ಬಿಜೆಪಿ ಕಟ್ಟೋಣ, ಪಕ್ಷ ಬಿಟ್ಟವರು ಮೋದಿಗಾಗಿ ಮರಳಿ ಬನ್ನಿ: ಶೋಭಾ ಕರಂದ್ಲಾಜೆ ಮುಕ್ತ ಆಹ್ವಾನ

Date:

  • ರಾಜ್ಯದಲ್ಲಿ ಮತ್ತೆ ಬಿಜೆಪಿ ಕಟ್ಟಬೇಕು ಎಂಬುದು ನಮ್ಮ ಅಪೇಕ್ಷೆ
  • ‘ದೇಶಕ್ಕೆ ಪ್ರಧಾನಿ ಮೋದಿ ಬೇಕಾಗಿದೆ, ವಿಶ್ವಕ್ಕೂ ಮೋದಿ ಬೇಕಾಗಿದೆ’

ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಕಟ್ಟಬೇಕು ಎಂಬುದು ನಮ್ಮ ಅಪೇಕ್ಷೆ. ಯಾರೇ ಪಕ್ಷ ಬಿಟ್ಟಿದ್ದರೂ ಅವರೆಲ್ಲ ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಬಿಜೆಪಿಗೆ ವಾಪಸ್‌ ಬನ್ನಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮುಕ್ತ ಆಹ್ವಾನ ನೀಡಿದರು.

ಚಿಕ್ಕಮಗಳೂರಲ್ಲಿ ಮಾತನಾಡಿದ ಅವರು, “ಮೋದಿಗಾಗಿ, ದೇಶಕ್ಕಾಗಿ, ಮುಂದಿನ ಪೀಳಿಗೆಗಾಗಿ ನೀವೆಲ್ಲ ಬಿಜೆಪಿಗೆ ಮರಳಿ ಆಗಮಿಸಬೇಕು” ಎಂದು ಪರೋಕ್ಷವಾಗಿ ಜಗದೀಶ್‌ ಶೆಟ್ಟರ್‌ ಹಾಗೂ ಲಕ್ಷ್ಮಣ್‌ ಸವದಿ ಅವರಿಗೆ ಹೇಳಿದ್ದಾರಾ ಎನ್ನುವ ಪ್ರಶ್ನೆ ಮುನ್ನೆಲೆಗೆ ಬಂದಿದೆ.

“ಪಕ್ಷ ಬಿಟ್ಟು ಹೋದವರನ್ನು ಮತ್ತೆ ಬಿಜೆಪಿ ಜೊತೆ ಸೇರಿಸಿಕೊಂಡು ಪಕ್ಷವನ್ನು ಗಟ್ಟಿಯಾಗಿ ಮಾಡಬೇಡು. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಎಲ್ಲರೂ ಶ್ರಮ ವಹಿಸಬೇಕು. ದೇಶಕ್ಕೆ ಮೋದಿ ಬೇಕಾಗಿದೆ. ವಿಶ್ವಕ್ಕೂ ಮೋದಿ ಬೇಕಾಗಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಲ್ಕಿಸ್‌ ಕಾನೂನು ಸಮರ – ನ್ಯಾಯವ್ಯವಸ್ಥೆಯ ಅಣಕ

“ಈ ಹಿಂದೆ ನಮ್ಮ ಪಕ್ಷದ ತತ್ವ-ವಿಚಾರ ಒಪ್ಪಿ ಕೆಲವು ನಾಯಕರು ಬಿಜೆಪಿ ಸೇರಿದ್ದರು. ಅವರು ಇಲ್ಲೇ ಇರುತ್ತಾರೆ ಎನ್ನುವ ವಿಶ್ವಾಸವಿದೆ. ಅಧಿಕಾರಕ್ಕಾಗಿ ಬಂದರು, ಅಧಿಕಾರ ಇಲ್ಲದಾಗ ಹೋದರು ಎಂಬ ಕೆಟ್ಟ ಹೆಸರನ್ನು ಯಾರೂ ತೆಗೆದುಕೊಳ್ಳುವುದಿಲ್ಲ ಎನ್ನುವ ವಿಶ್ವಾಸವಿದೆ” ಎಂದು ಹೇಳಿದರು.

“ಯಾರೇ ಪಕ್ಷ ಬಿಟ್ಟಿದ್ದರೂ ಮೋದಿಗಾಗಿ ಪಕ್ಷಕ್ಕೆ ಸ್ವಾಗತವಿದೆ ಎನ್ನುವುದು ನನ್ನ ಪ್ರಾರ್ಥನೆ. ಪಕ್ಷ ಬಿಟ್ಟೋದವರ ಜೊತೆ ಸದ್ಯಕ್ಕೆ ಯಾವುದೇ ಮಾತುಕತೆ ನಡೆದಿಲ್ಲ. ಮೋದಿಯಂತ ನಾಯಕ ಈ ದೇಶಕ್ಕೆ ಮತ್ತೆ ಸಿಗಲ್ಲ, ದೇಶದ ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ I.N.D.I.A ಹಾಗೂ ಯಾವ ಪಕ್ಷದಲ್ಲೂ ಮೋದಿಯಂತಹ ನಾಯಕ ಸಿಗಲ್ಲ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತಗಟ್ಟೆಯ ಮತದಾನದ ಅಂಕಿಅಂಶ ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲು ಸುಪ್ರೀಂ ನಕಾರ

ಪ್ರತಿ ಮತಗಟ್ಟೆಯ ಮತದಾನದ ಅಂಕಿಅಂಶಗಳನ್ನು ಒದಗಿಸುವ ಫಾರ್ಮ್‌ 17ಸಿ ಪ್ರತಿಗಳನ್ನು ತನ್ನ...

ವಿಜಯಪುರ | ರೈತರ ಸಮಸ್ಯೆಗಳ ಪರಿಹಾರಕ್ಕೆ ರೈತಸಂಘ ಆಗ್ರಹ

ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...

ಮೇ ಸಾಹಿತ್ಯ ಮೇಳ | ಹುಚ್ಚಮ್ಮ ಚೌಧರಿ ಕುಣಿಕೇರಿಗೆ ‘ಲಕ್ಷ್ಮಿಬಾಯಿ ಕಟ್ಟಿಮನಿ ಸಮಾಜಮುಖಿ ಮಹಿಳೆ ಪ್ರಶಸ್ತಿ’

ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ರಾಜ್ಯದ ಸಾಹಿತ್ಯ-ಸಾಂಸ್ಕೃತಿಕ ಚಳುವಳಿಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ...

ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್ ರದ್ದುಗೊಳಿಸಲು ಪ್ರಕ್ರಿಯೆ ಆರಂಭ: ಸಚಿವ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವ ಕುರಿತು ನಾವು...