ಬೀದರ್‌ | ಮದುವೆಗೆ ಒಪ್ಪದ ಪೋಷಕರು : ನೇಣಿಗೆ ಶರಣಾದ ಪ್ರೇಮಿಗಳು

Date:

Advertisements

ಮನೆಯಲ್ಲಿ ಮದುವೆಗೆ ಒಪ್ಪದ ಕಾರಣಕ್ಕೆ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಬೀದರ್‌ ತಾಲೂಕಿನ ತಾಲೂಕಿನ ಸಿರ್ಸಿ(ಎ) ಗ್ರಾಮದಲ್ಲಿ ನಡೆದಿದೆ.

ಧನರಾಜ್ ರಾಮಣ್ಣ ಬಂಡೆಕರ್ (22) ಹಾಗೂ ಭಾಗ್ಯಶ್ರೀ (18) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.

ಒಂದೇ ಗ್ರಾಮದವರಾದ ಇಬ್ಬರು ಕಳೆದ ಕೆಲವು ತಿಂಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಯುವಕ ಬೀದರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದನು. ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ವಾಸವಿದ್ದು ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.

Advertisements

ಶುಕ್ರವಾರ ಸಾಯಂಕಾಲ ಯುವತಿಯನ್ನು ಹಾಸ್ಟೆಲ್ ನಿಂದ ಕರೆದುಕೊಂಡು ಬಂದ ಯುವಕ ಗ್ರಾಮದ ಹೊರವಲಯದ ಔರಾದ್(ಎಸ್) ರಸ್ತೆಯಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನ್ಯ ಸಮುದಾಯಕ್ಕೆ ಸೇರಿದವರಾಗಿದ್ದ ಕಾರಣಕ್ಕೆ ಮನೆಯಲ್ಲಿ ಮದುವೆಗೆ ಒಪ್ಪದ ಹಿನ್ನಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಬಗದಲ್ ಪೊಲೀಸ್ ಠಾಣೆ ಪಿಎಸ್ಐ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಗದಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರ್ಲಕ್ಷ್ಯಕ್ಕೆ ಗುರಿಯಾಗಿ ದುಸ್ಥಿತಿಗೆ ಬಿದ್ದ ರಾಜ್ಯ ಹೆದ್ದಾರಿ; ಶಾಸಕರ ವಿರುದ್ಧ ಸಾರ್ವಜನಿಕರ ಆಕ್ರೋಶ

ಕಲಬುರಗಿ ಜಿಲ್ಲೆಯ ರಾಜ್ಯ ಹೆದ್ದಾರಿ 125, ಶಹಾಬಾದ್ ತಾಲೂಕಿನಿಂದ ಜೇವರ್ಗಿಯ ರಾಷ್ಟ್ರೀಯ...

ಕಲಬುರಗಿ | ಬೆಳೆ ಹಾನಿ: ಎಕರೆಗೆ 25 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಿ ಎಐಕೆಕೆಎಂಎಸ್‌ ಪ್ರತಿಭಟನೆ

ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರವನ್ನು ಬಿಡುಗಡೆ...

ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ...

ಕೋಲಾರ | ರಸ್ತೆ ವಿಸ್ತರಣೆಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ; ಕುರ್ಕಿ ರಾಜೇಶ್ವರಿ ಆರೋಪ

ಕೋಲಾರ ತಾಲೂಕಿನ ನರಸಾಪುರ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ...

Download Eedina App Android / iOS

X