ಪಹಲ್ಗಾಮ್ ದಾಳಿ​​ ಕೇಂದ್ರದ ಪೂರ್ವ ನಿಯೋಜಿತ ಕೃತ್ಯವೆಂದು ಆರೋಪ; ಕೋಲಾರದ ಯುವಕನ​​ ವಿರುದ್ಧ ಎಫ್‌ಐಆರ್

Date:

ಪಹಲ್ಗಾಮ್ ದಾಳಿಯು ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ ಕೃತ್ಯ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದ ಕೋಲಾರ ಜಿಲ್ಲೆಯ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ಕೋಲಾರದ ಕುಂಬಾರಪೇಟೆ ನಿವಾಸಿ ಮುನೀರ್ ಖಾನ್ ಅವರು ತಮ್ಮ ಯೂಟ್ಯೂಬ್‌ ಚಾನೆಲ್‌ನಲ್ಲಿ ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಕೇಂದ್ರದ ವಿರುದ್ಧ ಆರೋಪ ಮಾಡಿದ್ದರು. ಬಿಹಾರ ಚುನಾವಣೆಯಲ್ಲಿ ಹಿಂದು ಮತಗಳನ್ನು ಬಿಜೆಪಿಯತ್ತ ಸೆಳೆಯಲು ಪೂರ್ವನಿಯೋಜಿತವಾಗಿ ಕೇಂದ್ರ ಸರ್ಕಾರವೇ ಈ ಕೃತ್ಯವನ್ನು ನಡೆಸಿದೆ ಎಂದು ಆರೋಪಿಸಿದ್ದರು. ಅವರ ವಿರುದ್ಧ ಕೋಲಾರದ ಗಲ್ ಪೇಟೆ ಠಾಣೆಯಲ್ಲಿ ಪಕ್ರರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಯೂಟ್ಯೂಬ್‌ನಲ್ಲಿ ಅವರು ಅಪ್‌ಲೋಡ್ ಮಾಡಿದ್ದ ವಿಡಿಯೋ ಸಾರ್ವಜನಿಕರಲ್ಲಿ ಗೊಂದಲವನ್ನು ಸೃಷ್ಟಿಸುತ್ತದೆ. ಸಮಾಜದಲ್ಲಿ ಅಶಾಂತಿ, ಕೋಮು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ ಪೊಲೀಸರು ಹೇಳಿದ್ದಾರೆ. ಮುನಿರ್ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿದ್ದಾರೆ. ಯೂಟ್ಯೂಬ್‌ನಿಂದ ಆ ವಿಡಿಯೋವನ್ನು ಡಿಲೀಟ್ ಮಾಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಏಪ್ರಿಲ್ 22ರಂದು ಭಯೋತ್ಪಾದಕರು ದಾಳಿ ನಡೆಸಿದ್ದರು. ದಾಳಿಯಲ್ಲಿ ಸ್ಥಳೀಯರು ಸೇರಿದಂತೆ 28 ಮಂದಿ ಸಾವನ್ನಪ್ಪಿದ್ದಾರೆ. ಬಳಿಕ, ಭಾರತವು ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿದೆ. ಸದ್ಯ, ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...