ಕೋಲಾರ ನಗರಸಭೆ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಅಂಗಡಿ ಮಾಲೀಕ

Date:

ಕೋಲಾರ : ಅಂಗಡಿಗಳಲ್ಲಿ ಪ್ಲಾಸ್ಟಿಕ್ ಪರಿಶೀಲನೆ ವೇಳೆ ನಗರಸಭೆಯ ಕಿರಿಯ ಆರೋಗ್ಯ ನಿರೀಕ್ಷನ ಮೇಲೆ ಅಂಗಡಿ ಮಾಲೀಕ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ ಕೋಲಾರ ನಗರಸಭೆ ಆರೋಗ್ಯ ನಿರೀಕ್ಷಕ ಮಂಜುನಾಥ್ ಕೋಲಾರಮ್ಮ ಸ್ವಚ್ಚತಾ ಪಡೆಯ ಸಿಬ್ಬಂದಿಯೊಂದಿಗೆ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಕುರಿತು ಕಾರ್ಯಚಾರಣೆಗೆ ಮುಂದಾಗಿದ್ದರು ಆ ವೇಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಬೇಕರಿಯೊಂದಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಏಕ ಬಳಕೆ ಪ್ಲಾಸ್ಟಿಕ್ ಪತ್ತೆಯಾಗಿದೆ ಅದನ್ನು ವಶಪಡಿಸಿಕೊಳ್ಳಲು ಮುಂದಾದಾಗ ಮಾಲೀಕ ಗೋವಿಂದು ಎಂಬಾತ ಆರೋಗ್ಯ ನಿರೀಕ್ಷಕ ಮಂಜುನಾಥನನ್ನು ಥಳಿಸಿ ಅವ್ಯಾಚ್ಯ ಶಬ್ಧಗಳಿಂದ ನಿಂಧಿಸಿದ್ದಾರೆ ಈ ಸಂಬಂಧ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ

  • ಸಿಬ್ಬಂದಿಯೊಂದಿಗೆ ಸವಚ್ಚತಾ ಕಾರ್ಯಪಡೆಯಲ್ಲಿ ಕಾರ್ಯನಿರ್ವಹಿಸಲು ಪೌರಾಯುಕ್ತರ ಸೂಚನೆ ಮೇರೆಗೆ ಗಸ್ತು ವಾಹನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಪರಿಶೀಲನೆಗೆ ತೆರಳಲಾಗಿತ್ತು ನಿಲ್ದಾಣದಲ್ಲಿನ ಪ್ರತಿಯೊಂದು ಅಂಗಡಿಯಲ್ಲೂ ಪರಿಶೀಲನೆ ಮಾಡಲಾಯಿತು. ಪ್ಲಾಸ್ಟಿಕ್ ದೊರೆತ ಅಂಗಡಿಗಳಿಗೆ ದಂಡ ವಿಧಿಸಿ ದೊರೆದ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಯಿತು.

    ಆದೇರೀತಿ ಶ್ರೀನಿವಾಸ ಬೇಕರಿಗೂ ಭೇಟಿ ನೀಡಲಾಯಿತು. ಆಗ ನನ್ನ ಪರಿಚಯ ಮಾಡಿಕೊಂಡು ಕಾರ್ಯಚಾರಣೆ ನಡೆಸಿದಾಗ ಏಕ ಬಳಕೆ ಪ್ಲಾಸ್ಟಿಕ್ ಕವರ್‌ಗಳು 4 ಕೆಜಿಯಷ್ಟು ದೊರಕಿತು ಅದನ್ನು ಜಪ್ತಿ ಪಡಿಸಿಕೊಳ್ಳಲು ಮುಂದಾದಾಗ ಸ್ಥಳದಲ್ಲೇ ಇದ್ದ ಗೋವಿಂದು ಅವಾಚ್ಯ ಶಬ್ಧಗಳಿಂದ ನಿಂಧಿಸಿ ಥಳಿಸಿದ್ದಾರೆ. ನೀನ್ಯಾರೋ ಅಂಗಡಿಯೊಳಗೆ ಬರಲು ಮೊದಲು ಹೋಗು ಅಚ್ಚೆ ಎಂದು ಕೈಯಲ್ಲಿದ್ದ ಕವರ್‌ಗಳನ್ನು ಕಿತ್ತುಕೊಂಡಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಂಜುನಾಥ್ ತಿಳಿಸಿದ್ದಾರೆ.

    ಇದನ್ನು ಓದಿದ್ದೀರಾ..? ಅಪಘಾತ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪೊಲೀಸ್ ವಾಹನ

    ಕಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ್ ನೀಡಿರುವ ದೂರನ್ನು ಸ್ವೀಕರಿಸಿರುವ ನಗರ ಠಾಣೆ ಪೊಲೀಸರು ಎ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...