ನೀಡಿದ ಬಾಬಾ ಸಾಹೇಬರ ಕುರಿತು ಅಮಿತ್‌ ಶಾ ಕೀಳಾಗಿ ಮಾತನಾಡಿದ್ದು ಸಹಿಸುವುದಿಲ್ಲ. ಇದರಿಂದ ಅಂಬೇಡ್ಕರ್‌ ಅನುಯಾಯಿಗಳಿಗೆ ನೋವು ತಂದಿದೆ. ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಿದ ವ್ಯಕ್ತಿ ಸಂಪುಟದಲ್ಲಿ ಮುಂದುವರೆಯಲು ಅರ್ಹವಲ್ಲ. ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಪ್ರಮುಖರಾದ ಶಿವಕುಮಾರ್‌ ಮುತ್ತಂಗಿಕರ್‌, ಶಿವಕುಮಾರ್‌ ಮಂಗಲಗಿಕರ್‌, ಲಕ್ಷ್ಮಣರಾವ ಸಾತನೂರ, ಪ್ರಲ್ಹಾದ್‌ ಮಾಲೇಕರ್‌, ಶಾಂತಕುಮಾರ್‌ ಪಟ್ನೆ, ಕುಪೇಂದ್ರ ಕಾಂಬ್ಳೆ, ರಾಜಕುಮಾರ್‌ ಅಗಸಿ, ಗೌತಮ ಬಗದಲಕರ್‌ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...