ಪಾಂಡವಪುರ | ಅಂಬೇಡ್ಕರ್ ಜಯಂತಿ ರದ್ದು; ಪ್ರತಿಭಟನೆ

Date:

ಮಂಡ್ಯ ಜಿಲ್ಲೆ, ಪಾಂಡವಪುರದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜಯಂತಿ ಕಾರ್ಯಕ್ರಮ ರದ್ದಾಗಿದೆ.

- Advertisement -

ಅಂಬೇಡ್ಕರ್ ಫೋಟೋ ಪಕ್ಕದಲ್ಲಿ ಬಾಬು ಜಗಜೀವನ್ ರಾಮ್ ಭಾವಚಿತ್ರವಿರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಎಡಗೈ, ಬಲಗೈ ಮುಖಂಡರ ನಡುವೆ ವಾಗ್ ವಾದ ನಡೆದು ಅಂಬೇಡ್ಕರ್ ಭಾವಚಿತ್ರದ ಪಕ್ಕದಲ್ಲಿ ಬಾಬುಜೀ ಭಾವಚಿತ್ರ ಇರಿಸಿದ್ದಕ್ಕೆ ದಸಂಸ ಸೇರಿದಂತೆ ಹಲವು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪ್ರತಿಭಟನಾಕಾರರು ಮಾತನಾಡಿ, ಏಪ್ರಿಲ್.5ರಂದು ಡಾ. ಬಾಬು ಜಗಜೀವನ್ ರಾಮ್ ಅವರ ಜಯಂತಿಯನ್ನು ತಾಲ್ಲೂಕು ಆಡಳಿತದ ಆಯೋಜನೆಯಲ್ಲಿಯೇ ವಿಜೃಂಭಣೆಯಿಂದ ಮಾಡಿದ್ದೇವೆ. ಇಂದು ಅಂಬೇಡ್ಕರ್ ಜಯಂತಿ, ಸರ್ಕಾರಿ ಕಾರ್ಯಕ್ರಮ. ಹೀಗಿರುವಾಗ, ತಾಲ್ಲೂಕು ಆಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬರ ಫೋಟೋ ಇರಬೇಕಿತ್ತು. ಅವರ ಜೊತೆಯಲ್ಲಿ ಬಾಬುಜೀ ಅವರ ಫೋಟೋ ಇರಿಸಿದ್ದು ಸರಿಯಲ್ಲ. ಯಾಕಂದ್ರೆ ಯಾವತ್ತೂ ಒಟ್ಟುಗೂಡಿಸಿ ಜಯಂತಿ ಮಾಡಿಲ್ಲ. ತಾಲ್ಲೂಕು ಆಡಳಿತದ ನಿರ್ಲಕ್ಷ್ಯತನದಿಂದ ಬಾಬಾ ಸಾಹೇಬರ ಜಯಂತಿ ರದ್ದು ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ?ಚಾಮರಾಜನಗರ | ಡಾ. ಬಿ.ಆರ್. ಅಂಬೇಡ್ಕರ್ ಜೀವನಸಾಧನೆ, ವಿಚಾರಧಾರೆಗಳ ಜಾಗೃತಿ ಅಗತ್ಯ: ಶ್ರೀರೂಪ

ಕಾರ್ಯಕ್ರಮ ರದ್ದು ಮಾಡುವ ಮೂಲಕ ತಹಶೀಲ್ದಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಅಂಬೇಡ್ಕರ್ ಅವರಿಗೆ ಅವಮಾನ ಎಸಗಿದ್ದಾರೆ. ಇದು ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನ ಇದನ್ನ ದಸಂಸ, ತಾಲ್ಲೂಕಿನ ಸಂಘಟನೆಗಳು ಖಂಡಿಸುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...