ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ, ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಆಯುಷ್ಯರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಧ್ಯಕ್ಷೆಯಾಗಿ ಶಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ನಿಗದಿಯಾದ ಚುನಾವಣೆ ವೇಳೆ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯನ್ನು ಚುನಾವಣೆ ಅಧಿಕಾರಿ ರಮ್ಯ ಪ್ರಕಟಿಸಿದರು.

ನೂತನ ಅಧ್ಯಕ್ಷೆ ಶಾಂತಮ್ಮ ಮಾತನಾಡಿ, “ಶಾಸಕರ ನೇತೃತ್ವದಲ್ಲಿ ಈಗಾಗಲೇ ಹಲವು ಅಭಿವೃದ್ದಿಯ ಕಾರ್ಯ ನೆಡೆಯುತ್ತಿದೆ. ಅವರ ಮಾರ್ಗದರ್ಶನದಲ್ಲಿ ಮುಂದಿನ ದಿನಗಳಲ್ಲಿ ಗ್ರಾಮದ ಅಭಿವೃದ್ಧಿಗೆ ಎಲ್ಲ ಸದ್ಯಸರ ಜೊತೆಗೂಡಿ ಒಕ್ಕೂಟ ಮತ್ತು ರಾಜ್ಯ ಸರ್ಕಾರದ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ವೇಗವನ್ನು ಕಲ್ಪಿಸಲಾಗುವುದು” ಎಂದು ಭರವಸೆ ನೀಡಿದರು.
ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.
ಇದನ್ನು ಓದಿದ್ದೀರಾ? ಮದ್ದೂರು | ಮುಂದಿನ ರಾಜ್ಯ ರಾಜಕಾರಣದಲ್ಲಿ ರೈತ ಸಂಘ ಸಕ್ರಿಯ ಪಾತ್ರವಹಿಸಲಿದೆ ; ಬಡಗಲಪುರ ನಾಗೇಂದ್ರ
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರ ಸುಪುತ್ರರಾದ ಮಂಜುನಾಥ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೌವಾಣ್, ಕೆ ಪಿ ಯೋಗರಾಜ್ ಕ್ಯಾತನಹಳ್ಳಿ, ನಟರಾಜ್ ಗೌಡಪ್ಪ, ತುಳಸಿದಾಸ್, ರವಿ ಕುಮಾರ್, ನಯನ, ದಿನೇಶ್ ಮಲ್ಲಿಗೆರೆ, ರಾಜು, ಪುನೀತ್ ಚೆಟ್ಟೆನಹಳ್ಳಿ, ಮಂಜು ಸೇರಿದಂತೆ ಗ್ರಾಮಸ್ಥರು ಇದ್ದರು.
ವರದಿ: ರಂಗನಾಥ್ ಮಾಕವಳ್ಳಿ