ಕಾಣೆಯಾಗಿದ್ದ ಖಾಸಗಿ ಶಾಲೆ ಶಿಕ್ಷಕಿಯೊಬ್ಬರು ಶವವಾಗಿ ಸೋಮವಾರ ಸಂಜೆ ಪತ್ತೆಯಾಗಿದ್ದಾರೆ. ಅವರು ಜನವರಿ 20ರಿಂದ ಕಾಣೆಯಾಗಿದ್ದರು ಎಂದು ತಿಳಿದುಬಂದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿಯ ದೀಪಿಕಾ ಮೃತ ದುರ್ದೈವಿ ಎಂದು ವರದಿಯಾಗಿದೆ. ಅವರ ಮೃತದೇಹ ಮೇಲುಕೋಟೆಯ ಬೆಟ್ಟದ ಬಳಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ದೀಪಿಕಾ ಅವರು ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಶನಿವಾರ ಶಾಲೆಗೆ ಹೋಗಿದ್ದ ಅವರು ಮನೆಗೆ ಮರಳಿರಲಿಲ್ಲ. ಅವರು ಕಾಣಿಯಾಗಿರುವ ಬಗ್ಗೆ ಕುಟುಂಬಸ್ಥರು ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಪೊಲೀಸರು ಹುಡುಕಾಟ ನಡೆಸಿದಾಗ, ಅವರ ಮೃತದೇಹ ಪತ್ತೆಯಾಗಿದೆ. ಆಕೆಯನ್ನು ಹತ್ಯೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.