ರೆಸಾರ್ಟ್‌ಗಳಲ್ಲಿ ಅವಘಡ ನಡೆದಲ್ಲಿ ಮಾಲೀಕರೇ ಜವಾಬ್ದಾರಿ : ಕೊನೆಗೂ ಎಚ್ಚೆತ್ತ ಪ್ರವಾಸೋದ್ಯಮ ಇಲಾಖೆ

Date:

Advertisements

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆಗೊಂಡ ಹೋಂ ಸ್ಟೇ, ಹೋಟೆಲ್, ರೆಸಾರ್ಟ್ ಅನ್ನು ನಡೆಸುತ್ತಿರುವ ಮಾಲೀಕರು, ನಿಮ್ಮ ಒಡೆತನದ ರೆಸಾರ್ಟ್‌, ಹೋಂ ಸ್ಟೇಗಳಲ್ಲಿ ಅವಘಡಗಳು ಸಂಭವಿಸಿದಲ್ಲಿ ನೀವೇ ಜವಾಬ್ದಾರಿ ಎಂದು ಪ್ರವಾಸೋದ್ಯಮ ಇಲಾಖೆ ಎಚ್ಚರಿಕೆ ನೀಡಿದೆ.

ಅಕ್ರಮಗಳ ನಂತರ ಪ್ರವಾಸೋದ್ಯಮ ಇಲಾಖೆ ಜವಾಬ್ದಾರಿಯಿಂದ ಜಾರಿಕೊಳ್ಳುತ್ತಿದೆ ಎಂದು ಸಾರ್ವಜನಿಕರು ಲೇವಡಿ ಮಾಡಿದ್ದಾರೆ.

ಪ್ರವಾಸೋದ್ಯಮ ಇಲಾಖೆಯಿಂದ ಹೋಂ ಸ್ಟೇ ನಡೆಸಲು ಮಾತ್ರ ಅನುಮತಿಯನ್ನು ನೀಡಲಾಗಿದ್ದು, ಇತರ ಕ್ರೀಡೆಗಳಿಗೆ ಅವಕಾಶವನ್ನು ಮಾಡಿಕೊಟ್ಟಿರುವುದಿಲ್ಲ. ಆದ್ದರಿಂದ ಹೋಂ ಸ್ಟೇಯಲ್ಲಿ ಇನ್ನಿತರ ಚಟುವಟಿಕೆಗಳು ಅಂದರೆ ಝಿಪ್ ಲೈನ್, ಬೋಟಿಂಗ್, ಜಾರ್ಬಿಂಗ್, ಕಯಾಕಿಂಗ್, ಸ್ವೀಮ್ಮಿಂಗ್ ರೋಪ್ ಗೇಮ್ಸ್, ಅರ್ಚರಿ, ಡಾರ್ಟ್‌ ಬೋರ್ಡ್‌ ಹಾಗೂ ಇನ್ನಿತರ ಚಟುವಟಿಕೆಗಳನ್ನು ನಡೆಸುತ್ತಿದ್ದಲ್ಲಿ ಈ ಕೂಡಲೇ ಪ್ರವಾಸೋದ್ಯಮ ಇಲಾಖೆ ಕಾರವಾರ ಉತ್ತರ ಕನ್ನಡ ಜಿಲ್ಲೆರವರಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisements
WhatsApp Image 2024 11 21 at 9.08.32 AM 1

