ಕೊಡಗು | ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ : ಶಾಸಕ ಎ ಎಸ್ ಪೊನ್ನಣ್ಣ

Date:

Advertisements

ಕೊಡಗು ಜಿಲ್ಲೆ, ಮಡಿಕೇರಿ ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಎ ಎಸ್ ಪೊನ್ನಣ್ಣ ಮಾತಾನಾಡಿ ಸರ್ಕಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ, ಮೀಸಲಾತಿ ಹಾಗೂ ಸರ್ಕಾರದ ಕಾರ್ಯಕ್ರಮ ರೂಪಿಸಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಆದುದರಿಂದ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧಿಸಿದಂತೆ ಅಪಪ್ರಚಾರ ಮಾಡುತ್ತಿದ್ದು, ರಾಜಕೀಯ ಪ್ರೇರಿತವಾಗಿದೆ. ಸಂವಿಧಾನ ಅರ್ಥ ಮಾಡಿಕೊಳ್ಳುವವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುವುದಿಲ್ಲ. ಸಂವಿಧಾನದ ಬಗ್ಗೆ ಗೌರವ ಇಲ್ಲದವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಡಿ ಎಂದು ಬಹಿರಂಗವಾಗಿ ಹೇಳುತ್ತಾರೆ. ಕೇಂದ್ರದವರು ಜಾತಿವಾರು ಜನಗಣತಿ ಮಾಡಲು ಮುಂದಾಗುತ್ತಿದ್ದಾರೆ. ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವುದು ಜಾತಿ ಸಮೀಕ್ಷೆಯಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಹಿಂದುಳಿದ ವರ್ಗಗಳನ್ನು ಗುರುತಿಸುವುದಾಗಿದೆ. ಯಾರೂ ಹಿಂದುಳಿದಿದ್ದಾರೆ ಅವರನ್ನು ಪತ್ತೆಹಚ್ಚಿ ಕಾನೂನು ಜಾರಿಮಾಡಿ ಕಾರ್ಯಕ್ರಮ ರೂಪಿಸುವುದು ಸರ್ಕಾರದ ಆಶಯವಾಗಿದೆ. ಸಂವಿಧಾನದ ಮೂಲಕವೇ ಸಮಾನತೆ ತರುವುದು ಸರ್ಕಾರದ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಯಾರೂ ಹಿಂದುಳಿದಿದ್ದಾರೆ. ಅವರಿಗೆ ವಿಶೇಷ ಕಾರ್ಯಕ್ರಮಗಳನ್ನು ಜಾರಿಗೆ ತರುವುದು, ಮೀಸಲಾತಿ ನೀಡುವುದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಉದ್ದೇಶವಾಗಿದೆ ಎಂದು ಹೇಳಿದರು.

ಸರ್ಕಾರ ಪ್ರತೀ ಹತ್ತು ವರ್ಷಕ್ಕೊಮ್ಮೆ ಗಣತಿ ಕಾರ್ಯ ನಡೆಸಬೇಕು ಎಂದು ಹೇಳಿದೆ. ಪುನರ್ ಪರಿಶೀಲನಾ ಕಾರ್ಯವು ಸಹ ಆಗಬೇಕಿದೆ. ಆ ನಿಟ್ಟಿನಲ್ಲಿ ಕಾಂತರಾಜು ವರದಿ, ಜಯಪ್ರಕಾಶ್ ಹೆಗ್ಡೆ ಆಯೋಗ, ಈಗ ಮಧುಸೂದನ್ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಸಮೀಕ್ಷೆಯನ್ನು ಸ್ವಾಗತಿಸಬೇಕು.ಆದರೇ ಅಪಪ್ರಚಾರದ ಮೂಲಕ ದಾರಿ ತಪ್ಪಿಸಬಾರದು. ಯಾರು ಹಿಂದುಳಿದಿದ್ದಾರೆ ಅವರನ್ನು ಗುರುತಿಸುವ ಕೆಲಸ ನಡೆಯುತ್ತಿದ್ದು, ರಾಜಕೀಯ ಬಿಟ್ಟು ಎಲ್ಲರೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ನ್ಯಾಯಾಲಯವು ಸಹ ಸಮೀಕ್ಷೆಯನ್ನು ಮುಂದುವರಿಸಬಹುದಾಗಿದೆ ಎಂದು ಹೇಳಿದೆ. ಇದು ಜಾತಿ ಸಮೀಕ್ಷೆಯಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿದ್ದು, ವೈಜ್ಞಾನಿಕವಾಗಿದೆ. ರಾಜ್ಯದಲ್ಲಿ 2 ಕೋಟಿಗೂ ಹೆಚ್ಚು ಮನೆಗಳ ಸಮೀಕ್ಷೆ ನಡೆಯುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ 70 ರಿಂದ 80 ಮನೆಗಳು, ನಗರ ಪ್ರದೇಶದಲ್ಲಿ 110 ರಿಂದ 120 ಮನೆಗಳ ಸಮೀಕ್ಷೆಗೆ ಒಬ್ಬ ಸಮೀಕ್ಷೆದಾರರನ್ನು ನಿಯೋಜಿಸಲಾಗಿದೆ. ಜೊತೆಗೆ ಜಿಯೋ ಟ್ಯಾಗ್‍ನ್ನು ಬಳಸಲಾಗಿದೆ. ಹಾಗೆಯೇ, ಆನ್‍ಲೈನ್ ಮೂಲಕವು ಸ್ವತಃ ಅವರವರೇ ಸಮೀಕ್ಷೆಯಲ್ಲಿ ದಾಖಲು ಮಾಡಿಕೊಳ್ಳಬಹುದಾಗಿದೆ ಎಂದರು.

ರಾಜ್ಯದ ಪ್ರತಿಯೊಬ್ಬ ನಾಗರಿಕರಿಗೂ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸುವುದು ಹಾಗೂ ಸಮ ಸಮಾಜ ನಿರ್ಮಾಣ ಮಾಡಲು ಸಮೀಕ್ಷೆ ಕೈಗೊಳ್ಳಲಾಗಿದೆ. ಸರ್ಕಾರ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯನ್ನು ಸಹ ಜಾರಿಗೊಳಿಸಿದೆ. ನಲುವತ್ತು ವರ್ಷದ ಹೋರಾಟದ ಫಲವಾಗಿದೆ. ಒಳ್ಳೆಯ ಕಾರ್ಯಕ್ರಮ ರೂಪಿಸುವುದು. ಹಿಂದುಳಿದ ವರ್ಗಗಳನ್ನು ಮೇಲೆತ್ತುವುದು ಸಮೀಕ್ಷೆಯ ಉದ್ದೇಶವಾಗಿದೆ ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು ದಸರಾ | ಡ್ರೋನ್ ಮೂಲಕ ಹುಲಿಯ ಕಲಾಕೃತಿ; ವಿಶ್ವದಾಖಲೆ

ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಪ್ರಮುಖರಾದ ಕೊಲ್ಯದ ಗಿರೀಶ್, ಟಾಟು ಮೊಣ್ಣಪ್ಪ, ತೆನ್ನಿರಾ ಮೈನಾ, ಪಟ್ಟಡ ರಂಜಿ ಪೂಣಚ್ಚ, ಹಂಸ, ಇಸ್ಮಾಯಿಲ್, ಸೂರಜ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X