ಉಡುಪಿ | ಹಿಂದೂ ರಾಷ್ಟ್ರದ ಸಂವಿಧಾನದ ಬಗ್ಗೆ ಪೇಜಾವರ ಶ್ರೀ ಹೇಳಿದ್ದೇನು ?

Date:

ಅಖಂಡ ಹಿಂದೂ ರಾಷ್ಟ್ರ ಕಲ್ಪನೆಯ ಸಂವಿಧಾನ ಸಿದ್ಧ ಪಡಿಸಿರುವ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಕುಂಭಮೇಳದಲ್ಲಿನ ಸಂತ ಸಮಾವೇಶದಲ್ಲಿ ನಾವು ಪರಿಪೂರ್ಣವಾಗಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

- Advertisement -

ಪೆರ್ಣಂಕಿಲ ದೇವಸ್ಥಾನದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಇಂದು ದೇವಾಲಯಗಳು ಸರಕಾರದ ಕಪಿಮುಷ್ಠಿಯಲ್ಲಿದೆ. ಜೀರ್ಣೋದ್ದಾರ ಪ್ರಕ್ರಿಯೆಗಳು ನಡೆಯುತ್ತಿಲ್ಲ. ಪರಿಚಾರಕ ವರ್ಗಕ್ಕೆ ಸೂಕ್ತ ಸಂಭಾವನೆ ಸಿಗುತ್ತಿಲ್ಲ. ಭಕ್ತರ ಕಾಣಿಕೆ ಸದ್ವಿನಿಯೋಗ ಆಗುತ್ತಿಲ್ಲ. ಅಂತಹ ಅನೇಕ ಆಕ್ಷೇಪಗಳಿವೆ. ಆದುದರಿಂದ ಸನಾತನ ಬೋರ್ಡ್ ಜಾರಿಗೆ ಬರಬೇಕು. ದೇಗುಲದ ಸಂಪತ್ತಿಂದ ಊರಿಗೆ ಶಿಕ್ಷಣ ಆಗಬೇಕು ಮತ್ತು ವೈದ್ಯಕೀಯಕ್ಕೆ ಹಣ ಬಳಕೆಯಾಗಬೇಕು. ಇದೆಲ್ಲ ಸನಾತನ ಬೋರ್ಡ್‌ನಿಂದ ಮಾತ್ರ ಸಾಧ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಗೋ ಸಂಪತ್ತು ರಕ್ಷಣೆಗೆ ವಿಷ್ಣು ಸಹಸ್ರನಾಮ ಅಭಿಯಾನಕ್ಕೆ ಅನೇಕ ಪೀಠಾಧಿಪತಿಗಳು, ಮಠಾಧಿಪತಿಗಳು, ಸಂತರು ಹಾಗೂ ಸಮಾಜದಿಂದ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಒಂದು ಹಂತದ ಅಭಿಯಾನ ನಡೆದಿದೆ. ಸರಕಾರ ಇದಕ್ಕೆ ಬಗ್ಗದಿದ್ದರೆ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಕುಂಭಮೇಳದ ಬಗ್ಗೆ ಖರ್ಗೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಇದಕ್ಕೆ ನಾವು ಯಾವುದೇ ಪ್ರತಿಕ್ರಿಯೆ ಕೊಡಲ್ಲ. ಈ ಹೇಳಿಕೆ ಬಾಲಿಷವಾಗಿದೆ. ಕುಂಭಮೇಳದಲ್ಲಿ ಲಕ್ಷಾಂತರ ಮಂದಿ ಭಾಗಿಗಳಾಗುತ್ತಿದ್ದಾರೆ. ಇಲ್ಲಿ ಮಿಂದ ಲಕ್ಷಾಂತರ ಮಂದಿಯನ್ನು ಮೂರ್ಖರು ಎಂದು ಹೇಳಿದಂತೆ ಆಗುತ್ತದೆ ಎಂದು ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...