ಹೋಂ ಸ್ಟೇ ಬಿಟ್ಟು ಇತರೆ ಚಟುವಟಿಕೆ ನಡೆಸಲು ಪೂರಕ ದಾಖಲೆಗಳನ್ನು ಸಲ್ಲಿಸಿ ಕೂಡಲೇ ಅನುಮತಿಯನ್ನು ಪಡೆಯಬೇಕು. ಅನುಮತಿ ಪಡೆಯದೆ ಇರುವುದರ ಬಗ್ಗೆ ಮಾಹಿತಿ ಕಂಡುಬಂದಲ್ಲಿ ಹೋಂ ಸ್ಟೇಗಳ ಸ್ಥಳ ತಪಾಸಣೆ ನಡೆಸಿ ಅನುಮತಿ ಪತ್ರವನ್ನು ರದ್ದುಗೊಳಿಸಲಾಗುವುದು ಹಾಗೂ ಕಾನೂನು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಹೋಂ ಸ್ಟೇ, ಹೋಟೆಲ್, ರೆಸಾರ್ಟ್‌ಗಳಲ್ಲಿ ಝಿಪ್ ಲೈನ್, ಬೋಟಿಂಗ್, ಜಾರ್ಬಿಂಗ್, ಕಯಾಕಿಂಗ್, ಸ್ಟಿಮ್ಮಿಂಗ್ ರೋಪ್ ಗೇಮ್ಸ್, ಆರ್ಚರಿ, ಡಾರ್ಟ ಬೋರ್ಡ ಹಾಗೂ ಇನ್ನಿತರ ಚಟುವಟಿಕೆಗಳನ್ನು ಪ್ರವಾಸಿಗರ /ಸಾರ್ವಜನಿಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಬೇಕಾಗುವ ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಂಡು ತಮ್ಮ ಸಿಬ್ಬಂದಿಗಳ ನೇತೃತ್ವದಲ್ಲಿ ನಡೆಸಬೇಕು. ಸದರಿ ಈ ವಿಷಯದ ಕುರಿತು ನಿಷ್ಕಾಳಜಿಯನ್ನು ತೋರಿ ಯಾವುದೇ ಅವಘಡಗಳು ನಡೆದಿರುವುದು ಕಂಡುಬಂದಲ್ಲಿ ಸದರಿ ಅವಘಡಕ್ಕೆ ಹೊಂಸ್ಟೇ, ಹೋಟೆಲ್/ರೆಸಾರ್ಟ್ ಮಾಲೀಕರೆ ಜವಾಬ್ದಾರರಾಗಿದ್ದು ಸದರಿರವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅನೇಕ ಮಾಲೀಕರ ಬಳಿ ಪ್ರವಾಸೋದ್ಯಮ ಇಲಾಖೆಯ ನಿಯಮಾವಳಿಗಳ ಅನುಸಾರ ನೊಂದಣಿ ಮಾಡಲು ಸರಿಯಾದ ದಾಖಲೆಗಳು ಲಭ್ಯವಿಲ್ಲದೆ ಪಂಚಾಯಿತಿ ಯಿಂದ ನಿರಾಕ್ಷೇಪಣಾ ಪ್ರಮಾಣ ಪತ್ರ ಹಾಗೂ ಪೋಲಿಸ್ ಇಲಾಖೆಯ ನಿರಾಕ್ಷೇಪಣಾ ಪ್ರಮಾಣದೊಂದಿಗೆ ನಡೆಸುತ್ತಿದ್ದಾರೆ.

ಹೀಗಾಗಿ ಜಿಲ್ಲೆಯಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಹೋಂ ಸ್ಟೇಗಳಿಂದಾಗಿ ಅನೈತಿಕ ಚಟುವಟಿಕೆಗಳು ಹೆಚ್ಚುತ್ತಿರುವುದು ಕಂಡು ಬಂದಿರುತ್ತದೆ. ಆದ್ದರಿಂದ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಪಡೆಯದಿದ್ದಲ್ಲಿ ಈ ಕೂಡಲೆ ಹೋಟೆಲ್/ರೆಸಾರ್ಟ್‌ಗಳನ್ನು ಆನ್‌ಲೈನ್ kttf.karnatakatourism.org ಮೂಲಕ ಅಗತ್ಯ ದಾಖಲೆೆಗಳನ್ನು ನೀಡಿ ಪ್ರವಾಸೋದ್ಯಮ ಇಲಾಖೆಯಡಿ ಅಥವಾ ಕೇಂದ್ರ ಸರ್ಕಾರದ Breakfast (https://tourism.gov.in) ಅಡಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ವಿಕ್ರಂ ಗೌಡರದ್ದು ನಕಲಿ ಎನ್‌ಕೌಂಟರ್ ಅಲ್ಲ, ಮಷೀನ್ ಗನ್ ಇದ್ದಿದ್ದಕ್ಕೆ ಹತ್ಯೆ: ಆಂತರಿಕ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ

ಮುಂದಿನ 15 ದಿನಗಳೊಳಗೆ ನೋಂದಣಿ ಮಾಡದೆ ಅನಧಿಕೃತವಾಗಿ ನಡೆಸಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಪ್ರವಾಸೋದ್ಯಮ ಇಲಾಖೆ ಉತ್ತರ ಕನ್ನಡ ಜಿಲ್ಲೆ ಕಾರವಾರರವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದೆಂದು ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಉಪ ನಿರ್ದೇಶಕ ಜಯಂತ ಎಚ್.ವಿ. ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X